ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಿಎಂ ಮನವಿ

Tuesday, September 7th, 2021
Bommai Delhi

ನವದೆಹಲಿ :  ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ- ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ […]