ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

Monday, April 29th, 2024
guns

ಮಂಗಳೂರು : 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನ

Friday, April 26th, 2024
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನ

ಮಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಗಂಟೆಗೆ 14.33 ಶೇಕಡಾ ಮತದಾನವಾಗಿದೆ. ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು. ರಾಜ್ಯ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉಳ್ಳಾಲ ತಾಲೂಕಿನ […]

ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

Monday, April 15th, 2024
ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿ 7.39ಕ್ಕೆ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿ ರೋಡ್ ಶೋಗಾಗಿ ಸಿದ್ಧಪಡಿಸಲಾದ ಅಲಂಕೃತ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಗಾಗಿ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಜಮಾಯಿಸಿ ಪ್ರಧಾನಿ ಮೋದಿ ಅವರಿಗೆ […]

ಲೋಕಸಭಾ ಚುನಾವಣೆ ಯ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ವಿಶೇಷ ನಿಗಾ

Friday, April 12th, 2024
election-officer

ಮಂಗಳೂರು : ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಹಾಗೂ ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳೀ ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏ.12ರ ಶುಕ್ರವಾರ 17- ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ […]

ಕಾಂಗ್ರೆಸ್ ಅಭ್ಯರ್ಥಿ ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ : ಹರೀಶ್ ಕುಮಾರ್

Tuesday, March 26th, 2024
Harish-Kumar-congress

ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ತಯಾರಿ ನಡೆದಿದ್ದು, ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆದಿದೆ. ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಗೆ ತರಬೇತಿ ನೀಡುವ ಕೆಲಸ ಮಾಡಲಾಗಿದೆ. ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಎ.3ಕ್ಕೆ ದ.ಕ. ಜಿಲ್ಲಾ […]

ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯ ಮಾತು

Tuesday, March 12th, 2024
Nalin-Kateel

ಮಂಗಳೂರು : ದಕ್ಷಿಣಕನ್ನಡ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆಯಲ್ಲಿ ಬದಲಾವಣೆಯ ಮಾತು ಕೇಳಿ ಬಂದಿದೆ. ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಸತತ ಮೂರು ಬಾರಿ ಸ್ಪರ್ಧಿಸಿರುವುದರಿಂದ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಇಆ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು […]

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಪದಗ್ರಹಣ

Tuesday, January 30th, 2024
sathish Kumpala

ಮಂಗಳೂರು: ರಾಜ್ಯದ ಯಾವುದೇ ಮೂಲೆಗೆ ಹೋದರು ಮತದಾರರು ಉತ್ಸುಕರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನುಡಿದಿದ್ದಾರೆ. ಅಡ್ಯಾರ್ ಗಾರ್ಡನ್ ನಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿ ಎಂಟು ತಿಂಗಳ ಹಿಂದೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಕಾಂಗ್ರೆಸ್‌ಗೆ ದೇಶದಲ್ಲಿ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆ ಹುಟ್ಟಿಕೊಂಡಿದೆ. ಆದರೆ ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ […]

ಅತ್ತಾವರ ವಾರ್ಡಿನ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Friday, April 5th, 2019
Bjp-workers

ಮಂಗಳೂರು  : ಲೋಕಸಭಾ ಚುನಾವಣೆಯ ಈ ಸಂಧರ್ಭದಲ್ಲಿ ಮಂಗಳವಾರ  ಚುನಾವಣೆ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರಿನ ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಅಕ್ಷಯ್ ಕುಮಾರ್‌ರವರ ನೇತೃತ್ವದಲ್ಲಿ ದಕ್ಷಿಣ ಬ್ಲಾಕ್ ಅಧ್ಯಕ್ಷ  ಅಬ್ದುಲ್ ಸಲೀಂರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು . ಅತ್ತಾವರ ಬಾಬುಗುಡ್ಡೆ ಪ್ರದೇಶದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಹಲವರು ಬಿಜೆಪಿ ದ್ವಂದ್ವ ನೀತಿ ಧೋರಣೆಗಳಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ  ಅಕ್ಬರ್ ಆಲೀಂ, ಮಾಜಿ ಮೂಡಾ ಅಧ್ಯಕ್ಷ ತೇಜೋಮಯ, ಮಾಜಿ ಮೇಯರ್ […]

ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ- ಎಂ ಎನ್ ರಾಜೇಂದ್ರ ಕುಮಾರ್

Friday, March 22nd, 2019
MN-Rajendrakumar

ಮಂಗಳೂರು: ಕಾಂಗ್ರೆಸ್ ಸ್ಪರ್ದೆಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ. ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ ಎಂದು ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ನಾನು ಆಕಾಂಕ್ಷಿಯಲ್ಲದೆ ಇದ್ದರೂ ಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನನ್ನ ಹೆಸರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ನನಗೆ ಸಾಕಷ್ಟು ಸಹಾಯ ‌ಮಾಡಿದೆ. ಆ ಕಾರಣದಿಂದ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು. ಜರ್ನಾರ್ದನ ಪೂಜಾರಿ ಅವರು ತನ್ನ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜೇಂದ್ರ ಕುಮಾರ್, 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ […]

ಪಂಚರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಮುನ್ನಡೆ, ದ.ಕ. ಕಾಂಗ್ರೆಸ್‌ನಿಂದ ಸಂಭ್ರಮ

Tuesday, December 11th, 2018
congress

ಮಂಗಳೂರು  : ಪಂಚ ರಾಜ್ಯಗಳಲ್ಲಿ ಬಿ.ಜೆ.ಪಿಯನ್ನು ಕೆತ್ತೆಸೆಯುವ ಮೂಲಕ ಮತದಾರರು ಬಿ.ಜೆ.ಪಿಗೆ ಸರಿಯಾದ ಬುದ್ಧಿ ಕಲಿಸಿದ್ದಾರೆ. ಹಣ ಮತ್ತು ತೋಳ್ಬಲ ಉಪಯೋಗಿಸಿಯೂ ಬಿ.ಜೆ.ಪಿಯು ದೇಶದಿಂದಲೇ ಕಣ್ಮರೆಯಾಗುವತ್ತ ಹೆಜ್ಜೆ ಇಟ್ಟಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಷಾ ಈ ಫಲಿತಾಂಶದಿಂದ ಬುದ್ಧಿ ಕಲಿಯಬೇಕಾಗಿದೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕೋಡಿಜಾಲ್ ಅವರ ನೇತೃತ್ವದಲ್ಲಿ ನಡೆದ ವಿಜಯೋತ್ಸವ ಆಚರಣೆಯಲ್ಲಿ ಅವರು ಅಭಿಪ್ರಾಯಗೈದರು. ರಾಜಸ್ತಾನ, ಛತ್ತೀಸ್‌ಘಡ, ಮಧ್ಯಪ್ರದೇಶ, ಮಿಜೋರಾಮ್ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣೆಗಳಲ್ಲಿ ಮೂರು ರಾಜ್ಯಗಳಲ್ಲಿ […]