6 ಮಂದಿಗೆ ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ
Monday, July 19th, 2021ಮಂಗಳೂರು: ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ ನಡೆಸಲಾಗಿದ್ದು, ಈ ಮೂಲಕ 6 ಮಂದಿಗೆ ಜೀವದಾನ ಮಾಡಿದಂತಾಗಿದೆ. ಕಿನ್ನಿಗೋಳಿಯ ಅವಿವಾಹಿತೆ ಲಿಂಡಾ ಶಾರೆನ್ ಡಿಸೋಜ(41) ಅವರ ಮೆದುಳು ನಿಷ್ಕ್ರಿಯಗೊಂಡ ಕಾರಣ ದಾನ ಮಾಡಲು ಆಕೆಯ ಸೋದರರು ನಿರ್ಧರಿಸಿದ್ದರು. ಭಾನುವಾರ ಸಂಜೆ ಈ ಪ್ರಕ್ರಿಯೆ ಪೂರ್ಣಗೊಂಡಿತು. ಲಿಂಡಾ ಅವರ ಹೃದಯ ಮತ್ತು ಶ್ವಾಸಕೋಶ ಚೆನ್ನೈನ ಎಂಜಿಎಂ ಆಸ್ಪತ್ರೆಗೆ, ಲಿವರ್(ಯಕೃತ್ತು) ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ, ಎರಡು ಕಿಡ್ನಿಗಳಲ್ಲಿ ಒಂದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಹಾಗೂ […]