ವಿದ್ಯಾರ್ಥಿನಿಯರು ಆತ್ಮರಕ್ಷಣೆ ತರಬೇತಿ ಪಡೆದರೆ ನಿರ್ಭೀತಿಯಿಂದ ಬದುಕಬಹುದು: ವೇದವ್ಯಾಸ ಕಾಮತ್

Monday, November 4th, 2024
Kamath

ಮಂಗಳೂರು: ಬಾಲಕಿಯರು, ಮಹಿಳೆಯರನ್ನು ಗುರಿಯಾಗಿಸಿ ಇಂದು ಹಲವು ದಾಳಿಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಆತ್ಮರಕ್ಷಣೆಯ ತರಬೇತಿ ಪಡೆಯುವ ಅಗತ್ಯವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ನಗರದ ಎಕ್ಕೂರಿನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಪಿಎಂ ಶ್ರೀ ಅನುದಾನದಿಂದ ವಿದ್ಯಾರ್ಥಿನಿಯರಿಗೆ ಆಯೋಜಿಸಲಾಗಿದ್ದ ಮೂರು ತಿಂಗಳ ಆತ್ಮರಕ್ಷಣೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆತ್ಮ ರಕ್ಷಣಾ ತರಬೇತಿಯನ್ನು ಕಲಿತುಕೊಂಡರೆ ನಿರ್ಭೀತಿಯ ವಾತಾವರಣದಲ್ಲಿ ಮಹಿಳೆಯರು ಬದುಕಲು ಸಾಧ್ಯ. ವಿದ್ಯಾರ್ಥಿಗಳು ದೇಶದ ಭವಿಷ್ಯದ ಆಸ್ತಿಗಳೆಂದು ಮಣಗಂಡಿರುವ ಪ್ರಧಾನಿ ನರೇಂದ್ರ […]

ಎಸ್ಎಸ್ಎಲ್ಸಿ ಪರೀಕ್ಷೆ : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಪೊಲೀಸ್ ಕಾವಲು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳು ಗೈರು

Monday, March 28th, 2022
sslc Exam

ಮಂಗಳೂರು : ವಿವಾದದ ಕೇಂದ್ರವಾಗಿರುವ ಹಿಜಾಬ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೇಂದ್ರಗಳ ಆವರಣದವರೆಗೂ ಹಿಜಾಬ್ ಧರಿಸಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರು ಬಳಿಕ ಹಿಜಾಬ್ ತೆಗೆದಿರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಇದೇ ವೇಳೆ ಖಾಸಗಿ ಶಾಲೆಗಳ, ಸಮವಸ್ತ್ರ ಜತೆಗೆ ಹಿಜಾಬ್ ಭಾಗವಾಗಿರುವ ಶಾಲೆಗಳ ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯಸ್ಥರ ಅನುಮತಿ ಮೇರೆಗೆ ಹಿಜಾಬ್ ನೊಂದಿಗೆ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭಆರಂಭ ಗೊಂಡಿದ್ದು ,ಇಂದು ಪ್ರಥಮ ಭಾಷಾ ಪರೀಕ್ಷೆ  ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,712 ವಿದ್ಯಾರ್ಥಿಗಳು […]

ಹಿಜಾಬ್ ಇಲ್ಲದೆ ತರಗತಿಗಳಿಗೆ ತೆರಳಲು ಒಪ್ಪಿದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು

Monday, March 21st, 2022
Hijab

ಪುತ್ತೂರು :  ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಸೋಮವಾರದಿಂದ  ತರಗತಿಗಳಿಗೆ ಹಾಜರಾಗಿದ್ದಾರೆ. ಕಾಲೇಜು ಆಡಳಿತದ ಆದೇಶ ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಮತ್ತು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದರು. ಇತ್ತ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪರ ಮಾತುಕತೆ ನಡೆಸಿದ ಮುಖಂಡರಿಗೆ ಕಾಲೇಜಿನ ಆಡಳಿತ ಮಂಡಳಿಯು ನಾವು ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಹೈಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಬಾರದೆಂದು ಹೇಳಿತ್ತು. ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮುಖಂಡರು ಮಾತುಕತೆ ನಡೆಸಿ […]

ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದ 49 ವಿದ್ಯಾರ್ಥಿನಿಯರು ಮನೆಗೆ

Wednesday, February 16th, 2022
Hijab Students

ಮಂಗಳೂರು : ಬುಧವಾರ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬಂದ 49 ವಿದ್ಯಾರ್ಥಿನಿಯರು ಪ್ರವೇಶ ನಿರಾಕರಿಸಿದ್ದಕ್ಕಾಗಿ ಹಿಂತಿರುಗಿ ಮನೆಗೆ ತೆರಳಿದ್ದಾರೆ. ಮಂಗಳೂರು ಕಾರ್‌ಸ್ಟ್ರೀಟ್‌ನ ದಯಾನಂದ ಪೈ ಪದವಿ ಕಾಲೇಜಿನ ಇಬ್ಬರು, ಮುಡಿಪು ಪದವಿ ಕಾಲೇಜಿನ 22, ಮೊಂಟೆಪದವು ಕಾಲೇಜಿನ 11, ಪೊಂಪೈ ಕಾಲೇಜಿನ 26, ಇಂದಿರಾ ನಗರ ಪದವಿ ಕಾಲೇಜಿನ 15 ಹಾಗು ಮೂಡುಬಿದಿರೆ ಮಹಾವೀರ ಕಾಲೇಜಿನ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಮುಡಿಪು ಪದವಿ ಕಾಲೇಜು ಹಾಗು ಮೊಂಟೆಪದವು ಕಾಲೇಜಿನ ವಿದ್ಯಾರ್ಥಿನಿಯರು ಆಡಳಿತ ಮಂಡಳಿ ಹಾಗು ಪ್ರಾಂಶುಪಾಲರ ಸೂಚನೆ […]