ಎಂಟು ತಿಂಗಳ ಹೆಣ್ಣು ಮಗುವನ್ನು ಕೊಲೆ ಮಾಡಿದ ತಂದೆ
Thursday, May 30th, 2019ಮಂಗಳೂರು : ತಂದೆಯೇ ಎಂಟು ತಿಂಗಳ ಹೆಣ್ಣು ಮಗುವನ್ನು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಬೋಳಾರ ಸಮೀಪ ನೇತ್ರಾವತಿ ನದಿ ದಡದಲ್ಲಿ ಸೋಮವಾರ ಮೇ 27ರಂದು ಎಂಟು ತಿಂಗಳ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ, ಕೊಪ್ಪಳ ಮೂಲದ ಲಕ್ಷ್ಮಣ ತೆಂಗಿನಹಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣ ತೆಂಗಿನಹಾಳ ಮತ್ತು ರೂಪಾ ದಂಪತಿ ಬೋಳಾರದಲ್ಲಿರುವ ಕಟ್ಟಡ ನಿರ್ಮಾಣ ಸಂಸ್ಥೆಯೊಂದರ ತಾತ್ಕಾಲಿಕ ಶೆಡ್ ನಲ್ಲಿ ಮಗುವಿನೊಂದಿಗೆ ವಾಸವಾಗಿದ್ದರು. […]