ಲಾಕ್’ಡೌನ್ ಇಲ್ಲ, ಜನರು ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು : ಸಿ ಎಂ ಯಡಿಯೂರಪ್ಪ

Tuesday, July 7th, 2020
yedyurappa

ಬೆಂಗಳೂರು:  ಜನರು ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು, ಮತ್ತೊಮ್ಮೆ ಲಾಕ್’ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಲಾಕ್’ಡೌನ್ ಭೀತಿಯಿಂದಾಗಿ ವಲಸೆ ಕಾರ್ಮಿಕರು ತವರುಗಳಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನರು ಭೀತಿಗೊಳಗಾಗ ಬಾರದು. ಮುಂಜಾಗ್ರತಾ ಕ್ರಮಗಳೊಂದಿಗೆ ವೈರಸ್ ಜೊತೆಗೆ ಜೀವಿಸುವುದನ್ನು ಕಲಿಯಬೇಕಿದೆ. ವೈರಸ್ ಮಟ್ಟಹಾಕಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ 450 ಹೆಚ್ಚುವರಿ ಆ್ಯಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಸರ್ಕಾರಕ್ಕೆ […]

ದೇಶದಾದ್ಯಂತ ಕೊರೋನಾ ಹತ್ತಿಕ್ಕಲು ಮೇ 3ರವರೆಗೂ ಲಾಕ್’ಡೌನ್ ಮುಂದುವರಿಕೆ

Tuesday, April 14th, 2020
Narendra-modi

ನವದೆಹಲಿ: ದೇಶದಾದ್ಯಂತ ಕೊರೋನಾ ಹತ್ತಿಕ್ಕಲು ಮೇ 3ರವರೆಗೂ ಲಾಕ್’ಡೌನ್ ಮುಂದುವರಿಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಜನತೆಯನ್ನುದ್ದೇಶಿಸಿ ಮಾತನಾಡಿದ  ಪ್ರಧಾನಿ ಮೋದಿಯವರು, ನಿಮ್ಮ ಸಹಕಾರದಿಂದ ಕೊರೋನಾ ವೈರಸ್ ಒಂದಿಷ್ಟು ಮಟ್ಟಿಗೆ ನಿಯಂತ್ರಣಕ್ಕೆ ಬರಲು ಅನುಕೂಲವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ […]