ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ

Monday, June 29th, 2020
psHarsha

ಬೆಂಗಳೂರು, : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು. ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಡಾ ಪಿ ಎಸ್ ಹರ್ಷ ಅವರಿಗೆ ಅಧಿಕಾರ […]

ಲಿಂಗ ಸೂಕ್ಷ್ಮತೆ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಸಂವಾದ

Thursday, December 5th, 2019
linga

ಮಂಗಳೂರು : ಶೈಕ್ಷಣಿಕವಾಗಿ ಮುಂದಿರುವ ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲೇ ಲಿಂಗಾನುಪಾತದ ಪ್ರಮಾಣ ಸಾಕಷ್ಟು ಕುಸಿದಿದ್ದು, ಜನರ ಮನಸ್ಥಿತಿ ಬದಲಾದರೆ ಮಾತ್ರ ಇದು ಸುಧಾರಣೆಯಾಗಲು ಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಬೇಟಿ ಪಡಾವೋ-ಬೇಟಿ ಬಚಾಪೆ ಯೋಜನೆಯಡಿ ಗುರುವಾರ ಪತ್ರಿಕಾಭವನದಲ್ಲಿ ಪತ್ರಕರ್ತರಿಗೆ ಆಯೋಜಿಸಲಾದ ಲಿಂಗ ಸೂಕ್ಷ್ಮತೆ ಕಾರ್ಯಾಗಾರದಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು. ಸೆಂಟರ್ ಫಾರ್ ಡೆವಲಪ್‍ಮೆಂಟ್ […]

ಕೃಷಿ ಅಭಿಯಾನಕ್ಕೆ ಚಾಲನೆ 

Tuesday, July 12th, 2016
Krishi

ಮ೦ಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿರುವ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕೃಷಿ ಅಭಿಯಾನ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ.ಶ್ರೀವಿದ್ಯಾ, ಉಪಕಾರ್ಯದರ್ಶಿ ಎನ್.ಆರ್ ಉಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಉಪಸ್ಥಿತರಿದ್ದರು. 20 ದಿನಗಳ […]

ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮಕ್ಕೆ ಜಿ.ಪಂ. ಉಪಾಧ್ಯಕ್ಷರಿಂದ ಚಾಲನೆ

Wednesday, May 6th, 2015
Zp Rally

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ, ನದಿಗಳು ತುಂಬಿ ಹರಿಯುತ್ತಿದ್ದರೂ, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಲು ಸ್ವಚ್ಛಭಾರತ್ ಅಭಿಯಾನದಡಿ ಜಿಲ್ಲೆಯ ಎಲ್ಲ ತಾಲೂಕುಗಳ ಆಯ್ದ ಗ್ರಾಮ ಪಂಚಾಯತ್‌ಗಳಲ್ಲಿ ನಡೆಸುವ […]