ಗ್ರಾಮಾಂತರ ರಿಕ್ಷಾಗಳ ನಗರ ಪ್ರವೇಶ ವಿರೋಧಿಸಿ ವಿವಿಧ ರಿಕ್ಷಾ ಸಂಘಟನೆಗಳಿಂದ ಪ್ರತಿಭಟನೆ

Friday, July 12th, 2013
auto drivers protest

ಮಂಗಳೂರು: ಗ್ರಾಮಾಂತರ ರಿಕ್ಷಾಗಳು ಮಂಗಳೂರು ನಗರವನ್ನು ಪ್ರವೇಶಿಸುವುದನ್ನು ವಿರೋಧಿಸಿ ಮಂಗಳೂರಿನ ವಿವಿಧ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಶುಕ್ರವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜ್ಯೊತಿ ವೃತ್ತ ದಿಂದ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ದ.ಕ ಜಿಲ್ಲಾ ಆಟೋರಿಕ್ಷಾ ಸಮನ್ವಯ ಸಮಿತಿಯ ಅಧ್ಯಕ್ಷರಾದ ಅಲಿಹಸನ್ ಮಾತನಾಡಿ,  ಗ್ರಾಮಾಂತರ ರಿಕ್ಷಾಗಳು ಕಾನೂನು ಬಾಹಿರವಾಗಿ ನಗರದೊಳಗೆ ಪ್ರವೇಶಿಸಿ ಬಾಡಿಗೆ ಮಾಡುತ್ತಿದೆ.  ಗ್ರಾಮದಲ್ಲಿ ಸುಮಾರು 20  ಸಾವಿರ ರಿಕ್ಷಾಗಳು ಒಡಾಡುತ್ತಿವೆ. […]

ಸದ್ಯದಲ್ಲೇ ದುಬಾರಿಯಾಗಲಿರುವ ಆಟೋರಿಕ್ಷಾ ಪ್ರಯಾಣ ದರ

Thursday, September 29th, 2011
Channappa-Gowda

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್‌.ಎಸ್‌. ಚನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ಹಿನ್ನಲೆಯಲ್ಲಿ ಆಟೋರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಆಟೋರಿಕ್ಷಾ ಚಾಲಕರ ಸಂಘಟನೆಗಳ ಪ್ರತಿನಿಧಿಗಳು, ಅಟೋ ಚಾಲಕರು, ಮಾಲಕರು, ಹಾಗೂ ಬಳಕೆ ದಾರರು ಭಾಗವಹಿಸಿದ್ದರು. ಪೆಟ್ರೋಲ್‌ ದರ ಏರಿದೆ. ಖರ್ಚು ಶೇ. 40ರಷ್ಟು ಏರಿಕೆಯಾಗಿದೆ. ಕನಿಷ್ಠ ಪ್ರಯಾಣ ದರ ಮತ್ತು ಪ್ರತೀ ಕಿ.ಮೀ. ಗೆ ಈಗ ಇರುವ ದರವನ್ನು […]