Blog Archive

ಏ.20ರಿಂದ ಲಾಕ್ ಡೌನ್ ಸಡಿಲಿಕೆ ಇಲ್ಲ : ಯಥಾಸ್ಥಿತಿ ಮುಂದುವರಿಕೆ

Saturday, April 18th, 2020
Yedyurappa

ಬೆಂಗಳೂರು: ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಲಾಕ್ ಡೌನ್ ಸಡಿಲಿಕೆ ನಿಯಮವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಟ್ವೀಟ್ ಮಾಡಿದ್ದಾರೆ. ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದುಕೊಂಡಿದ್ದು, ಏ.20ರಿಂದ ಯಥಾಸ್ಥಿತಿ ಮುಂದುವರೆಯಲಿದೆ. ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ನೀಡಲಾಗಿದ್ದ ಅವಕಾಶವನ್ನು ಕೂಡಾ […]

ಲಾಕ್ ಡೌನ್ ಇದ್ದರೂ ಕಲಬುರಗಿ ಸಿದ್ದಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ

Thursday, April 16th, 2020
siddalingeshwara

ಕಲಬುರಗಿ :  ಹೆಮ್ಮಾರಿ ಕೊರೊನಾ ತಡೆಗಟ್ಟಲು ಭಾರತ್ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮಸ್ಥರು ಸಿದ್ದಲಿಂಗೇಶ್ವರ ದೇವರ  ಜಾತ್ರಾ ಮಹೋತ್ಸವವನ್ನು ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಏಪ್ರಿಲ್ ನಡೆಸಿರುವುದು ಜಿಲ್ಲಾಡಳಿತ ಮತ್ತು ಪೊಲೀಸರ ನಿರ್ಲಕ್ಷ್ಯವನ್ನು ಎತ್ತಿತೋರಿಸಿದೆ. ಕಲಬುರಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾದ ಜಿಲ್ಲೆ 144 ‌ನಿಷೇದಾಜ್ಞೆ ಜಾರಿಯಲ್ಲಿದೆ. ಅಲ್ಲದೇ ಯಾವುದೇ ರೀತಿಯ ಜಾತ್ರೆ, ಉರೂಸ್, ಸಭೆ, ಸಮಾರಂಭಗಳನ್ನು ನಡೆಸದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಆದ್ರೂ ರಾವೂರ್ ಗ್ರಾಮಸ್ಥರು ಮಾತ್ರ ನಿಷೇಧಾಜ್ಞೆ ನಡುವೆಯೂ ಗ್ರಾಮದ ಸಿದ್ದಲಿಂಗೇಶ್ವರ […]

ಅಗತ್ಯ ಸೇವೆಗಳನ್ನು ಒದಗಿಸುವವರಿಗೆ ಅನ್ ಲೈನ್ ಪಾಸ್ ಸೇವೆ ಆರಂಭ

Wednesday, April 15th, 2020
online-pass

ಮಂಗಳೂರು :  ಲಾಕ್ ಡೌನ್ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸುವವರಿಗೆ ಆನ್ ಲೈನ್ ಮೂಲಕ ಪಾಸುಗಳಿಗೆ ಅರ್ಜಿ ಸಲ್ಲಿಸುವ ಸೇವೆ ಇಂದಿನಿಂದ ( ಏಪ್ರಿಲ್ 16) ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸೇವೆ ಒದಗಿಸುವರು ಪಾಸುಗಳಿಗೆ ಆನ್ ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.  

ಲಾಕ್ ಡೌನ್ : ದಿನದ ಆಹಾರಕ್ಕಾಗಿ ಸಂಕಷ್ಟದಲ್ಲಿರುವ ಕುಟುಂಬಗಳು ಈ ದೂರವಾಣಿಗೆ ಕೂಡಲೇ ಸಂಪರ್ಕಿಸಿ

Sunday, April 12th, 2020
Sunil-Bajal

ಮಂಗಳೂರು : ಕಳೆದ ಹಲವಾರು ದಿನಗಳ ಲಾಕ್ ಡೌನ್ ನಿಂದಾಗಿ ಕಾರ್ಮಿಕ ವರ್ಗದ ಬದುಕು ತೀರಾ ಶೋಚನೀಯವಾಗಿದೆ . ಮುಂದಕ್ಕೆ ಇದು ಎಷ್ಟು ದಿನಗಳವರೆಗೆ ಮುಂದುವರಿಯುತ್ತೆ ಎಂಬುದು ತೀರಾ ಆತಂಕಕಾರಿಯಾಗಿದೆ. ಸರಕಾರ, ಸಂಘ ಸಂಸ್ಥೆಗಳು, ಸಂಘಟನೆಗಳು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದರೂ ಇನ್ನೂ ಕೂಡ ಕೆಲವು ಕುಟುಂಬಗಳು ತೀರಾ ಸಂಕಷ್ಟದಲ್ಲಿದೆ. ಅಂತಹವರು ನೇರವಾಗಿ ಸಂಪರ್ಕಿಸಿ ಸಹಾಯ ಯಾಚನೆ ಮಾಡುತ್ತಿದ್ದಾರೆ. ಈಗಾಗಲೇ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ವತಿಯಿಂದ ನೀಡಲಾದ 6 ಕ್ವಿಂಟಾಲ್ ಅಕ್ಕಿಯನ್ನು ಅಂತಹ ಕುಟುಂಬಗಳಿಗೆ ತಲುಪಿಸಲಾಗಿದೆ. […]

 ಕಾರ್ಮಿಕರ ಮನೆಗೆ ತೆರಳಿ ಆಹಾರ ಪದಾರ್ಥಗಳ ವಿತರಣೆ ಮಾಡಿದ ಶಾಸಕ ಕಾಮತ್

Friday, April 3rd, 2020
kamath-food

ಮಂಗಳೂರು :  ನಗರ ಪ್ರದೇಶದಲ್ಲಿ ಬೇರೆ ಜಿಲ್ಲೆ ಹಾಗೂ ಅನ್ಯ ರಾಜ್ಯಗಳಿಂದ ವಲಸೆ ಬಂದು ನೆಲೆಸಿರುವ ವಲಸೆ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಮನೆ ಮನೆಗೆ ತೆರಳಿ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಂಗಳೂರಿನಲ್ಲಿ ಲಾಕ್ ಡೌನ್ ಇರುವ ಕಾರಣ ಬೇರೆಡೆಗಳಿಂದ ವಲಸೆ ಬಂದು ಇಲ್ಲಿ ನೆಲೆಸಿರುವ ವಲಸೆ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಕೊರೆನೋ ಭೀತಿಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪ್ರದೇಶದಲ್ಲಿ ಸಾಮಾಜಿಕ ಅಂತರ […]

ಲಾಕ್ ಡೌನ್ : ಸಾಲ ಮರುಪಾವತಿಸಲು ಮೂರು ತಿಂಗಳ ಇಎಂಐಗೆ ರಿಯಾಯ್ತಿ

Tuesday, March 31st, 2020
rbi

ನವದೆಹಲಿ : ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸಲು ಮೂರು ತಿಂಗಳ ಇಎಂಐಗೆ ಆರ್ ಬಿಐ ರಿಯಾಯ್ತಿ ನೀಡಿದ್ದು ಇದೀಗ ಬಹುತೇಕ ಬ್ಯಾಂಕ್ ಗಳು ಗ್ರಾಹಕರಿಗೆ, ಸಾಲಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್ ಬಿಐ ಸೂಚನೆಯಂತೆ ರಿಯಾಯ್ತಿ ಘೋಷಿಸಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಅಫ್ […]

ಉಡುಪಿ ಜಿಲ್ಲೆಯಲ್ಲಿ ಮತ್ತೆ ಎರಡು ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆ

Sunday, March 29th, 2020
covid udupi

ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ನಾಲ್ಕು ದಿನಗಳ ಬಳಿಕ ಇಂದು ಮತ್ತೆ ಎರಡು ಮಂದಿಯಲ್ಲಿ ಈ ಸೋಂಕು ಪಾಸಿಟಿವ್ ವರದಿ ಬಂದಿದೆ. ದಕ್ಷಿಣ ಕನ್ನಡದಲ್ಲಿ ಕೋವಿಡ್ 19 ಸೋಂಕು ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಉಡುಪಿಯಲ್ಲಿ ಮಾತ್ರ ಈ ಮಾಹಾಮಾರಿ ನಿಯಂತ್ರಣದಲ್ಲಿತ್ತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ. ಒಟ್ಟು ತಪಾಸಣೆ 1,992 ಮಂದಿ. 14+28 ದಿನಗಳ ಮನೆ ನಿಗಾ ಪೂರೈಸಿದವರು  1,055. […]