ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

Friday, June 7th, 2024
shreyas-naika

ಉಡುಪಿ : ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕುಂದಾಪುರ ಮೂಲದ ಯುವಕನನ್ನು ಜೂ.7ರಂದು ಪೊಲೀಸರು ಬಂಧಿಸಲಾಗಿದೆ. ಕುಂದಾಪುರ ಮೂಲದ ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ. ಆರೋಪಿಯು ತನ್ನ ಪ್ರಭಾವಿ ಅಧಿಕಾರವನ್ನು ಬಳಸಿಕೊಂಡು ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಮೇ 18ರಂದು […]

ಹತ್ತನೇ ತರಗತಿಯ ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿಸಿರಿ ಬ್ಯಾಡ್‌ ಟಚ್‌ ಮಾಡುವ ಅಧ್ಯಾಪಕ

Friday, March 15th, 2024
Guruva-Mogera

ಮೂಡುಬಿದ್ರೆ : ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ […]

ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 6ವರ್ಷಗಳ ಶಿಕ್ಷೆ

Tuesday, November 28th, 2023
ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 6ವರ್ಷಗಳ ಶಿಕ್ಷೆ

ಮಂಗಳೂರು : ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದಲ್ಲಿ ವಿಜಯ್ ಪ್ರವೀಣ್ ಕುಟಿನ್ಹಾ (29) ಎಂಬಾತ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ನ್ಯಾಯಾಧೀಶೆ ಮಂಜುಳಾ ಇಟ್ಟಿ 6ವರ್ಷಗಳ ಕಾಲ ಶಿಕ್ಷೆ ವಿಧಿಸಿ ಈ ತೀರ್ಪು ನೀಡಿದ್ದಾರೆ. 2022ರ ಎ.20ರಂದು ಸಂಜೆ ಬಾಲಕಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಅಂಗಡಿಯೊಂದಕ್ಕೆ ತಿಂಡಿ ಖರೀದಿಸಲು ತೆರಳಿದ್ದಾಳೆ ಎನ್ನಲಾಗಿದೆ. ಆಗ […]

ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ, ವ್ಯಕ್ತಿಯ ಬಂಧನ

Saturday, March 19th, 2022
Wajid

ಮಂಗಳೂರು : ಸುಳ್ಯದಿಂದ ಸರಕಾರಿ ಬಸ್ ನಲ್ಲಿ  ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ವಾಜಿದ್ ಎ. ಜಮಖಾನಿ ಬಂಧಿತ ಆರೋಪಿ. ಮಹಿಳೆ ಸುಳ್ಯದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಮಾನಹಾನಿ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದಳು. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ ವ್ಯಕ್ತಿಯ ಬಂಧನ

Wednesday, March 2nd, 2022
pawan-Shetty

ಮಂಗಳೂರು : ಕೋಟೆಕಾರ್ ಸಮೀಪದ ಮಾಡೂರಿನ ಪವನ್ ಶೆಟ್ಟಿ (33) ಎಂಬಾತನನ್ನು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌ ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ‌ಫೆ.22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳವಾರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನವಾಗಿದೆ.

ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್​ ಬಂಧನ

Tuesday, February 8th, 2022
usthad

ಮಂಗಳೂರು: ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್ನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಂಡಡ್ಕದ ಶಂಶುಲ್ ಹುದಾ ಮದರಸದ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ. ಮದರಸ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಆ ಬಾಲಕಿಯರು ತಮ್ಮ ತಾಯಿಯಲ್ಲಿ ಹೇಳಿಕೊಂಡಿದ್ದರು. ಆಕೆ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ನೀಡಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ ಪುತ್ತೂರು ಮಹಿಳಾ ಠಾಣೆ […]

ತಲಪಾಡಿ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ

Saturday, December 25th, 2021
mustafa

ಮಂಗಳೂರು  :  ತಲಪಾಡಿ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಬಂಧಿತ ಆರೋಪಿ. ಈತ ಕಳೆದ ಶನಿವಾರ ಸ್ಕೂಟರ್ ನಲ್ಲಿ ಬಂದಿದ್ದ ಯುವಕನೋರ್ವ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಸ್ಥಳೀಯರು ಆರೋಪಿಯ ಚಹರೆಯನ್ನು ಪತ್ತೆ ಹಚ್ಚಿದ್ದರು. ಇಂದು ಬಂಧಿತ […]

ಮಹಿಳಾ ಗ್ರಾಹಕಿಗೆ ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆ ಮುಟ್ಟಿ ಲೈಂಗಿಕ ಕಿರುಕುಳ, ಆರೋಪಿ ಬಂಧನ

Sunday, December 12th, 2021
shamshudin

ಮುಲ್ಕಿ : ಚಪ್ಪಲಿ ಖರೀದಿಗೆ ಹೋಗಿದ್ದ ಮಹಿಳಾ ಗ್ರಾಹಕಿ ಯೊಬ್ಬರನ್ನು ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಭಾನುವಾರ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಂಗಡಿ ಮಾಲಕ ಸಂಶುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ  ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಅದರ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ […]

ದೈಹಿಕ ಶಿಕ್ಷಣ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ, ಶಿಕ್ಷಕನ ಬಂಧನ

Tuesday, October 26th, 2021
Sexual Ausslt

ಪುತ್ತೂರು: ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ನನ್ನು ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ, ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಈತ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಳು. […]

ಮಾಂಸ ತಿನ್ನುವ ಅಸೆ ತೋರಿಸಿ, ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

Monday, September 13th, 2021
Arif pasha

ಮಂಗಳೂರು  :  ಐದು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಎಂದು ಗುರುತಿಸಲಾಗಿದೆ. ಆರೀಫ್ ಪಾಷಾ ಕೂಲಿ ಕಾರ್ಮಿಕನಾಗಿದ್ದಾನೆ. ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ ಆಕೆಗೆ ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ , ಮನೆಯಿಂದಲೇ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ […]