ನಿಯಂತ್ರಣ ತಪ್ಪಿದ ಮೈನ್ಸ್ ಸಾಗಾಟದ ಲಾರಿ, ಪೊಲೀಸ್ ಕಾಸ್ಟೇಬಲ್ ಸಹಿತ ಹಲವರಿಗೆ ಗಾಯ

Thursday, December 7th, 2023
lorry

ಮಂಗಳೂರು: ಲಾರಿ ಚಾಲಕನೋರ್ವ ನಿಯಂತ್ರಣ ತಪ್ಪಿ ಚಾಲನೆ ಮಾಡಿ ರಸ್ತೆ ಬದಿಯಲ್ಲಿದ್ದ ವಾಹನ ಹಾಗೂ ಹಲವರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಮುಲ್ಕಿಯಲ್ಲಿ ನಡೆದಿದೆ. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಜಂಕ್ಷನ್ ನಲ್ಲಿ ಉಡುಪಿ ಕಡೆಯಿಂದ ಬಂದ ಮೈನ್ಸ್ ಸಾಗಾಟದ ಖಾಲಿ ಲಾರಿ ಅತೀ ವೇಗದಿಂದ ಏಕಾಏಕಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಸ್ಕೂಟರ್, ಒಂದು ಆಟೋಗೆ ಡಿಕ್ಕಿ ಹೊಡೆದಿದ್ದು ಎರಡು ವಾಹನವೂ ಪಲ್ಟಿಯಾಗಿ ರಸ್ತೆಯಿಂದ ಎಸೆಯಲ್ಪಟ್ಟಿದೆ. ಜೊತೆಗೆ ಅಲ್ಲೇ ಇದ್ದ […]

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ ಬ್ಯಾಂಕ್ ಉದ್ಯೋಗಿ ಮೃತ, ಲಾರಿ ನಿಲ್ಲಿಸದೆ ಪರಾರಿ

Wednesday, July 7th, 2021
Ganesh Naik

ಬಂಟ್ವಾಳ : ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ಬುಧವಾರ ನಡೆದಿದೆ. ಮಂಚಿ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಗಣೇಶ್ ನಾಯ್ಕ್ ಕಂಚಿಲ (54) ಮೃತಪಟ್ಟ ಬೈಕ್ ಸವಾರ. ಗಣೇಶ್ ನಾಯ್ಕ್ ಅವರು ಕರ್ನಾಟಕ ಬ್ಯಾಂಕ್ ಮಂಗಳೂರು ಬ್ರಾಂಚ್ ನಲ್ಲಿ ಉದ್ಯೋಗಿಯಾಗಿದ್ದು, ಇಂದು ಬೆಳಗ್ಗೆ ಬ್ಯಾಂಕ್ ಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ […]

ಅಕ್ಕಿ ಸಾಗಾಟದ ಲಾರಿ ಮೂಡುಬಿದಿರೆ ಬಳಿ ದಂಡೆಗೆ ಢಿಕ್ಕಿ

Thursday, June 17th, 2021
raise-lorry

ಬಂಟ್ವಾಳ : ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ- ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ರಸ್ತೆ ಬದಿಯ ದಂಡೆಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ಲಾರಿಯ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದಾರೆ. ಲಾರಿಯು ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಸಾಗಾಟ ಮಾಡುತ್ತಿತ್ತು. ಲಾರಿಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

ಪುತ್ತೂರು : ಲಾರಿ-ಸ್ಕೂಟರ್ ಡಿಕ್ಕಿ ಸವಾರ ಮೃತ್ಯು

Monday, May 17th, 2021
Seetharam

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿನ ತೆಂಕಿಲ ಎಂಬಲ್ಲಿ  ಲಾರಿ ಮತ್ತು ಸ್ಕೂಟರೊಂದರ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸೀತಾರಾಮ ಭಟ್ ಎಂದು ಗುರುತಿಸಲಾಗಿದೆ. ಸೀತಾರಾಮ ಭಟ್ ಬೆಳ್ಳಾರೆಯಿಂದ ತನ್ನ ಸ್ಕೂಟರ್‌ನಲ್ಲಿ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ತೆಂಕಿಲದಲ್ಲಿ ಮುಂಭಾಗದಿಂದ ಆಗಮಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಅವರು […]

ತಂದೆಯ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕ ಮೃತ್ಯು

Thursday, March 11th, 2021
Marshid

ಬೆಳ್ತಂಗಡಿ : ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (8) ಮೃತಪಟ್ಟ ಬಾಲಕ. ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮುರ್ಷಿದ್ ಮೊದಲನೆಯವನಾಗಿದ್ದ. ತಂದೆ ಮೂಡುಬಿದಿರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜತೆಗೆ ತೆರಳಿದ್ದನೆಂದು ಹೇಳಲಾಗಿದೆ. ತಂದೆಯೇ ಚಾಲಕನಾಗಿ ಲಾರಿ […]

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ : ಬಾಟಲ್ ಎಗರಿಸಿದ ಬಿಯರ್ ಪ್ರಿಯರು

Sunday, January 17th, 2021
beer

ಸುಳ್ಯ  : ಮೈಸೂರಿನಿಂದ ಮಂಗಳೂರಿಗೆ ಬಿಯರ್ ಸಾಗಿಸುತ್ತಿದ್ದ ಲಾರಿಯೊಂದು ಸುಳ್ಯ ತಾಲೂಕಿನ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ಜರುಗಿದ್ದು, ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಲಾರಿಯಲ್ಲಿ ಸುಮಾರು ರೂ. 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಬಿಯರ್ ಲಾರಿ ಮಗುಚಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳ […]

ಕೋಟೆಕಾರಿನಿಂದ ಬಾಕ್ರಬೈಲುಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಲಾರಿ ವಶ

Wednesday, January 13th, 2021
cows

ಕೊಣಾಜೆ : ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರ ಸಂಜೆ  ಮುಡಿಪು ಸಮೀಪ‌ ನಡೆದಿದೆ. ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಆಗಮಿಸಿ ಲಾರಿ ವಶಪಡಿಸಿಕೊಂಡಿದ್ದಾರೆ‌. ಈ ಬಗ್ಗೆ ಕೊಣಾಜೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 52 ಕೋಣಗಳ ವಶ

Tuesday, September 15th, 2020
baffalo

ಉಡುಪಿ  : ಹೊರ ಜಿಲ್ಲೆಗಳಿಂದ ಎರಡು ಲಾರಿಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಮಂಗಳವಾರ  ಬೆಳಗ್ಗೆ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ  ಒಟ್ಟು 52 ಕೋಣಗಳನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಹರಿಹರ ತಾಲೂಕಿನ ಮೆಹಬೂಬ್(27), ಬೆಳಗಾವಿ ಬೈಲಹೊಂಗಲ ತಾಲೂಕಿನ ಬಾಪು ಸಾಹೇಬ್(46) ಮತ್ತು ಆಸಿಫ್(23) ಹಾಗೂ ದಾವಣಗೆರೆ ಹೊಸ ಚಿಕ್ಕನಹಳ್ಳಿ ಹೊಸ ಬಡಾವಣೆಯ ಇಮ್ರಾನ್(29) ಬಂಧಿತ ಆರೋಪಿಗಳು. ಎರಡು ಈಚರ್ ಲಾರಿಗಳಲ್ಲಿ ವಾಹನಗಳಲ್ಲಿ ಕ್ರಮವಾಗಿ 24 ಮತ್ತು 28 ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ […]

ಭೀಕರ ಅಪಘಾತ : ಅಂಗಡಿಗೆ ನುಗ್ಗಿದ ಲಾರಿ; ಮೂವರು ಸ್ಥಳದಲ್ಲೇ ಸಾವು

Wednesday, March 18th, 2020
anil-kumar

ಬಾಗಲಕೋಟೆ : ಬಾಗಲಕೋಟೆಯ ಕೆರೂರಿನಲ್ಲಿ ನಿನ್ನೆ ಭೀಕರ ಲಾರಿ ಅಪಘಾತ ಸಂಭವಿಸಿತ್ತು. ಮದ್ಯಸೇವನೆ ಮಾಡಿ ಚಾಲಕ ಲಾರಿ ಓಡಿಸಿದ್ದರಿಂದ ಅಪಾಘತ ಸಂಭವಿಸಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ಬಳಿಕ ಪರಾರಿಯಾಗಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಅನೀಲ್ ಕುಮಾರ್ ಕಟಾಪೂರ ಎಂಬ ವ್ಯಕ್ತಿಯೇ ಅಪಘಾತ ಮಾಡಿದ ಲಾರಿ ಚಾಲಕ. ಬಂಧಿತ ಚಾಲಕ ಕೊಪ್ಪಳ ಜಿಲ್ಲೆ ಹುಲಗೇರಿ ಗ್ರಾಮದವನು. ಕೆರೂರು ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಗಡಿಗೆ ಲಾರಿ ನುಗ್ಗಿತ್ತು. […]

ನಂತೂರು : ಲಾರಿ ಮತ್ತು ಕಾರುಗಳ ಸರಣಿ ಅಪಘಾತ, ಮೂವರಿಗೆ ಗಾಯ

Tuesday, July 9th, 2019
car accident

ಮಂಗಳೂರು : ನಂತೂರು ಪಂಪ್ ವೆಲ್ ರಸ್ತೆಯಲ್ಲಿ ಲಾರಿಯೊಂದು ಎಕ್ಸೆಲ್ ತುಂಡಾದ ಪರಿಣಾಮವಾಗಿ ನಿಯಂತ್ರಣ ತಪ್ಪಿ ಎದುರಿದ್ದ ಕಾರಿಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ ಘಟನೆ ಜು.9 ರ ಮಂಗಳವಾರ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮುಂದಿದ್ದ ಮೂರು ಕಾರು ಒಂದಕ್ಕೊಂದು ಢಿಕ್ಕಿಯಾಗಿದೆ. ಘಟನೆಯ ಕ್ರೇಟಾ , ಹಾಗೂ ಟ್ರಾವೆರಾ ಕಾರಿಗೆ ಹೆಚ್ಚಿನ ಅನಾಹುತ ಸಂಭವಿಸಿದ್ದು ಕಾರಿನ ಹಿಂಭಾಗ ಮತ್ತು ಮುಂಭಾಗ ಸಂಪೂರ್ಣ ಜಖಂ ಆಗಿದೆ.ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. […]