ಗಾಯಗೊಂಡ ರಿಕ್ಷಾ ಚಾಲಕನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ : ಗೃಹ ಸಚಿವ
Wednesday, November 23rd, 2022
ಮಂಗಳೂರು : ಕುಕ್ಕರ್ ಬಾಂಬ್ ಘಟನೆಯಿಂದ ಗಾಯಗೊಂಡ ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರ ಭರಿಸಲಿದೆ. ಅವರ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡುವ ಬಗ್ಗೆ ಮುಂದೆ ನಿರ್ಣಯಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆರೋಪಿ ಶಾರೀಕ್ ಆರೋಗ್ಯ ಸುಧಾರಣೆಯಾದ ಬಳಿಕವಷ್ಟೇ ಆತನ ವಿಚಾರಣೆ ಸಾಧ್ಯವಾಗಲಿದೆ. ಎಂಟು ಮಂದಿ ತಜ್ಞ ವೈದ್ಯರು ಆತನಿಗೆ ಚಿಕಿತ್ಸೆ ನೀಡುತ್ತಿದ್ದು, ಎಲ್ಲಾ ವೈದ್ಯರೊಂದಿಗೆ ಮಾತನಾಡಿದ್ದೇನೆ ಎಂದವರು ಹೇಳಿದರು ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, […]