ಕೋವಿಡ್ ನಿಯಂತ್ರಣಕ್ಕೆ ಎಂಟು ಜಿಲ್ಲೆಗಳಲ್ಲಿ `ವೀಕೆಂಡ್ ಕರ್ಫ್ಯೂ’ವನ್ನು ಜಾರಿ

Friday, August 6th, 2021
Basavaraja Bommai

ಬೆಂಗಳೂರು : ಕರ್ನಾಟಕ ರಾಜ್ಯದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ `ವೀಕೆಂಡ್ ಕರ್ಫ್ಯೂ’ವನ್ನು ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9ಗಂಟೆಯಿಂದಲೇ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಮಾರ್ಗಸೂಚಿ ಪಾಲಿಸಿ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಪೂಜೆ, […]

ಮದುವೆ ಮಾತುಕತೆಗೆ ಕರೆಸಿ ಅತ್ಯಾಚಾರ ಎಸಗಿದ ಪೊಲೀಸ್

Thursday, September 3rd, 2020
police Rape

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ಅತ್ಯಾಚಾರ ಎಸಗಿರುವುದಾಗಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿ ಸಾಯಬಣ್ಣ ಮದುವೆಯಾಗುವುದಾಗಿ ನಂಬಿಸಿ  ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈತನ ಜೊತೆಗೆ ಬೆಂಗಳೂರಿನ ರಮೇಶ್ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 […]

ಬಕ್ರೀದ್​​ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಮುತಾಲಿಕ್​ ಮನವಿ

Friday, July 24th, 2020
pramodMuthalik

ಧಾರವಾಡ : ಬಕ್ರೀದ್ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ವತಿಯಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಅಕ್ರಮವಾಗಿ ಗೋವುಗಳ ಮಾರಾಟ, ಸಾಗಾಣಿಕೆ ಹಾಗೂ ಅವುಗಳ ಕಳ್ಳತನ ನಡೆಯುತ್ತಿದೆ. ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ಯಥೇಚ್ಛವಾಗಿ ನಡೆಯುತ್ತಿದೆ. ಗೋವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಿದೆ, ಸರ್ಕಾರವೂ ಸಹ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳಿಗೆ ಮನವಿ […]

ವಿಜಯಪುರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಇನ್ನಿಲ್ಲ

Monday, November 19th, 2018
vijayapura

ವಿಜಯಪುರ: ಜಿಲ್ಲೆಯ ಕಲಕೇರಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರತನಚಂದ ಪಾಯಪ್ಪ ಜಗಶೆಟ್ಟಿ(98) ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಕಲಕೇರಿಯಲ್ಲಿ ಸಕಲ ಗೌರವದೊಂದಿಗೆ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣ… ವಿಜಯಪುರ ಜಿಲ್ಲೆಯಲ್ಲಿ ಮತ್ತಿಬ್ಬರು ಎಸ್‌ಐಟಿ ವಶಕ್ಕೆ?

Tuesday, June 12th, 2018
gauri-lankesh

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದೆ ಎನ್ನಲಾಗ್ತಿದೆ. ಗೌರಿ ಲಂಕೇಶ್‌ ಹತ್ಯೆ ಸಂಬಂಧ, 15 ದಿನಗಳ ಹಿಂದೆ ವಿಜಯಪುರ ಜಿಲ್ಲೆಯಿಂದ ವಿಜಯ ಕಾಳೆ ಎಂಬುವನನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ವಿಜಯಪುರ ಜಿಲ್ಲೆಯ ಕೆಲವು ಕಡೆ ತನಗೆ ಸಹಾಯ ಮಾಡಿದ್ದ ಇಬ್ಬರ ಬಗ್ಗೆ ಮಾಹಿತಿ ನೀಡಿದ್ದ ಎಂದು ಹೇಳಲಾಗ್ತಿದೆ. ಇದರ ಆಧಾರದ ಮೇಲೆ ಜಿಲ್ಲೆ ಸಿಂಧಗಿ […]

ಯುವಕರು ಪಕೋಡ ಮಾರಿ ಬದುಕ್ತಿರೋದೆ ಮೋದಿ ಮೇಕ್‌ ಇನ್‌ ಇಂಡಿಯಾ: ಹೆಚ್‌ಡಿಕೆ ವ್ಯಂಗ್ಯ

Tuesday, January 30th, 2018
kumarswamy

ವಿಜಯಪುರ: ನಮ್ಮ ಯುವಕರು ಪಕೋಡ ಮಾರಾಟ ಮಾಡಿ ಬದುಬೇಕಿದೆ. ಇದೇ ಪ್ರಧಾನಿ ಮೋದಿ‌ ಅವರ ಮೇಕ್ ಇನ್ ಇಂಡಿಯಾ ಎಂದು ಉದ್ಯೋಗ ಸೃಷ್ಟಿ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ. ಸೋಮವಾರದಿಂದ ಐದು ‌ದಿನಗಳ ವಿಜಯಪುರ‌ ಜಿಲ್ಲಾ ಪ್ರವಾಸದಲ್ಲಿರುವ ಅವರು ಮಾಧ್ಯಮದವರ ಜತೆ ಮಾತಾನಡಿದರು. ಪ್ರತಿ ವರ್ಷ 2ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಪ್ರಧಾನಿ ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡಿದ್ದರು. ಪಕೋಡ ಮಾರಾಟ ಮಾಡುವುದೂ ಸಹ‌ ಮೇಕ್ […]

ವಿಜಯಪುರದಲ್ಲಿ ಖೊಟಾ ನೋಟು ಮುದ್ರಣ, ಮೂವರ ಬಂಧನ

Monday, January 29th, 2018
cota-note

ವಿಜಯಪುರ: ನಗರದಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಗರದ ದರ್ಗಾ ಜೈಲು ರಸ್ತೆಯ ಮನೆಯೊಂದರಲ್ಲಿ ಖೊಟಾ ನೋಟು ತಯಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 67200 ಮೌಲ್ಯದ ಖೋಟಾ ನೋಡುಗಳನ್ನು ವಶಪಡಿಸಿಕೊಂಡಿದ್ದಾರೆ. ಭಾರತಕ್ಕೆ ಖೋಟಾ ನೋಟು ಬರುವುದು ಎಲ್ಲಿಂದ? ಡಿಸಿಐಬಿ ಇನ್ಸ್‌ಪೆಕ್ಟರ್‌ ಚಂದ್ರಕಾಂತ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಆರೋಪಿಗಳು 200,500 ಮತ್ತು 2000 ಮುಖಬೆಲೆಯ ನೋಟುಗಳನ್ನು ಮಾರುತ್ತಿದ್ದರು ಎನ್ನಲಾಗಿದೆ. ಖೋಟಾ ನೋಟು ಮುದ್ರಣದಲ್ಲಿ ನಿರತರಾಗಿದ್ದ ಹಾಜಿಮಸ್ತಾನ ವಾಲೀಕಾರ್ (23), […]