ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ಯಡಿಯೂರಪ್ಪ ಭರವಸೆ

Sunday, July 25th, 2021
BS Yediyurappa

ಬೆಳಗಾವಿ : ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ (ಜು.25) ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ […]

ಸರಕಾರಿ ಬಸ್‌ ಇನ್ಮೇಲೆ ರಾತ್ರಿಯೂ ಓಡುತ್ತವೆ, 30 ಪ್ರಯಾಣಿಕರಿಗೆ ಮಾತ್ರ ಅವಕಾಶ

Wednesday, May 27th, 2020
Ksrtc

ಹುಬ್ಬಳ್ಳಿ : ರಾಜ್ಯದ ಸಾರಿಗೆ ಸಂಸ್ಥೆಯ ಎಲ್ಲ ಬಸ್‌ ಗಳಲ್ಲಿ ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಕೇವಲ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಅವರು ಮೇ.26 ರಂದು ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದದರು. ಲಾಕ್‌ ಡೌನ್‌ ನಿಂದ ಸಾಮಾಜಿಕ ಅಂತರ ನಿಯಮ ಪಾಲನೆ ಅತೀ ಅಗತ್ಯವಾಗಿದ್ದರಿಂದ ಬಸ್‌ ಗಳಲ್ಲಿನ ಎಲ್ಲ ಸೀಟ್‌ ಗಳನ್ನು […]

ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ತೊಂದರೆಯಾದರೆ ತಕ್ಕ ಪಾಠ ಕಲಿಸಬೇಕಾಗುತ್ತೆ : ಲಕ್ಷ್ಮಣ ಸವದಿ ಎಚ್ಚರಿಕೆ

Wednesday, January 1st, 2020
lakshman

ಬೆಂಗಳೂರು : ಪ್ರಸ್ತುತ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರ ಭಾರೀ ಚರ್ಚೆಯಲ್ಲಿದೆ. ಈ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ಗಡಿ ರಕ್ಷಣೆಗೆ ಕೆಲವೇ ದಿನಗಳಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸದಸ್ಯರೊಬ್ಬರನ್ನು ನೇಮಕ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನಾವಶ್ಯಕ ಹೇಳಿಕೆ ಕೊಟ್ಟಿದ್ದಾರೆ. ಗಡಿ ವಿವಾದದ ಕುರಿತು ರಾಜ್ ಠಾಕ್ರೆ ಹೇಳಿಕೆ ಕೊಟ್ಟಿದ್ದರು. ಅದನ್ನು ಈಗ ಉದ್ದವ್ ಠಾಕ್ರೆಗೆ ನೆನಪು ಮಾಡಿಕೊಡುತ್ತಿದ್ದಾರೆ. ಅನಾವಶ್ಯಕವಾಗಿ ಗೊಂದಲ ಸೃಷ್ಟಿಸಿ […]

ಸಚಿವರಿಂದ ಸದನದಲ್ಲಿ ಬ್ಲೂಫಿಲ್ಮ್ ವೀಕ್ಷಣೆ, ಪಾಲೇಮಾರ್ ಕೂಡ ಬಾಗಿ

Wednesday, February 8th, 2012
watching porn Video at Assembly

ಬೆಂಗಳೂರು : ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಕುರಿತು ವಿಪಕ್ಷಗಳ ಸದಸ್ಯರು ಸರ್ಕಾರದ ಗಮನ ಸೆಳೆಯಲು ಗಂಭೀರವಾಗಿ ಮಾತನಾಡುತ್ತಿದ್ದ ವೇಳೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಅಶ್ಲೀಲ ದೃಶ್ಯಗಳನ್ನು ಒಳಗೊಂಡ ಬ್ಲೂಫಿಲ್ಮ್ ತನ್ನ ಮೊಬೈಲ್‌ನಲ್ಲಿ ವೀಕ್ಷಿಸಿ ಸಿಕ್ಕಿಬಿದ್ದ ಆಘಾತಕಾರಿ ಪ್ರಸಂಗ ಬೆಳಕಿಗೆ ಬಂದಿದೆ. ಶಾಸಕಾಂಗದ ಪರಮೋಚ್ಚ ಸ್ಥಳವಾದ ವಿಧಾನಸಭೆಯಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಾದಲ್ಲಿ ತಲೆತಗ್ಗಿಸುವಂಥ ಘಟನೆಯೊಂದು ನಡೆದಿದೆ. ದೇಶದಲ್ಲೇ ಇಂಥದೊಂದು ಹೀನ ಸಂಸ್ಕೃತಿಯ ಬೆಳವಣಿಗೆ ನಡೆದಿರುವುದು ಇದೇ […]