5 ಸಾವಿರ ಕೋಟಿ ರೂ.ಗಳ ನೇರ ಬಂಡವಾಳ ಆಕರ್ಷಣೆಗೆ ಒತ್ತು : ಸಿ.ಟಿ.ರವಿ

Sunday, September 27th, 2020
ct-ravi

ಬೆಂಗಳೂರು: ನೂತನ 2020-25 ರ ಪ್ರವಾಸೋದ್ಯಮ ನೀತಿಯು ಇಂದಿನಿಂದ ಮುಂದಿನ 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ. ಈ ನೀತಿ ಅವಧಿಯಲ್ಲಿ ರೂ. 500 ಕೋಟಿ ಗಳ ಸಹಾಯಧನ, ಪ್ರೋತ್ಸಾಹ ಹಾಗೂ ರಿಯಾಯಿತಿಗಳನ್ನು ನೀಡುವ ಮೂಲಕ ರೂ. 5 ಸಾವಿರ ಕೋಟಿಗಳ ನೇರ ಬಂಡವಾಳ ಆಕರ್ಷಣೆಗೆ ಒತ್ತು ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ, ಯುವ ಸಬಲೀಕರಣ ಮತ್ತು ಕ್ರೀಡೆಗಳ ಸಚಿವ ಸಿ.ಟಿ. ರವಿ ಅವರು ತಿಳಿಸಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಮಾರು 30 ಲಕ್ಷ ಜನ ಉದ್ಯೋಗ ಮಾಡುತ್ತಿದ್ದು, […]

ನಾಲ್ಕೇರಿ ಸೊಡ್ಲೂರ್ ಕೇರಿಯಲ್ಲಿ ಹುಲಿದಾಳಿ : 3 ಹಸುಗಳು ಬಲಿ

Thursday, February 13th, 2020
tiger

ಮಡಿಕೇರಿ : ದಕ್ಷಿಣ ಕೊಡಗಿನಲ್ಲಿ ಹುಲಿದಾಳಿ ಮುಂದುವರೆದಿದ್ದು, ಕಳೆದ ಒಂದು ವಾರದಲ್ಲಿ ಮೂರು ಹಸುಗಳು ಬಲಿಯಾಗಿವೆ. ನಾಲ್ಕೇರಿ ಗ್ರಾಮದ ಸೊಡ್ಲೂರ್ ಕೇರಿಯ ಮುಕ್ಕಾಟಿರ ದೀಪ ಎಂಬುವವರಿಗೆ ಸೇರಿದ ಗಬ್ಬದ ಹಸುವೊಂದು ಇಂದು ಹುಲಿದಾಹಕ್ಕೆ ಜೀವ ಕಳೆದುಕೊಂಡಿದೆ. ಇವರದ್ದೇ ಮತ್ತೊಂದು ಹಸುವನ್ನು ನಾಲ್ಕು ದಿನಗಳ ಹಿಂದೆಯಷ್ಟೇ ಹುಲಿ ಬಲಿ ತೆಗೆದುಕೊಂಡಿತ್ತು. ಇದೇ ಗ್ರಾಮದ ತೀತಿರ ರವಿ ಎಂಬುವವರಿಗೆ ಸೇರಿದ ಹಸುವನ್ನು ಒಂದು ವಾರದ ಹಿಂದೆ ಹುಲಿ ಭಕ್ಷಿಸಿತ್ತು. ವನ್ಯಜೀವಿ ದಾಳಿಯಿಂದ ಆತಂಕಗೊಂಡಿರುವ ಗ್ರಾಮಸ್ಥರು ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ […]

ಸೂರ್ಲಬಿಯಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರ ಬಂಧನ

Wednesday, September 25th, 2019
madikeri

ಮಡಿಕೇರಿ : ಸೋಮವಾರಪೇಟೆ ಸಮೀಪದ ಸೂರ್ಲಬಿಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮಾಂಸವನ್ನಾಗಿ ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕುಂಬಾರಗಡಿಗೆ ಗ್ರಾಮದ ನಿವಾಸಿ ಯು.ಬಿ.ಸುಬ್ರಮಣಿ ಹಾಗೂ ಸೂರ್ಲಬಿ ಗ್ರಾಮದ ಎನ್‌.ಪಿ.ಗಣೇಶ್‌ ಬಂಧಿತ ಆರೋಪಿಗಳು. ಸೂರ್ಲಬಿ ಗ್ರಾಮದ ಸರ್ಕಾರಿ ಶಾಲೆ ಬಳಿ ವನ್ಯಜೀವಿಯ ಮಾಂಸ ಸಾಗಾಟ ಯತ್ನದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದರು. ಕಡವೆಯನ್ನು ಬೇಟೆಯಾಡಿರುವ ಬಗ್ಗೆ ಮಾಹಿತಿ ದೊರೆಯಿತ್ತಾದರೂ ಆರೋಪಿಗಳು ಕಾಡುಹಂದಿಯನ್ನು ಬೇಟೆಯಾಡಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆ ವಶಪಡಿಸಿಕೊಂಡ ಮಾಂಸವನ್ನು […]