ಹಿಜಾಬ್ ವಿವಾದದ ನಂತರ, ಮುಸ್ಲಿಂ ವಿದ್ಯಾರ್ಥಿಗಳು ತರಗತಿಯೊಳಗೆ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್

Saturday, February 12th, 2022
nawaz

ಮಂಗಳೂರು: ಹಿಜಾಬ್ ವಿವಾದದ ನಂತರ ಕಡಬ ತಾಲೂಕಿನ ಅಂಕತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ತರಗತಿಯೊಳಗೆ ನಮಾಜ್ ಮಾಡುತ್ತಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 5 ಮತ್ತು 7 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಫೆಬ್ರುವರಿ 4 ರಂದು ತರಗತಿಯೊಳಗೆ ನಮಾಜ್ ಮಾಡಿದ್ದರು. ಆ ವಿಡಿಯೋ ಕ್ಲಿಪ್ ವೈರಲ್ ಆದ ನಂತರ ಸ್ಥಳೀಯ ನಿವಾಸಿಗಳು ಅದನ್ನು ವಿರೋಧಿಸಿದರು. ಮಾಹಿತಿ ತಿಳಿದ ತಕ್ಷಣ ಶಿಕ್ಷಣ ಇಲಾಖೆ ಅಧಿಕಾರಿಗಳು ಶುಕ್ರವಾರ ಶಾಲೆಗೆ ಭೇಟಿ […]

‘ಬುಲ್ ಶಿಟ್’ ಎಂದು ಶಿಕ್ಷಕಿಯನ್ನು ಅವಮಾನಿಸಿದ ಹಿಜಾಬ್ ಹಾಕಿದ ವಿದ್ಯಾರ್ಥಿನಿ

Thursday, February 10th, 2022
Hijab student

ಕಾರ್ಕಳ:  ಕಾರ್ಕಳದ ಕಾಲೇಜೊಂದರಲ್ಲಿ ನಡೆದ ಗಲಾಟೆಯ ವಿಡಿಯೋ ಇದೀಗ ವೈರಲ್‌ ಆಗಿದ್ದು ಹಿಜಾಬ್ ಹಾಕಿದ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಯನ್ನು ಅವಮಾನಿಸಿರುವುದು ಬಯಲಾಗಿದೆ. ಮಂಗಳವಾರ (ಫೆ.8) ಎಂಜಿಎಂ ಕಾಲೇಜಿನಲ್ಲಿ ನಡೆದ ಘಟನೆಯ ವಿಡಿಯೋ ಇದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋದಲ್ಲಿ, ಹಿಜಾಬ್‌, ಬುರ್ಖಾ ಹಾಕಿಕೊಂಡು ಬಂದ ಕೆಲ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಗಲಾಟೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ನಯನಾ ಎಂಬ ಶಿಕ್ಷಕಿ ಮಕ್ಕಳನ್ನು ತಣ್ಣಗಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರೂ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ […]

ಶಿಕ್ಷಕನ ತಲೆಯ ಮೇಲೆ ಕಸದಬುಟ್ಟಿ ಹಾಕಿ ವಿಕೃತಿ, ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Saturday, December 11th, 2021
Student Attack

ದಾವಣಗೆರೆ: ತರಗತಿಯಲ್ಲಿ ಹರಡಿದ್ದ ಕಸವನ್ನು ನೋಡಿ ಬುದ್ಧಿ ಹೇಳಿದ ಶಿಕ್ಷಕನ ತಲೆಯ ಮೇಲಕ್ಕೇ ಕಸದಬುಟ್ಟಿ ಹಾಕಿ ವಿಕೃತಿ ಮೆರೆದ ವಿದ್ಯಾರ್ಥಿಗಳ ಮೇಲೆ ಇದೀಗ ಪೊಲೀಸ್ ಪ್ರಕರಣ ದಾಖಲಾಗಿದೆ. ಈ ಕುಚೇಷ್ಟೆಯ ವಿಡಿಯೋ ವೈರಲ್ ಆಗಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್‌, ಡಿಸೆಂಬರ್ 3 ರಂದು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ತರಗತಿಯ ಕೆಲವು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದರು. ಈ […]

ವಿಡಿಯೋ ವೈರಲ್ : ಟೆಂಪೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ

Saturday, September 21st, 2019
trafic-police

ಬೆಂಗಳೂರು : ಟೆಂಪೊ ಚಾಲಕನೊಬ್ಬನ ಮೇಲೆ ಹಲ್ಲೆ ಮಾಡಿದ ಬೆಂಗಳೂರು ಟ್ರಾಫಿಕ್ ಕಾನ್ಸ್‌ಟೇಬಲ್ ಒಬ್ಬರ ವಿಡಿಯೋ ವೈರಲ್ ಆಗಿದೆ. ಇಂದು ಬೆಳಗ್ಗೆ ಟೌನ್ ಹಾಲ್ ಬಳಿ ಘಟನೆಯು ನಡೆದಿದ್ದು, ಬಿಬಿಎಂಪಿ ಕಡೆಯಿಂದ ಟೌನ್ ಹಾಲ್ ಬಳಿ ಯೂ ಟರ್ನ ತೆಗೆದುಕೊಂಡ ಎಂಬ ಕಾರಣಕ್ಕೆ ಟೆಂಪೊ ಟ್ರಾವೆಲರ್ ಚಾಲಕ ಸುನಿಲ್ ಎಂಬ ಯುವಕನಿಗೆ ಟ್ರಾಫಿಕ್ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಥಳಿಸಿದ್ದಾರೆ. ಅಷ್ಟೆ ಅಲ್ಲದೆ ಅತ್ಯಂತ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ. ಘಟನೆಯ ಪೂರ್ಣ ದೃಶ್ಯಗಳನ್ನು ಚಾಲಕ ಸುನಿಲ್ ಮೊಬೈಲ್‌ನಲ್ಲಿ […]

ಪುತ್ತೂರು : ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ವಿಡಿಯೋ ವೈರಲ್

Wednesday, July 3rd, 2019
Abvp-Girl

ಪುತ್ತೂರು : ಪುತ್ತೂರು ಕಾಲೇಜಿನ ವಿದ್ಯಾರ್ಥಿನಿ ಯೊಬ್ಬಳಿಗೆ ಗಾಂಜಾ ನೀಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯವಿವೇಕಾನಂದ ಕಾಲೇಜಿನ  ನಾಲ್ವರು ವಿದ್ಯಾರ್ಥಿಗಳು ತಮ್ಮದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಅಮಲು ಬರುವಂತೆ ಮಾಡಿ ಅತ್ಯಾಚಾರ ನಡೆಸಿರುವುದಲ್ಲದೆ, ಈ ಘಟನೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವಿಚಾರ […]

ಸ್ಕೇಟಿಂಗ್ ರಿಂಗ್ ನಲ್ಲೇ ಹೊಡೆದಾಡಿಕೊಂಡ ಸ್ಪರ್ಧಿಗಳು, ವಿಡಿಯೋ ವೈರಲ್

Thursday, November 30th, 2017
scatting

ಮಂಗಳೂರು: ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸ್ಕೇಟಿಂಗ್ ಪಟುಗಳಿಬ್ಬರು ಸ್ಕೇಟಿಂಗ್ ರಿಂಗ್ ನಲ್ಲೇ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನಲ್ಲಿ ರಾಜ್ಯ ಮಟ್ಟದ 33ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಡೆದಿತ್ತು. ಇದರಲ್ಲಿ ಸ್ಕೇಟಿಂಗ್ ಪಟುವೊಬ್ಬನನ್ನು ಮತ್ತೊಬ್ಬ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸ್ಕೇಟಿಂಗ್ ಪಟುಗಳು ಹೊಡೆದಾಡಿಕೊಂಡಿದ್ದಾರೆ. ಮಂಗಳೂರಿನ ಹೊಗೈಬೈಲ್ ನಲ್ಲಿರುವ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಹೈಫೈ ಸ್ಕೇಟಿಂಗ್ ಕ್ಲಬ್ ಪಂದ್ಯಾವಳಿಯನ್ನು ಆಯೋಜಿಸಿತ್ತು. ಸ್ಪರ್ಧೆ ಎಂದಾಗ ಸಣ್ಣಪುಟ್ಟ ಜಗಳಗಳು ಸಾಮಾನ್ಯ. ಆದರೆ ಇಲ್ಲಿ ಇಬ್ಬರು ಸ್ಕೇಟಿಂಗ್ […]