ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ: ಡಾ. ಆನಂದ್

Friday, September 22nd, 2023
dr-Anand

ಮಂಗಳೂರು : ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ಸೆ.22ರ ಶುಕ್ರವಾರ ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು ಜವಾಬ್ದಾರಿಯನ್ನು ತಿಳಿಸಿಕೊಡುತ್ತವೆ, […]

ಬೈಕ್ ಹಾಗೂ ಜೀಪು ನಡುವೆ ಅಪಘಾತ, ವಿದ್ಯಾರ್ಥಿ ಸಾವು

Wednesday, March 23rd, 2022
dharshan

ಸುಳ್ಯ : ಬೈಕ್ ಹಾಗೂ ಜೀಪು ನಡುವೆ ಸಂಭವಿಸಿದ  ಅಪಘಾತದಲ್ಲಿ  ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಮಾ.23 ರಂದು ನಡೆದಿದೆ. ಘಟನೆಯಲ್ಲಿ  ಇನ್ನೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ನಿವಾಸಿ ಆರ್.ಡಿ. ವೆಂಕಪ್ಪ ಎಂಬವರ ಪುತ್ರ ದರ್ಶನ್ ಹಾಗೂ ಪೆರಾಜೆಯ ನಿವಾಸಿ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂಬ ಇಬ್ಬರು ಬಾಲಕರು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ಬರೆದು ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಇಬ್ಬರು ಬೈಕಿನಲ್ಲಿ ಮನೆಗೆ ಬರುತ್ತಿದ್ದ […]

ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇಂಟರ್ನ್ ವಿದ್ಯಾರ್ಥಿ ಸಾವು

Monday, February 14th, 2022
Nagesh

ಮಂಗಳೂರು : ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ನ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.

ಎನ್ಐಟಿಕೆ ವಿದ್ಯಾರ್ಥಿ ಸಾಲದ ಬಾಧೆಯಿಂದ ಆತ್ಮಹತ್ಯೆ

Sunday, December 26th, 2021
sourabh yadav

ಮಂಗಳೂರು :  ಎನ್ಐಟಿಕೆ ವಿದ್ಯಾರ್ಥಿಯೊಬ್ಬ ಸಾಲದ ಬಾಧೆಯಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎನ್ಐಟಿಕೆ ಕಾಲೇಜಿನಲ್ಲಿ ಬಿಟೆಕ್ನಲ್ಲಿ  ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ಸೌರಭ್, ತನ್ನ ಕೋಣೆಯಲ್ಲೇ ನೇಣು ಬಿಗಿದುಕೊಂಡಿದ್ದಾನೆ. ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂಬುದಾಗಿ ಡೆತ್ನೋಟ್ನಲ್ಲಿ ಬರೆದಿದ್ದ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. […]

ಅನ್ಯಧರ್ಮದ ಯುವಕ ಮತ್ತು ಯುವತಿ ಮೇಲೆ ಬಸ್‌ನಲ್ಲಿ ಹಲ್ಲೆ, ನಾಲ್ವರ ಬಂಧನ

Saturday, December 11th, 2021
Bus Love

ಮಂಗಳೂರು : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಅನ್ಯಧರ್ಮದ ಯುವಕ ಮತ್ತು ಯುವತಿ ಬಸ್‌ನಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ 5-6 ಮಂದಿ ಐಡಿ ಪ್ರೂಫ್ ಕೇಳಿ ಅವರ ಮನೆಯವರ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ಧಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಯುವತಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಿದ್ದ […]

ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರಿಗೆ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ, 9 ಮಂದಿ ಆರೋಪಿಗಳ ಬಂಧನ

Friday, December 3rd, 2021
Gujjarakere Attack

ಮಂಗಳೂರು: ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು  ರಕ್ಷಣೆಗೆ ಧಾವಿಸಿದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ  ಮಡಿದ ಘಟನೆ ನಡೆದಿದೆ. ಈ ಪ್ರಕರಣಗಳಲ್ಲಿ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್, ಅಬು ತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದ್ದು, ಒಟ್ಟು 16 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಐದು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. […]

ಶಿಕ್ಷಕರ ಬೋಧನೆ, ಉತ್ತಮ ನಡತೆ ವಿದ್ಯಾರ್ಥಿಗಳ ಜೀವನದ ದಾರಿದೀಪ

Saturday, May 29th, 2021
Boodishwara

ಗದಗ : ಶಿಕ್ಷಕರ ಬೋಧನೆ ಹಾಗೂ ಉತ್ತಮ ನಡತೆ ವಿದ್ಯಾರ್ಥಿಗಳಿಗೆ ದಾರಿದೀಪವಾಗುತ್ತದೆ ಎಂದು ಹೊಸಳ್ಳಿಮಠದ ಶ್ರೀ ಬೂದೀಶ್ವರ ಮಹಾಸ್ವಾಮಿಗಳು ನುಡಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಂಘಗಳ ಸಹಯೋಗದೊಂದಿಗೆ ಶುಕ್ರವಾರದಂದು ಹಮ್ಮಿಕೊಳ್ಳಲಾದ ಶಿಕ್ಷಕರಿಗೆ ಆತ್ಮಸ್ಥೈರ್ಯ ತುಂಬುವ ವರ್ಚುವಲ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಶಿಕ್ಷಕ ಕರ್ಮಯೋಗಿ ವಿಷಯ ಕುರಿತು ಉಪನ್ಯಾಸ ನೀಡುತ್ತಾ ವಸಂತ ಋತು ಎಂದರೆ ಹೊಸದು. ಹಳೆಯದನ್ನು ಕಳೆದುಕೊಂಡು ಹೊಸದನ್ನು ಪಡೆದುಕೊಳ್ಳುವುದಾಗಿದೆ. ಮನುಷ್ಯನು ಸೇರಿದಂತೆ ಭೂಮಿಯ ಮೇಲೆ ಒಟ್ಟು 14 ಲಕ್ಷ ಜೀವರಾಶಿಗಳಿವೆ. […]

ನದಿಯಲ್ಲಿ ಈಜಲು ಹೋದ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Wednesday, April 14th, 2021
Reji

ಕಾಸರಗೋಡು : ನದಿಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಎಪ್ರಿಲ್‌ 14ರ ಬುಧವಾರ ಮಧ್ಯಾಹ್ನ ವೆಸ್ಟ್ ಎಳೇರಿ ಸಮೀಪದ ಪರಪ್ಪಚ್ಚಾಲ್ ಎಂಬಲ್ಲಿ ನಡೆದಿದೆ. ಕಾವುಂದಳ ದ ರೆಜಿ ಅವರ ಪುತ್ರ ಆಲ್ಬಿನ್ (15) ಹಾಗೂ ಸಹೋದರ ಥಾಮಸ್ ಅವರ ಪುತ್ರ ಬ್ಲಾಸನ್ ಥಾಮಸ್ (20) ಮೃತಪಟ್ಟವರು. ಮೃತಪಟ್ಟವರು ಒಂದೇ ಕುಟುಂಬದವರಾಗಿದ್ದು ಆಲ್ಬಿನ್ ವಾರಕ್ಕೋಡ್ ಶಾಲೆಯ 10ನೇ ತರಗತಿ ಹಾಗೂ ಥಾಮಸ್ ಮಂಗಳೂರಿನ ಡಾ.ಎಂ.ವಿ.ಶೆಟ್ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದನು. ಇಬ್ಬರು ಸಮೀಪದ ಚೈತ್ರ ವಾಹಿನಿ ಹೊಳೆಗೆ […]

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವು

Thursday, March 25th, 2021
Sanu

ಮಂಗಳೂರು : ನೇತ್ರಾವತಿ ಸೇತುವೆಯ ಮೇಲೆ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಡಬ ನಿವಾಸಿ, ವಿದ್ಯಾರ್ಥಿ ಮಾರ್ಚ್ 24 ರ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ಕಡಬ ತಾಲ್ಲೂಕಿನ ಮರ್ದಳ ಬಳಿಯ ಕೆಮ್ಮಾಯಿ ನಿವಾಸಿ ಸಾನು ಅಬ್ರಹಾಂ (21) ಅವರ ಬೈಕು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡಿದ್ದರು. ಸಾನು ಅಬ್ರಹಾಂ ನಗರದ ಖಾಸಗಿ ಹೋಟೆಲ್ ಮಾನೆಜ್‌ಮೆಂಟ್‌ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಮೃತಪಟ್ಟ […]

ಬಂಗಾರಪಲ್ಕೆ ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Tuesday, February 16th, 2021
sanath

ಬೆಳ್ತಂಗಡಿ :  ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ  ಮೃತದೇಹ ಮಂಗಳವಾರ ಪತ್ತೆಯಾಗಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ (20) ಅವರ ಮೃತದೇಹ ಮೂರು ವಾರಗಳ ನಂತರ ಪತ್ತೆಯಾಗಿದೆ. ಬಂಗಾರಪಲ್ಕೆ ಜಲಪಾತದಲ್ಲಿ ಕಾರ್ಯಾಚರಣೆ ನಡೆಸಲು ಬೇಕಾದ ಯಂತ್ರಗಳನ್ನು ಬಳಸಲು ಸರಿಯಾದ ವಾತಾವರಣವಿಲ್ಲದ ಕಾರಣ ಹಲವು ಸಮಯದವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಕಲ್ಲು ಬಂಡೆಯಡಿ ಮೃತದೇಹ ಲಭ್ಯವಾಗಿದೆ.