ಕಲರ್ಸ್ ಕನ್ನಡ ಇಂದಿನಿಂದ ಎರಡು ಹೊಸ ಧಾರಾವಾಹಿಗಳು
Monday, January 27th, 2025
ಮಂಗಳೂರು: ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ […]