ಜೂನ್‌ 15 ಮತ್ತು 16 ರಂದು ಎರಡು ದಿನಗಳ ದಕ್ಷಿಣ ಭಾರತ ಉತ್ಸವ

Wednesday, June 12th, 2024
Tourism

ಬೆಂಗಳೂರು : ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ದಕ್ಷಿಣ ಭಾರತದ ಏಳೂ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದ ಅವಕಾಶಗಳನ್ನು ಮುಂಚೂಣಿಗೆ ತರುವ ನಿಟ್ಟಿನಲ್ಲಿ ಜೂನ್‌ 15 ಮತ್ತು 16 ರಂದು ಎರಡು ದಿನಗಳ ಕಾಲ ದಕ್ಷಿಣ ಭಾರತ ಉತ್ಸವ – 2024 ನ್ನು ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್‌ ಕೆ ಪಾಟೀಲ್‌ ತಿಳಿಸಿದರು. ಇಂದು ವಿಧಾನಸೌಧದಲ್ಲಿ ದಕ್ಷಿಣ ಭಾರತ ಉತ್ಸವದ ಲಾಂಛನವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ […]

‘ಕೊಡಗು ವಿಕಸನ’ ಲಾಂಛನ ಬಿಡುಗಡೆ

Tuesday, January 7th, 2020
kodagu-vikasana

ಮಡಿಕೇರಿ : ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಆಯೋಜನೆ ಉದ್ದೇಶದಿಂದ ಆರಂಭವಾಗಿರುವ ಕೊಡಗು ವಿಕಸನ ಸಂಸ್ಥೆಯ ಲಾಂಛನವನ್ನು ಭಾನುವಾರ ಬಿಡುಗಡೆಗೊಳಿಸಲಾಯಿತು. ಬೆಂಗಳೂರಿನ ರಾಜಾಜಿನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಲೋಗೋ ಬಿಡುಗಡೆ ಮಾಡಿದರು. ತಮ್ಮ ಕ್ಷೇತ್ರದಲ್ಲಿ ಕೂಡಾ ವಿಕಸನ ಸಂಸ್ಥೆ ಹಲವು ವರ್ಷದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಕೊಡುಗೆ ನೀಡುತ್ತಿದೆ. ಅದರಲ್ಲೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶಾರೀರಿಕ ಹಾಗೂ ಬೌದ್ಧಿಕ ವಿಕಸನಕ್ಕೆ ವಿಶೇಷವಾಗಿ ನೆರವಾಗುತ್ತಿದೆ. ಈ ಕಾರ್ಯದಲ್ಲಿ ಉತ್ತಮ ಯಶಸ್ಸನ್ನೂ ಕಾಣುತ್ತಿದ್ದೇವೆ. ಅದೇ ಸದುದ್ದೇಶದಿಂದ […]

ರಾಜ್ಯದಲ್ಲಿ ಖೋಟಾನೋಟು ಹಾವಳಿ: ಗ್ರಾಮೀಣಕ್ಕೂ ಬಂತು 200 ರೂ. ಖೋಟಾನೋಟು!

Friday, November 23rd, 2018
currency

ಸುಬ್ರಹ್ಮಣ್ಯ: ರಾಜ್ಯದಲ್ಲಿ ಖೋಟಾನೋಟು ಹಾವಳಿ ತೀವ್ರಗೊಂಡಿದೆ ಎನ್ನುವ ಆತಂಕದ ನಡುವೆಯೇ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಜಾಲ ಸಕ್ರಿಯವಾಗಿರುವ ಶಂಕೆ ಉಂಟಾಗಿದೆ. ಕೆಲವು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಇಲ್ಲಿನ ಬಡ ವ್ಯಾಪಾರಸ್ಥ ಮಹಿಳೆಯೊಬ್ಬರಿಂದ ಸಣ್ಣ ಪುಟ್ಟ ವಸುಗಳನ್ನು ಖರೀದಿಸಿ 200 ರೂ. ಮುಖ ಬೆಲೆಯ ನೋಟು ನೀಡಿ ತೆರಳಿದ್ದ. ನೋಟು ಪಡೆದ ಮಹಿಳೆ ತತ್‌ಕ್ಷಣ ಅದನ್ನು ಪರಿಶೀಲಿಸಿರಲಿಲ್ಲ. ಆದರೆ ವ್ಯಕ್ತಿ ಸ್ಥಳದಿಂದ ತೆರಳಿದ ಬಳಿಕ ಅವರಿಗೆ ನೋಟಿನ ಕುರಿತು ಅನುಮಾನ ಮೂಡಿದ್ದು, ಸೂಕ್ಷ್ಮವಾಗಿ ಗಮನಿಸಿದಾಗ ಖೋಟಾ […]

ಪೊಳಲಿಯಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಲಾಂಛನ ಆಹ್ವಾನ

Monday, July 7th, 2014
Pradeep Kalkura

ಮಂಗಳೂರು : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ2014, ಆಗಸ್ಟ್ 2 ಮತ್ತು 3ರಂದು ನಡೆಯಲಿರುವ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಾವಿದರಿಂದ ಸೂಕ್ತ ಲಾಂಛನವನ್ನು ಆಹ್ವಾನಿಸಲಾಗಿದೆ. ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಉತ್ಸವಕ್ಕೆ ಸರಿಹೊಂದುವ ‘ಲಾಂಛನ’ವನ್ನು ರಚಿಸಿ ಸ್ವವಿಳಾಸ, ದೂರವಾಣಿ ಸಂಖ್ಯೆ ಸಹಿತ ಜುಲೈ 13ರೊಳಗಾಗಿ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮಾಗಾಂಧಿ ರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ಇಲ್ಲಿಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಆಯ್ಕೆಗೊಂಡ ಲಾಂಛನ […]

ಮುಖ್ಯಮಂತ್ರಿಗಳಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Thursday, October 27th, 2011
DVS Release Logo

ಮಂಗಳೂರು: ನವೆಂಬರ್ . 18 ಮತ್ತು 19ರಂದು ಅಳಿಕೆಯ ಸತ್ಯಸಾಯಿ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿರುವ 17ನೇ ದ. ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ನಗರದಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಯಕ್ಷಗಾನ ಹಾಗೂ ಕಥಕ್ಕಳಿಯ ವೇಷ, ತೆಂಗು, ಕಂಗು, ಬಾಳೆಯ ಹಿನ್ನಲೆಯನ್ನಾಗಿರಿಸಿ, ಕನ್ನಡದ ‘ಕ’ ಅಕ್ಷರದ ಮುಗುಳಿಯ ನಡುವೆ ಕನ್ನಡ ಭುವನೇಶ್ವರಿ ಹಾಗೂ ತುಳು ಜಾನಪದ ಭೂತಾರಾಧನೆಯನ್ನು ಪ್ರತಿನಿಧಿಸುವ ದೈವಗಳ ಅಣಿಯ ಆವರಣದ ನಡುವೆ ಕನ್ನಡ ಅಂಕೆಯಲ್ಲಿ 17ನೇ ಜಿಲ್ಲಾ ಸಾಹಿತ್ಯ […]