ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಪೊಲೀಸರ ಬಲೆಗೆ

Wednesday, November 29th, 2023
B-Manjunath-Poojary

ಕುಂದಾಪುರ : ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಆಲೂರಿನ ಆದಿತ್ಯ ಎಂಬವರು ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಈ ಬಗ್ಗೆ ಆದಿತ್ಯ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ […]

ಅಜ್ಜನ ಮರಣ ಪತ್ರಕ್ಕೆ ಲಂಚ ಪಡೆದ ಗ್ರಾಮ ಲೆಕ್ಕಿಗನನ್ನು ಬಂಧಿಸಿದ ಪೊಲೀಸರು

Friday, November 24th, 2023
Vijith

ಮಂಗಳೂರು : ಅಜ್ಜನ ಮರಣ ಪತ್ರವನ್ನು ಕೇಳಲು ಬಂದ ವ್ಯಕ್ತಿಗೆ ಸುಮಾರು 13 ಸಾವಿರ ರೂಪಾಯಿಗಳನ್ನು ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಚೇಳ್ಯಾರು ಗ್ರಾಮದ ವ್ಯಕ್ತಿಯೊಬ್ಬರು ತನ್ನ ತಾಯಿಯ ಹೆಸರಿನಲ್ಲಿದ್ದ ಜಾಗದಲ್ಲಿ 5 ಸೆಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಹಾಗೂ ಸಂತತಿ ನಕ್ಷೆ ಮಾಡಲು ಮುಂದಾಗಿದ್ದು ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು. ವಿಜಿತ್ ನ. 20 […]

ಲಂಚ ಸ್ವೀಕರಿಸುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳ ಬಂಧನ

Thursday, January 13th, 2022
UUDA

ಉಡುಪಿ : ಲಂಚ ಸ್ವೀಕರಿಸುತ್ತಿದ್ದ ಆರೋಪದಡಿಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳನ್ನು ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಭೂ ಪರಿವರ್ತನೆಗೆ ಸಂಬಂಧಿಸಿ ಪ್ರಾಧಿಕಾರದ ಅಧಿಕಾರಿಗಳು ಮೂರು ಲಕ್ಷ ರೂ. ಹಣದ ಬೇಡಿಕೆಯನ್ನು ಮುಂದಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ನೀಡಿದ ದೂರಿನಂತೆ ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಆರೋಪಿಗಳಾದ ಪ್ರಭಾರ ನಗರ ಯೋಜನಾ ಸದಸ್ಯ ಗುರುಪ್ರಸಾದ್, ಸಹಾಯಕ ನಗರ ಯೋಜನಾ ಸದಸ್ಯೆ ನಯೀಮ […]

ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಕ್ಲಾರ್ಕ್ ಎಸಿಬಿ ಬಲೆಗೆ

Tuesday, January 5th, 2021
Mohammed-Rafeeq

ಮಂಗಳೂರು: ನಗರದ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಎಸ್‌ಡಿಎ ಕ್ಲಾರ್ಕ್ ಒಬ್ಬರನ್ನು  ರೆಡ್ ‌ಹ್ಯಾಂಡ್‌ ಆಗಿ ಮಂಗಳವಾರ  ಬಂಧಿಸಿದ್ದಾರೆ. ಮೊಹಮ್ಮದ್ ರಫೀಕ್  (42) ಬಂಧಿತ ಆರೋಪಿಯಾಗಿದ್ದು, ಕಚೇರಿಯ ಕೆಲಸ‌‌ವೊಂದನ್ನು ಮಾಡಿಕೊಡಲು ಹಿರಿಯ ನಾಗರೀಕರೊಬ್ಬರಿಂದ 40 ಸಾವಿರ ರೂ. ಲಂಚದ‌ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಸಂತ್ರಸ್ತರು ದೂರು ದಾಖಲಿಸಿರುವ ಹಿನ್ನೆಲೆ ಆರೋಪಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಿ, ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು […]

ವಿಶೇಷ ಮಹಿಳಾ ತಹಶೀಲ್ದಾರ್ 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ

Tuesday, October 6th, 2020
Tahashidar Lakshmi

ಬೆಂಗಳೂರು: ದಕ್ಷಿಣ ತಾಲೂಕಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಮೀನಿನ ಆರ್ಟಿಸಿ ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.  ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರಿಗೆ ಎಂದು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಎಸಿಬಿ  ಡಿವೈ ಎಸ್ಪಿ ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ […]

ಅಲ್ಪಸಂಖ್ಯಾತನ ವಾಹನದ ಸಬ್ಸಿಡಿಗೆ ಲಂಚ ಕೇಳಿದ್ದ ಅಧಿಕಾರಿ, ಸಿಬ್ಬಂದಿ ಬಂಧನ

Tuesday, May 26th, 2020
bribe

ಗದಗ : ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಟ್ಯಾಕ್ಸಿ ಖರೀದಿಸಲು ನೀಡುವ ಮೂರು ಲಕ್ಷ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಕೇಳಿದ್ದ ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ಮತ್ತು ಆತನಿಗೆ ಸಹಕಾರ ನೀಡಿದ ಕಂಪ್ಯೂಟರ್‌ ಆಪರೇಟರ್‌ ನನ್ನು ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸರು ದಾಳಿ ನಡೆಸಿ ಮೇ.26 ಮಂಗಳವಾರ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. 2018-2019 ರ ಸಾಲಿನಲ್ಲಿ ದೂರುದಾರ ವಾಹನ ಚಾಲಕ ಫಾರುಖ್‌ಅಹ್ಮದ್ ಖಾನಸಾಬ ಬಿದರಕುಂದಿ ಎಂಬುವರು ಸಬ್ಸಿಡಿ ಹಣಕ್ಕಾಗಿ ಕೆಎಂಡಿಸಿ (ಕರ್ನಾಟಕ ಅಲ್ಪಸಂಖ್ಯಾತರ […]

ಲಂಚ ಸ್ವೀಕರಿಸಿದ ಕೊಕ್ಕಡ ಗ್ರಾಪಂ ಅಧ್ಯಕ್ಷ ಅಮಾನತು

Monday, May 13th, 2019
sebastian

ಮಂಗಳೂರು : ಕೊಕ್ಕಡ ಗ್ರಾಪಂ ಅಧ್ಯಕ್ಷ ವಿ.ಜೆ.ಸೆಬಾಸ್ಟಿಯನ್ ಅವರ ಅಧ್ಯಕ್ಷ ಸ್ಥಾನ ಮತ್ತು ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ ಹಾಗೂ ಉಪ ನಿರ್ದೇಶಕ ಮುಬಾರಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ. 2017-18ನೇ ಸಾಲಿನಲ್ಲಿ ನಡೆಸಿರುವ ವಿವಿಧ ಕಾಮಗಾರಿಗಳ ಹಣಕಾಸು ಮಂಜೂರು ಮಾಡಲು ಗುತ್ತಿಗೆದಾರ ಉಮರ್ ಅಲಿಯಾಸ್, ಇಬ್ರಾಹೀಂ ಎಂಬವರಿಗೆ 50 ಸಾವಿರ ರೂ. ಲಂಚ ನೀಡುವಂತೆ ವಿ.ಜೆ.ಸೆಬಾಸ್ಟಿಯನ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 20 ಸಾವಿರ […]

ಲಂಚ ಪಡೆಯುತ್ತಿದ್ದಾಗ ಗ್ರಾಮ ಕರಣಿಕ ಎಸಿಬಿ ಬಲೆಗೆ

Sunday, May 5th, 2019
VA

ಬೆಳ್ತಂಗಡಿ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಕರಣಿಕ ಮತ್ತು ಆತನ ಸಹಾಯಕ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆಬೆಳ್ತಂಗಡಿ ಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ಕಡಿರುದ್ಯಾವರ- ಮಿತ್ತಬಾಗಿಲು ಗ್ರಾಮ ಕರಣಿಕ ಮತ್ತು ಸಹಾಯಕ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಗ್ರಾಮ ಕರಣಿಕ ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರ್.ಟಿ.ಸಿ ಯೊಂದರ ಹೆಸರು ಬದಲಾವಣೆಗಾಗಿ ಲಂಚ […]

ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಇಲಾಖೆಯ ಸಿಬ್ಬಂದಿಗಳು ಎಸಿಬಿ ಬಲೆಗೆ

Friday, July 21st, 2017
acb

ಮಂಗಳೂರು: ಪುತ್ತೂರಿನ ವ್ಯಕ್ತಿಯೊಬ್ಬರು ಹೊಸ ಸಹಕಾರಿ ಸಂಘ ಮಾಡಲು ಸಂಬಂಧ ಪಟ್ಟ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಅವರಿಂದ ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಮತ್ತು ಚಾಲಕನನ್ನು ಎಸಿಬಿ ಬಂಧಿಸಿದೆ. ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಕೆ.ಮಂಜುನಾಥ್ ಮತ್ತು ಚಾಲಕ ರಾಧಾಕೃಷ್ಣ ಎಂಬವರು ಲಂಚ ಸ್ವೀಕಾರ ಮಾಡಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದವರು. ಪಡ್ನೂರಿನ ವಸಂತ್ ಎಂಬವರು ಹೊಸದಾಗಿ ಸಹಕಾರ ಸಂಘ ಮಾಡುವ ಕುರಿತು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಬಂಧಿತರು ಅದರ ಅನುಮತಿಗಾಗಿ 25ಸಾವಿರ ರೂ. ಬೇಡಿಕೆ […]

ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನೆ ಪುತ್ತೂರು ಉಪ ನಿರ್ದೇಶಕಿ ಎಸಿಬಿ ಬಲೆಗೆ

Thursday, April 13th, 2017
Town Planing officer

ಮಂಗಳೂರು: ಭೂ ಪರಿವರ್ತನೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ನಗರ ಯೋಜನೆ ಇಲಾಖೆ ಉಪ ನಿರ್ದೇಶಕರನ್ನು ಭ್ರಷ್ಟಾಚಾರ ನಿಗ್ರಹದಳ ಬಂಧಿಸಿದೆ. ಪುತ್ತೂರಿನ ಅರ್ಯಾಪು ಗ್ರಾಮದಲ್ಲಿ ವಾಸವಾಗಿರುವ ಪಿ.ಕೇಶವ ಸುವರ್ಣ ತಮ್ಮ ಜಮೀನನ್ನು ವಾಣಿಜ್ಯ ಪರಿವರ್ತನೆಗಾಗಿ ನಗರ ಅಭಿವೃದ್ಧಿ ಪ್ರಾಧಿಕಾರ, ಪುತ್ತೂರು ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಗರ ಯೋಜನೆ ಪುತ್ತೂರು ಉಪ ನಿರ್ದೇಶಕಿ ಲಾವಣ್ಯ ಎಂಬವರು ಸದರಿ ಜಮೀನನ್ನು ವಾಣಿಜ್ಯ ಪರಿವರ್ತನೆಗಾಗಿ ಎನ್ಓಸಿ ನೀಡಲು 10,000 ಹಣ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಅರ್ಜಿದಾರರು ಭ್ರಷ್ಟಾಚಾರ ನಿಗ್ರಹ […]