ರೆಡ್ ಅಲಟ್೯ ಜಿಲ್ಲೆಗಳಲ್ಲಿ ಸರ್ಕಾರದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು: ಸಚಿವ ಆರ್. ಅಶೋಕ್

Thursday, July 7th, 2022
R Ashok

ಮಂಗಳೂರು : ರೆಡ್ ಅಲರ್ಟ್ ಘೋಷಣೆಯಾಗಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಸರ್ಕಾರದಿಂದ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಹಾಗೂ ಮುಖ್ಯಮಂತ್ರಿಗಳು, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ಅವರು ತಿಳಿಸಿದರು. ಅವರು ಜು.7ರ ಗುರುವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮುಂದೆ ಕಡಲ್ಕೊರೆತ […]

ಭಾರಿ ಮಳೆ : ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನ ರೆಡ್ ಅಲರ್ಟ್

Monday, May 16th, 2022
Mangalore Rain

ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲಾಧಿಕಾರಿಗಳು ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ್ದಾರೆ. 16 ಮೇ ಮಧ್ಯಾಹ್ನದ ವರದಿಯ ಪ್ರಕಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 17 ಮತ್ತು 19 ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಅನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ. ಮೇ 18 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಉಡುಪಿ ಮತ್ತು ದಕ್ಷಿಣ […]

ದ.ಕ. ಜಿಲ್ಲೆಯಲ್ಲಿ ಜುಲೈ 19 ರಂದು ರೆಡ್ ಅಲರ್ಟ್, 20ರಿಂದ 22ರವರೆಗೆ ಆರೆಂಜ್ ಅಲರ್ಟ್

Sunday, July 18th, 2021
Mangalore Rain

ಮಂಗಳೂರು :  ಭಾರತೀಯ ಹವಾಮಾನ ಇಲಾಖೆಯು ಜುಲೈ 19 ರಂದು  ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಬಾರಿ ಮಳೆ ಇರಲಿದೆ  ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ರೆಡ್ ಅಲರ್ಟ್ ಘೋಷಣೆ

Thursday, October 24th, 2019
red-alert

ಮಂಗಳೂರು : ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ  ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಭಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಸೂಕ್ತ ಎಚ್ಚರಿಕೆ ವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ವಾಯುಭಾರ ಕುಸಿತ ಪ್ರಭಾವದಿಂದ ಕೇರಳ-ಕರ್ನಾಟಕ ಕರಾವಳಿ ಮತ್ತು […]

ಕರಾವಳಿಯಲ್ಲಿ ಮತ್ತೆ ರೆಡ್‌ ಅಲರ್ಟ್‌ ಘೋಷಣೆ

Wednesday, October 23rd, 2019
Red-Alert

ಮಂಗಳೂರು : ಕರಾವಳಿ ಭಾಗದಲ್ಲಿ ಮಂಗಳವಾರ ಮಳೆ ತುಸು ಕ್ಷೀಣಿಸಿತ್ತು. ಆದರೆ ಬುಧವಾರ ಮತ್ತು ಗುರುವಾರಕ್ಕೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅ.23 ಮತ್ತು 24ರಂದು ಕರಾವಳಿ ಯಲ್ಲಿ ಬಿರುಸಿನಿಂದ ಕೂಡಿದ ಮಳೆಯಾಗುವುದು ಸಂಭವನೀಯ. ಗುಡುಗು, ಸಿಡಿಲು ಸಹಿತ ಜೋರಾಗಿ ಗಾಳಿ ಬೀಸಲಿದೆ. ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ಲೈಫ್‌ಗಾರ್ಡ್‌ನವರು ಕಾರ್ಯನಿರ್ವಹಿಸುತ್ತಿದ್ದಾರೆ. ಮಂಗಳವಾರದಂದು ಉತ್ತಮ ಮಳೆಯಾಗಬಹುದು […]

ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Tuesday, October 22nd, 2019
Red-Alert

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವೆಗೂ ಮುಂದುವರಿಯಲಿದೆ. ಈ ಸಂದರ್ಭ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ […]

ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Thursday, September 5th, 2019
kodagu

ಮಡಿಕೇರಿ : ಇಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರದಿಂದಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ದೊರೆತ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಶಾಲಾ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಿದ್ದಾರೆ. ಭಾನುವಾರ ಸಂಜೆಯಿಂದಲೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗು ವಿಪತ್ತು ನಿರ್ವಹಣಾ ಆಡಳಿತ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 204.5 ಮಿಲಿ ಮೀಟರ್ ಮಳೆಯಾಗಲಿದೆ. ಜೊತೆಗೆ ಮಡಿಕೇರಿ ಹಾಗೂ ಕುಶಾಲನಗರದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ […]

ಮುಂದಿನ 48 ಗಂಟೆಗಳಲ್ಲಿ ಬಾರೀ ಮಳೆ ; ಆಗಸ್ಟ್ 7 ರಂದು ಶಾಲಾ ಕಾಲೇಜುಗಳಿಗೆ ರಜೆ

Tuesday, August 6th, 2019
Rain

ಮಂಗಳೂರು  : ಮುಂದಿನ 48 ಗಂಟೆಗಳಲ್ಲಿ ಬಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) (ಆ.7)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.7ರಿಂದ ಎರಡು ದಿನ ರೆಡ್ ಅಲರ್ಟ್

Tuesday, August 6th, 2019
house-collapse

ಮಂಗಳೂರು:  ಆ.7ರಿಂದ ಎರಡು ದಿನ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಿ ರುವುದಾಗಿ ದ.ಕ ಜಿಲ್ಲಾಧಿ ಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಅಲ್ಲಲ್ಲಿ ಗುಡ್ಡಕುಸಿತ, ರಸ್ತೆಗೆ ಮರ ಬಿದ್ದಿದ್ದು, ಕಡಲ್ಕೊರೆತವು ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದರು. ನೆರೆ ಪೀಡಿತ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕು. ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಿ ಎಂದು ಜಿಲ್ಲಾಧಿಕಾರಿ ಮಾಹಿತಿ […]