Blog Archive

ಬೆಂಬಲಿಗರಿಗೆ ಟಿಕೆಟ್; ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಎಸ್‌ವೈ ತಂತ್ರ

Wednesday, March 12th, 2014
yeddyurappa

ಬೆಂಗಳೂರು: ಬಿಜೆಪಿಗೆ ಮರಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತನ್ನ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಬಗ್ಗೆ ಒತ್ತಡತಂತ್ರ ಅನುಸರಿಸುತ್ತಿದ್ದು, ಇದು ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಘೋಷಣೆಗೆ ಅಡ್ಡಿಯಾಗಿ ಪರಿಣಮಿಸಿದೆ. ಒತ್ತಡ ತಂತ್ರಗಳು ಫಲಿಸದೇ ಇದ್ದಲ್ಲಿ, ಅಂತಿಮವಾಗಿ ಶಿವಮೊಗ್ಗ ಕಣದಿಂದ ಹಿಂದೆ ಸರಿಯುವ ಬೆದರಿಕೆ ಒಡ್ಡುವ ಸಿದ್ಧತೆಯಲ್ಲಿ ಯಡಿಯೂರಪ್ಪ ಇದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪತ್ರ ಬರೆವ ಮೂಲಕ ಒತ್ತಡ ತಂತ್ರ: ಲೋಕಸಭೆ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ಅಂತಿಮ ಹಂತದಲ್ಲಿ ಯಡಿಯೂರಪ್ಪ ದಾಳ ಉರುಳಿಸಿದ್ದು, ಶೋಭಾ […]

ಲೋಕಸಮರ: ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಸ್ಪರ್ಧೆ?

Monday, March 10th, 2014
Chiranjeev

ಬೆಂಗಳೂರು: ತೆಲುಗು ಸೂಪರ್ ಸ್ಟಾರ್ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಈಗ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಪ್ರತಿನಿಧಿಸುತ್ತಿರುವ ಆಂಧ್ರಪ್ರದೇಶದ ಗಡಿ ಜಿಲ್ಲೆ ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹೀಗಾಗಿ ಮೊಯಿಲಿ ಅವರು ಸುಲಭವಾಗಿ ಜಯ ಗಳಿಸಿ, ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಆದರೆ ಈ ಬಾರಿ […]

ಲೋಕಸಮರ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, 4 ಹಾಲಿ ಸಂಸದರಿಗೆ ಕೊಕ್

Saturday, March 8th, 2014
BJP

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ ನಾಲ್ವರು ಹಾಲಿ ಸಂಸದರಿಗೆ ಕೊಕ್ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]

ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು

Saturday, March 8th, 2014
Nandan-Nilekani

ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಸಿನ ಘೋಷಿತ ಅಭ್ಯರ್ಥಿ ನಂದನ್ ನಿಲೇಕಣಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಸದ್ಯಕ್ಕೆ ‘ಆಧಾರ್’ ಯೋಜನೆಯ ಅಧ್ಯಕ್ಷರಾಗಿರುವ ನಂದನ್ ನಿಲೇಕಣಿ ಅವರು ತಮ್ಮ ಅಧಿಕಾರ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ಕೇಂದ್ರದ ಆಧಾರ್ ಸರಕಾರಿ ಯೋಜನೆಯನ್ನು ತಮ್ಮ ಸ್ವಂತ ಕಾರ್ಯಕ್ರಮದಂತೆ ಕ್ಷೇತ್ರದಾದ್ಯಂತ ಬಿಂಬಿಸಿಕೊಳ್ಳುತ್ತಿದ್ದಾರೆ. ಇದರಿಂದ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ದೂರಿನಲ್ಲಿ ಬಿಜೆಪಿ ಗಮನ ಸೆಳೆದಿದೆ. ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು ಮಾರ್ಚ್ 5ರಿಂದ ದೇಶಾದ್ಯಂತ […]

ಚುನಾವಣೆ ಹೊಸ್ತಿಲಲ್ಲಿ ಭರವಸೆಗಳ ಸುಗ್ಗಿ, ಸರ್ಕಾರಿ ನೌಕರ, ಪಿಂಚಣಿದಾರರೇ ಟಾರ್ಗೆಟ್, ಇದು ಕೊಡುಗೈ ಸಂಪುಟ

Saturday, March 1st, 2014
K.H.-Muniyappa

ನವದೆಹಲಿ: ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಯುಪಿಎ ಸರ್ಕಾರ ತನ್ನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮತದಾರರ ಓಲೈಕೆಗೆ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.10ರಷ್ಟು ಹೆಚ್ಚಳ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ 54 ಕೇಂದ್ರೀಯ ವಿದ್ಯಾಲಯ ಹಾಗೂ 3,500 ಮಾದರಿ ಶಾಲೆ, ಕೋಲಾರದಲ್ಲಿ ರೈಲು ಬೋಗಿ ಕಾರ್ಖಾನೆ ಸ್ಥಾಪನೆ ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ಸೂಚಿಸಿದೆ. ಕೇಂದ್ರ ಸರ್ಕಾರಿ ನೌಕರರ ಓಲೈಕೆ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ನೌಕರರ ತುಟ್ಟಿ […]

ಲೋಕಸಮರ: ಬಿಹಾರ, ಉ.ಪ್ರದೇಶದಲ್ಲಿ ಬಿಜೆಪಿಗೆ ಶೇ.50ರಷ್ಟು ಸ್ಥಾನ

Saturday, February 22nd, 2014
Narendra-Modi

ನವದೆಹಲಿ: ದೇಶಾದ್ಯಂತ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ ಚುನಾವಣಾ ಸಮೀಕ್ಷೆ ಹೇಳಿದೆ. ಎಲ್ಲೆಡೆ ಯುಪಿಎ ವಿರೋಧಿ ಮತ್ತು ಮೋದಿ ಪರ ಅಲೆ ಇರುವುದರಿಂದ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಒಟ್ಟು 61 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40 ಕಡೆ ಗೆಲವು […]

ಈ ಬಾರಿ ತೃತೀಯ ರಂಗ ಸರ್ಕಾರ ಅಸ್ತಿತ್ವಕ್ಕೆ: ಅಜೀಂ

Thursday, February 6th, 2014
HD-Deve-Gowda

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ತೃತೀಯ ರಂಗದ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಸರ್ಕಾರ ರಚನೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಹೇಳಿದರು. ತೃತೀಯ ರಂಗ ರಚನೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ತಿಂಗಳ ಮೂರನೇ ವಾರ ಬೆಂಗಳೂರಿನಲ್ಲಿ 14 ಪ್ರಾದೇಶಿಕ ಪಕ್ಷಗಳ ಸಭೆ ಕರೆದಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ದೇವೇಗೌಡರು ವಹಿಸುವರು. ತೃತೀಯ ರಂಗಕ್ಕೆ ಈಬಾರಿ ಚುನಾವಣೆಯಲ್ಲಿ 240 […]