ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಪೊಲೀಸರ ಬಲೆಗೆ
Wednesday, November 29th, 2023ಕುಂದಾಪುರ : ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಆಲೂರಿನ ಆದಿತ್ಯ ಎಂಬವರು ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಈ ಬಗ್ಗೆ ಆದಿತ್ಯ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ […]