ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಖ್ಯಾತ ನಟ ರಿಷಿ ಕಪೂರ್ ನಿಧನ
Thursday, April 30th, 2020ಮುಂಬೈ : ಅಮೆರಿಕದಲ್ಲಿ ಕಳೆದ ವರ್ಷ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದ ರಿಷಿ ಕಪೂರ್ ಆಗಾಗ್ಗೆ ಅನಾರೋಗ್ಯದ ಸಮಸ್ಯೆಗೆ ಒಳಗಾಗುತ್ತಿದ್ದರು. ಬುಧವಾರ ಬೆಳಿಗ್ಗೆ ಅವರನ್ನು ಮುಂಬೈನ ಎಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ರಿಷಿ ಕಪೂರ್ ಅವರು ಕ್ಯಾನ್ಸರ್‌ಗೆ ತುತ್ತಾಗಿರುವುದು 2018ರಲ್ಲಿ ಪತ್ತೆಯಾಗಿತ್ತು. ಬಳಿಕ ಅಮೆರಿಕಕ್ಕೆ ತೆರಳಿ ಸುಮಾರು ಒಂದು ವರ್ಷ ಚಿಕಿತ್ಸೆ ಪಡೆದುಕೊಂಡ ನಂತರ ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಮರಳಿದ್ದರು. ಫೆಬ್ರವರಿಯಲ್ಲಿ ಅನಾರೋಗ್ಯದಿಂದ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. […]