ಡಾ.ಬಿ ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್; ಸಿಪಿಐ(ಎಂ) ಆಕ್ಷೇಪ

Friday, May 21st, 2021
Vasantha Achari

ಮಂಗಳೂರು  : ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಐ(ಎಂ) ಪತ್ರಿಕಾ ಹೇಳಿಕೆಯಲ್ಲಿ […]

ವಿದ್ಯುತ್ ಬಿಲ್ ವಿನಾಯಿತಿ ಅರ್ಜಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿ ಆಘಾತಕಾರಿ ತೀರ್ಪು

Sunday, April 12th, 2020
vasanth-achari

ಮಂಗಳೂರು :  ಲಾಕ್‌ ಡೌನ್ ಇರುವುದರಿಂದ ರಾಜ್ಯದಲ್ಲಿ ವಿದ್ಯುತ್ ಬಿಲ್ ಪಾವತಿಸುವುದನ್ನು ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಲು ಸರಕಾರ ಮತ್ತು ವಿದ್ಯುತ್ ನಿಯಂತ್ರಣ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯೊಂದನ್ನು ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಇದು ಅಘಾತಕಾರಿಯಾದ ತೀರ್ಪು ಎಂದು ಸಿಪಿಐ(ಎಂ) ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ತಿಳಿಸಿದ್ದಾರೆ. ಅರ್ಜಿದಾರರು ವಿನಾಯಿತಿ ಏನೂ ಕೇಳಿಲ್ಲ. ಆದರೆ ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಲು ನಿರ್ದೇಶನ ನೀಡಬೇಕೆಂದು […]

ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಕ್ಕೆ ತಡೆಯೊಡ್ಡಿದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

Monday, October 22nd, 2018
dyfi

ಮಂಗಳೂರು  : ಚಿಲ್ಲರೆ ಬೀಡಿ ಸಿಗರೇಟ್-ತಂಬಾಕು ಪದಾರ್ಥಗಳ ಮಾರಾಟಕ್ಕೆ ಪ್ರತ್ಯೇಕ ಲೈಸೆನ್ಸ್ ಪಡೆಯಬೇಕೆಂಬ ರಾಜ್ಯ ಸರ್ಕಾರದ ಅವೈಜ್ಞಾನಿಕ ತೀರ್ಮಾನದ ವಿರುದ್ಧ, ವಿನಾ:ಕಾರಣ ಪೋಲಿಸ್ ದೌರ್ಜನ್ಯದ ವಿರುದ್ಧ, ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಗಾರರ ಬದುಕನ್ನು ರಕ್ಷಿಸಲು ಒತ್ತಾಯಿಸಿ ದ.ಕ.ಜಿಲ್ಲಾ ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಗಾರರ ಸಂಘದ ನೇತ್ರತ್ವದಲ್ಲಿ ನಗರದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ಬೃಹತ್ ಪ್ರತಿಭಟನಾ ಪ್ರದರ್ಶನ ಜರುಗಿತು. 300ಕ್ಕೂ ಮಿಕ್ಕಿದ ಚಿಲ್ಲರೆ ಬೀಡಿ ಸಿಗರೇಟ್ ಮಾರಾಟಗಾರರು ನಗರದ ಮಿನಿ ವಿಧಾನಸೌಧದಿಂದ ಮೆರವಣಿಗೆಯಲ್ಲಿ ಹೊರಟು,ಬೀಡಿ ಸಿಗರೇಟ್ ಮಾರಾಟಕ್ಕೆ ಪ್ರತ್ಯೇಕ ಲೈಸನ್ಸ್ […]

ಬೇಡಿಕೆಗಳಿಗೆ ಸ್ಪಂದಿಸುವಂತೆ ಆಗ್ರಹ… ಕಾರ್ಮಿಕ ಭವಿಷ್ಯ ನಿಧಿ ಕಚೇರಿಗೆ ಮುತ್ತಿಗೆ

Wednesday, March 14th, 2018
CIT-mangaluru

ಮಂಗಳೂರು: ಆಧಾರ್‌ ಕಾರ್ಡ್‌ನ್ನು ಯಾವುದೇ ಕಾರಣಕ್ಕೂ ಕಡ್ಡಾಯಗೊಳಿಸಬಾರದು, ಈಗಾಗಲೇ ಪಿಎಫ್‌ ಕಚೇರಿಯಲ್ಲಿ ದಾಖಲಾಗಿರುವ ಹುಟ್ಟಿದ ದಿನಾಂಕವನ್ನು ಅಧಿಕೃತಗೊಳಿಸಬೇಕು. ಪಿಂಚಣಿದಾರರಿಗೆ ಸೌಲಭ್ಯ ಪಡೆಯುವ ನಿಯಮವನ್ನು ಸರಳೀಕರಣಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಕಾರ್ಮಿಕ ಭವಿಷ್ಯನಿಧಿ ಕಚೇರಿಗೆ ಸಿಐಟಿಯು ನೇತೃತ್ವದಲ್ಲಿ ಮುತ್ತಿ ಹಾಕಲಾಯಿತು. ಈ ವೇಳೆ ಕಾರ್ಮಿಕರನ್ನು ಉದ್ದೇಶಿಸಿ ಸಿಐಟಿಯು ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ವಸಂತ ಆಚಾರಿ ಮಾತನಾಡಿ, ನವ ಉದಾರೀಕರಣ ನೀತಿಯನ್ನು ವೇಗವಾಗಿ ಜಾರಿ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಹಿತಾಸಕ್ತಿಗಿಂತಲೂ […]

ದ.ಕ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಬಿಎಸ್ಎನ್ಎಲ್ ಗುತ್ತಿಗೆ ನೌಕರರ ಪ್ರತಿಭಟನೆ

Friday, September 9th, 2016
bsnl-protest

ಮಂಗಳೂರು: ಸ್ವಾತಂತ್ರ್ಯ ನಂತರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗೆ ಮಣೆ ಹಾಕಿದ್ದವು. ಅಂದಿನಿಂದ ಇಂದಿನ ತನಕ ಸರಕಾರಗಳ ಉದಾರೀಕರಣ ನೀತಿಗೆ ಭಾರಿ ಉತ್ಸಾಹ ತೋರುತ್ತಿರುವುದು ಖೇದಕರ ಎಂದು ಕರ್ನಾಟಕ ರಾಜ್ಯ ಬಿಎಸ್ಎನ್ಎಲ್ ವರ್ಕರ್ಸ್ ಫೆಡರೇಶನ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ಆಚಾರಿ ಹೇಳಿದರು. ಕರ್ನಾಟಕ ರಾಜ್ಯ ಬಿಎಸ್ಎನ್ಎಲ್ ನಾನ್ ಪರ್ಮನೆಂಟ್ ವರ್ಕರ್ಸ್ ಫೆಡರೇಶನ್ ದ.ಕ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳೂರು ಬಿಎಸ್ಎನ್ಎಲ್ ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ […]

ಬಿಎಸ್ಎನ್ಎಲ್ ಪ್ರಧಾನ ಕಛೇರಿ ಎದುರು ಸಿಐಟಿಯು ವತಿಯಿಂದ ದರಣಿ

Tuesday, December 14th, 2010
ಬಿಎಸ್ಎನ್ಎಲ್ ಪ್ರಧಾನ ಕಛೇರಿ ಎದುರು ಸಿಐಟಿಯು ವತಿಯಿಂದ ದರಣಿ

ಮಂಗಳೂರು; ಬಿಎಸ್ಎನ್ಎಲ್ ದಿನಕೂಲಿ ಕಾರ್ಮಿಕರ ಕೆಲಸದ ಭದ್ರತೆಗಾಗಿ ಸಿಐಟಿಯು ವತಿಯಿಂದ ಒಂದು ದಿನದ ಧರಣಿ ಸತ್ಯಾಗ್ರಹವು ಇಂದು ಬೆಳಿಗ್ಗೆ ನಗರದ ಬಿಎಸ್ಎನ್ಎಲ್ ಪ್ರಧಾನ ಕಛೇರಿ ಮುಂದುಗಡೆ ನಡೆಯಿತು. ಕೇಂದ್ರ ಸರಕಾರದ ಅಧೀನತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಸ್ಎನ್ಎಲ್ ಪ್ರಧಾನ ಕಛೇರಿ ಹಾಗೂ ಎಲ್ಲಾ ಎಕ್ಸ್ಚೇಂಚ್ ಕೇಂದ್ರಗಳಲ್ಲಿ ದಿನಕೂಲಿ ಕಾರ್ಮಿಕರಿಗಾಗಿ ಗುತ್ತಿಗೆದಾರರ ಅಡಿಯಲ್ಲಿ ಕಳೆದ 12 ವರ್ಷಗಳಿಂದ ವೇತನ ಹೊರತು ಪಡಿಸಿ ಯಾವುದೇ ಸವಲತ್ತುಗಳಿಲ್ಲದೆ ದುಡಿಯುತ್ತಿದ್ದಾರೆ. ಕೆಲಸದ ಒತ್ತಡಗಳ ಮಧ್ಯೆ ಗ್ರಾಹಕರಿಗೆ ಅನುಕೂಲವಾಗುವಂತೆ ಸದಾ ದುಡಿಯುತ್ತಿರುವ ಈ ಕಾರ್ಮಿಕರಿಗೆ ಕೆಲಸದ ಭದ್ರತೆಯಿಲ್ಲ […]