ಮಂಗಳೂರು ಮೆಸ್ಕಾಂ ಇಂಜಿನಿಯರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Wednesday, January 31st, 2024
Shanthakumar

ಮಂಗಳೂರು: ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದಡಿ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಐದಾರು ವರ್ಷಗಳಿಂದ ಅತ್ತಾವರ ವಿಭಾಗದ ಮೆಸ್ಕಾಂ ಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.