ಮಂಗಳೂರಿನಲ್ಲಿ ಸರ್ಕಾರಿ ಡಿಜಿಟಲ್ ಫಲಕಕ್ಕೆ ಸಚಿವ ರಮಾನಾಥ ರೈ ಚಾಲನೆ
Wednesday, November 29th, 2017ಮಂಗಳೂರು : ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ಥಾಪಿಸಿರುವ ಡಿಜಿಟಲ್ ಎಲ್ಇಡಿ ಫಲಕವನ್ನು ಸಚಿವ ಬಿ. ರಮಾನಾಥ ರೈ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರು ಈ ಯೋಜನೆಗಳ ಪ್ರಯೋಜನ ಪಡೆಯಲು ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯು […]