ಮುಜರಾಯಿ ಇಲಾಖೆಯ ಕಾಯಕಲ್ಪಕ್ಕೆ ಆಧ್ಯತೆ: ಸಚಿವ ಲಮಾಣಿ
Friday, October 28th, 2016ಸುಬ್ರಹ್ಮಣ್ಯ: ರಾಜ್ಯದಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ 60ಕ್ಕೂ ಮಿಕ್ಕಿ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿಯು ರಚನೆಯಾಗಿದೆ. ಮುಜರಾಯಿ ಇಲಾಖೆ ತುಂಬಾ ಮುಜುಗರ ಇರುವ ಇಲಾಖೆಯಾಗಿದೆ. ಹೆಚ್ಚಿನ ದೇವಸ್ಥಾನಗಳಲ್ಲಿ ಸಿಬ್ಬಂಧಿ ಸೇರಿದಂತೆ ಮೂಲಭೂತ ಸೌಕರ್ಯದ ಕೊರತೆಯಿದೆ. ನಾನು ಈ ಖಾತೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ರಾಜ್ಯದ ಎಲ್ಲಾ ದೇವಸ್ಥಾನಗಳಿಗೆ ಕಾಯಕಲ್ಪ ನೀಡಲು ಆಧ್ಯತೆ ನೀಡುತ್ತೇನೆ ಎಂದು ಜವುಳಿ ಮತ್ತು ಮುಜರಾಯಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು. ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. […]