ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Thursday, August 15th, 2024
hebbalkar

ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ […]

ಮಳೆ, ನೆರೆ; ಜಿಲ್ಲಾಡಳಿತದಿಂದ ಸಮರ್ಥ ನಿರ್ವಹಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Sunday, July 21st, 2024
lakshimi-hebbalkar-visit

ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಅಧಿಕಾರಗಳೊಂದಿಗೆ ಭಾನುವಾರ ಭೇಟಿ ನೀಡಿದ ಸಚಿವರು, ಮಳೆ ಹಾನಿಯಿಂದ ಆದ ನಷ್ಟದ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧಾನ ಮಂಡಲ ಅಧಿವೇಶನ ನಡೀತಾ ಇದೆ. ಮಳೆ […]

ಮಳೆಗಾಲದಲ್ಲಿ ಅವಘಡ ಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Wednesday, June 12th, 2024
Lalshmi-Hebbalkar

ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡ ಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, […]

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಿಫಾರಸ್ಸು: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ : ಸಿಎಂ ಆದೇಶ

Thursday, February 8th, 2024
lakshmi-Hebbalkar

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ […]

ನೇಜಾರು ಕೊಲೆ ಪ್ರಕರಣ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, November 17th, 2023
Hebbalkar-Udupi

ಉಡುಪಿ : ಉಡುಪಿ ಜಿಲ್ಲೆಯ ನೇಜಾರು ಸಂತ್ರಸ್ತ ಕುಟುಂಬದ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೇಟಿ ನೀಡಿದರು. ಕಳೆದ ಭಾನುವಾರ ತಾಯಿ, ಮಗಳು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವರು ಅವರಿಗೆ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಗೆ ನ್ಯಾಯಕುಟುಂಬದ ನಾಲ್ಕ […]

ತುಲಾಭಾರದ ವೇಳೆ ಅವಘಡ, ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, November 3rd, 2023
lakshmi-hebbalkar

ಉಡುಪಿ : ತುಲಾಭಾರದ ವೇಳೆ ಆದ ಅವಘಡದ ಹಿನ್ನೆಲೆಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳ ಆರೋಗ್ಯದ ಕುರಿತಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀಗಳ ಆರೋಗ್ಯ ವಿಚಾರಿಸಿದರು. ಶ್ರೀಗಳ ಆಪ್ತ ಸಹಾಯಕರಿಗೆ ಕರೆ ಮಾಡಿ ಸ್ವಾಮೀಜಿಗಳ ಆರೋಗ್ಯ ಕುರಿತಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದರು. ಶ್ರೀಗಳಿಗೆ ಸಣ್ಣ ಗಾಯವಾಗಿದ್ದನ್ನು, ಗಾಭರಿಪಡುವಂತದ್ದು ಏನಿಲ್ಲ . ಈಗ ಆರೋಗ್ಯವಾಗಿದ್ದು, ನವದೆಹಲಿಯಿಂದ ಅಯೋಧ್ಯೆಯತ್ತ ಶ್ರೀಗಳು ಪ್ರಯಾಣಿಸುತ್ತಿದ್ದಾರೆ […]

ಸಮಾಜಕ್ಕಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, September 15th, 2023
Laxmi-Hebbalkar

ಬೆಳಗಾವಿ: ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಕೆಲಸ ಮಾಡಿದವರನ್ನು ಸಮಾಜ ಬಹುಬೇಗ ಮರೆಯುತ್ತದೆ. ಸಮಾಜಕ್ಕಾಗಿ, ಪ್ರಜೆಗಳ ಒಳಿತಿಗಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಅಸೋಸಿಯೇಶನ್ ಆಯೋಜಿಸಿದ್ದ ಎಂಜಿನಿಯರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಜೀವಿಗಳಿಗೆ ಸಾಧಿಸುವ ಛಲ ಇರುತ್ತದೆ. ಚಂದ್ರಯಾನ ಯಶಸ್ವಿ ಮಾಡುವಲ್ಲಿ ಶೇ.30ಕ್ಕಿಂತ ಹೆಚ್ಚು ಮಹಿಳೆಯರ, ಅದರಲ್ಲೂ ಗ್ರಾಮೀಣ […]