ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲ ಪ್ರೊ. ಎ.ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ, 6 ಮಂದಿ ದೋಷಿ ಎಂದು ಕೋರ್ಟ್ ತೀರ್ಪು

Thursday, September 28th, 2023
Ramakrishna-R

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಪ್ರೊ. ಎ. ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿರುವ ಹೈಕೋರ್ಟ್ ಅವರನ್ನು ದೋಷಿಗಳೆಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಈ […]

ರಾಮನಗರ : ಮುಂಜಾನೆ ವೇಳೆಯಲ್ಲಿ ರೌಡಿಶೀಟರ್ ಮೇಲೆ ಗುಂಡೇಟು

Friday, August 30th, 2019
rama-nagara

ರಾಮನಗರ : ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಒಬ್ಬನ ಮೇಲೆ ಪೊಲೀಸರು ರಾಮನಗರದಲ್ಲಿ ಬೆಳ್ಳಂಬೆಳಿಗ್ಗೆ ಫೈರಿಂಗ್ ನಡೆಸಿದ್ದಾರೆ. ರೌಡಿಶೀಟರ್ ರೇಣುಕಾ ಪ್ರಸಾದ್ ಗುಂಡೇಟು ತಿಂದ ಆರೋಪಿ. ಈ ಹಿಂದೆ ರೇಣುಕಾಪ್ರಸಾದ್ ಜೋಡಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದನು. ಇನ್ನೂ ನಾಲ್ಕೈದು ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದನು. ಕಳೆದ ವಾರವೂ ಕೊಲೆ ನಡೆದಿದ್ದು, ಅದರಲ್ಲೂ ರೇಣುಕಾಪ್ರಸಾದ್ ಭಾಗಿಯಾಗಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿಯೂ ರಾಮನಗರದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ವೃತ್ತದ ಬಳಿ ಇಬ್ಬರ ಮೇಲೆ ಮಾರಣಾಂತಿಕವಾಗಿ […]