ನನ್ನನ್ನು ಬಂಧಿಸಲು ಸರಕಾರ ಕುತಂತ್ರ ರೂಪಿಸುತ್ತಿದೆ: ವಜ್ರದೇಹಿ ಸ್ವಾಮೀಜಿ

Friday, January 19th, 2018
vajra-dehi-mutt

ಮಂಗಳೂರು: ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ವಿರುದ್ಧ ರಾಜ್ಯ ಸರಕಾರ ಕೆಂಗಣ್ಣು ಬೀರಿದೆ. ಮೂರು ವರ್ಷಗಳ ಹಿಂದೆ ನಡೆದ ಉಳಾಯಿಬೆಟ್ಟು ಘರ್ಷಣೆ ಪ್ರಕರಣವನ್ನು ಸರ್ಕಾರ ಮತ್ತೆ ಕೆದಕಿದ್ದು ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿದೆ. 2014ರ ಡಿಸೆಂಬರ್ 9 ರಂದು ಮಂಗಳೂರು ಹೊರವಲಯದ ಉಳಾಯಿಬೆಟ್ಟುವಿನಲ್ಲಿ ದತ್ತ ಮಾಲಾಧಾರಿಗಳ ಹಲ್ಲೆ ಖಂಡಿಸಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ನಿಷೇಧಾಜ್ಞೆಯ ನಡುವಿನಲ್ಲಿಯೂ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತೆರಳಿ ಘರ್ಷಣೆ ನಡೆದಿತ್ತು. ಈ ವೇಳೆ ಸ್ವಾಮೀಜಿ ಸೇರಿದಂತೆ ಹಿಂದೂ ಸಂಘಟನೆಯ ಮುಖಂಡರ […]

ಉಳಾಯಿಬೆಟ್ಟು ಗಲಭೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ಸಮನ್ಸ್‌

Thursday, January 18th, 2018
rajashekarananda-swami

ಮಂಗಳೂರು: ಉಳಾಯಿಬೆಟ್ಟು ಗಲಭೆ ಪ್ರಕರಣದ ಸಂಬಂಧ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರಿಗೆ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ಸಮನ್ಸ್ ಹೊರಡಿಸಿದೆ. ಡಿಸೆಂಬರ್ 14, 2014 ರಂದು ಉಳಾಯಿಬೆಟ್ಟುವಿನಲ್ಲಿ ದತ್ತಮಾಲಾಧಿಕಾರಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಗಲಭೆಯೂ ಸಂಭವಿಸಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸ್ವಾಮೀಜಿಯವರಿಗೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.