ಎರಡು ದಿನ ವಾರಾಂತ್ಯ ಕರ್ಫ್ಯೂ, ಸರಳವಾಗಿರಲಿದೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

Friday, August 13th, 2021
KV-Rajendra

ಮಂಗಳೂರು : ದೇಶದಾದ್ಯಂತ 2021ರ ಆಗಸ್ಟ್ 15 ರಂದು 75 ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಸೋಂಕು ಕಾರಣ ಜಿಲ್ಲೆಯಲ್ಲಿ ಕೋವಿಡ್ 19 ಮಾರ್ಗಸೂಚಿಗಳು ಜಾರಿಯಲ್ಲಿದ್ದು, ಆಗಸ್ಟ್ 15 ರಂದು ವಾರಾಂತ್ಯ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ. ಆದ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕರು ಪಾಲಿಸಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರು ಧ್ವಜಾರೋಹಣ ನಡೆಸುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಸೇರಿಸದಂತೆ, ಕೋವಿಡ್ ಸಮುಚಿತ ವರ್ತನೆಗಳನ್ನು […]

ವಾರಾಂತ್ಯ ಕರ್ಫ್ಯೂ : ಬ್ಯಾರಿಕೇಡ್​​​ಗಳನ್ನು ಹಾಕಿ ಬಂದೋಬಸ್ತ್

Saturday, June 26th, 2021
commissioner

ಮಂಗಳೂರು : ಶುಕ್ರವಾರ  ರಾತ್ರಿಯಿಂದ ಸೋಮವಾರ ಬೆಳಗ್ಗೆ 7 ರ ವರೆಗೆ ಇರುವ ವಾರಾಂತ್ಯ ಕರ್ಫ್ಯೂಗೆ ಮಂಗಳೂರು ನಗರ ಭಾಗದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ನಗರ ಹೊರ ಭಾಗದಲ್ಲಿ ಜನರ ಓಡಾಟ ನಡೆಸುತ್ತಿದ್ದು, ಆ ಪ್ರದೇಶಗಳಲ್ಲಿಯೂ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂಗೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ‌ ಶುಕ್ರವಾರ  ರಾತ್ರಿಯಿಂದ ಸೋಮವಾರ ಬೆಳಗ್ಗೆ 7 ರ […]