ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಲೈನ್‌ಮ್ಯಾನ್ ಮೃತ್ಯು

Monday, June 3rd, 2024
saleem

ಬೈಂದೂರು : ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುವ ವೇಳೆ ವಿದ್ಯುತ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಇಂದು ತಗ್ಗರ್ಸೆ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಲೈನ್‌ಮ್ಯಾನ್ ಸಲೀಂ ಮೇ. ಅಗಸಿಮನೆ (38) ಸಾವನ್ನಪ್ಪಿದ್ದಾರೆ.ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಲೀಂ ಅವರು ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿ. ವಿವಾಹಿತರಾಗಿರುವ ಅವರು […]

ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕಾಂಗ್ರೆಸ್ ಸರಕಾರ, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲಿ ತೊಡಗಿದೆ

Wednesday, November 22nd, 2023
vijayendra

ಮಂಗಳೂರು : ಬಿಜೆಪಿ ಸರಕಾರವು ಬೇಸಿಗೆಯಲ್ಲೂ ರೈತರಿಗೆ ತೊಂದರೆ ಆಗಬಾರದೆಂದು ಕನಿಷ್ಠ 7 ಗಂಟೆ ವಿದ್ಯುತ್ ಕೊಟ್ಟಿತ್ತು, ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಆಗುವುದಾಗಿ ಮುಂಚಿತವಾಗಿಯೇ ಆಲೋಚಿಸಿ ಬಿಜೆಪಿ ಸರಕಾರವು ಹೊರ ರಾಜ್ಯಗಳಿಂದ ವಿದ್ಯುತ್ […]

ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

Thursday, November 2nd, 2023
citu

ಮಂಗಳೂರು : ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು ಹೊರಟಿದೆ. ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು […]

ವಿದ್ಯುತ್ ಸ್ಪರ್ಶಿಸಿ ಯುವಕನ ದಾರುಣ ಸಾವು

Thursday, February 18th, 2021
Avinash

ಬೆಳ್ತಂಗಡಿ :  ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾನರ್ಪ ಕೌಡಂಗೆ ಎಂಬಲ್ಲಿ ನಡೆದಿದೆ. ಕೌಡಂಗೆ ನಿವಾಸಿ ಅವಿನಾಶ್(23) ಮೃತ ದುರ್ದೈವಿಯಾಗಿದ್ದಾರೆ. ಮನೆಯಲ್ಲಿ ವಿದ್ಯುತ್ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ವಿದ್ಯುತ್ ಅವಘಡ ಸಂಭವಿಸಿದೆ. ತಕ್ಷಣ ಮನೆಮಂದಿ ಯುವಕನನ್ನು ಆಸ್ಪತ್ರೆಗೆಂದು ಕರೆದೊಯ್ದಿದ್ದಾರೆ. ಆದರೆ, ದಾರಿ ಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಕೌಡಂಗೆ ನಿವಾಸಿ ಕೃಷಿಕ ಚನನ ಗೌಡ ಮತ್ತು ದೇವಕಿ ದಂಪತಿಯ ಮೂರನೇ ಪುತ್ರರಾಗಿರುವ ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಎಲೆಕ್ಟ್ರೀಷಿಯನ್ […]

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಬೆಂಕಿಗಾಹುತಿ

Friday, August 14th, 2020
vishnuBakery

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪದ ಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿರುವ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿರುದೆ. ಸುಮಾರು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಬೇಕರಿ ಮಾಲೀಕ ರಾಜೇಶ್ ಅವರು ತಿಳಿಸಿದ್ದಾರೆ. ಇತ್ತೀಚಿಗೆ ಅಷ್ಟೇ ಈ ಅಂಗಡಿಯ ನವೀಕರಣ ಕೆಲಸಗಳನ್ನು ಮಾಡಲಾಗಿದೆ. ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ […]

ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]

ದಕ್ಷಿಣ ಕೊಡಗಿನಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಗೋಣಿಕೊಪ್ಪದಲ್ಲಿ ಪ್ರತಿಭಟನೆ

Friday, February 28th, 2020
goni-koppa-protest

ಮಡಿಕೇರಿ : ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೋಣಿಕೊಪ್ಪ ಚೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಬಾಳೆಲೆ, ಶ್ರೀಮಂಗಲ, ಹುದಿಕೇರಿ ಹಾಗೂ ಪೊನ್ನಂಪೇಟೆ ಹೋಬಳಿಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು, ಬೆಳೆಗಾರರು, ಸಾರ್ವಜನಿಕರು ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡು ಮಾನವ ಸರಪಳಿ ನಿರ್ಮಿಸಿ ಇಲಾಖಾ ಅಧಿಕಾರಿಗಳ ಕಾರ್ಯವೈಖರಿಯನ್ನು ಟೀಕಿಸಿದರು. ಗೋಣಿಕೊಪ್ಪ, ಪೊನ್ನಂಪೇಟೆ ಮುಖ್ಯ ರಸ್ತೆತಡೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಚೆಸ್ಕಾಂನ […]

ಟ್ರಾಕ್ಟರ್ ಮೇಲೆ ವಿದ್ಯುತ್ ತಂತಿ : ತಂದೆ, ಇಬ್ಬರು ಮಕ್ಕಳು ಮೃತ್ಯು

Friday, September 13th, 2019
Koppala

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ವಿದ್ಯುತ್ ಅವಘಡ ಸಂಭವಿಸಿದ್ದು, ಟ್ರಾಕ್ಟರ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸೇರಿ ಮೂವರು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ತಂದೆ ಹನುಮಪ್ಪ ಬೀರಪ್ಪನವರ (30) ಮಕ್ಕಳಾದ ಪ್ರಿಯಾಂಕ(4), ಬೀರಪ್ಪ(2) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್ ಮೂಲಕ ರಾಶಿ ಮಾಡಲು ಚಳಗೇರಿಯ ಹೊರವಲಯದಲ್ಲಿರುವ ಹೊಲಕ್ಕೆ ತೆರಳಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕುಷ್ಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.   […]

ಮೆಸ್ಕಾಂ ನಿಂದ ರೂ.1.38ರಷ್ಟು ದರ ಹೆಚ್ಚಿಸಲು ಪ್ರಸ್ತಾವನೆ

Thursday, February 7th, 2019
mescom

ಮಂಗಳೂರು :  ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ(ಕೆಇಆರ್‌ಸಿ)ದಿಂದ  ವಿದ್ಯುತ್‌ನ ಯುನಿಟೊಂದಕ್ಕೆ 1.38ರಷ್ಟು ದರ ಹೆಚ್ಚಿಸಬೇಕೆಂಬ ಮೆಸ್ಕಾಂ ಪ್ರಸ್ತಾವನೆಗೆ ಸಂಬಂಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆದ ಸಾರ್ವಜನಿಕ ವಿಚಾರಣೆ ಸಂದರ್ಭ ವಿವಿಧ ಗ್ರಾಹಕ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂ ಪ್ರಬಲ ವಿರೋಧ ವ್ಯಕ್ತವಾಯಿತು. ಆಯೋಗದ ಅಧ್ಯಕ್ಷ ಶಂಭು ದಯಾಲ್ ಮೀನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಹಕ ಸಂಘಟನೆಯ ಸತ್ಯನಾರಾಯಣ ಉಡುಪ ಅವರು ವಿಸ್ತೃತವಾಗಿ ಹಾಗೂ ಅಂಕಿಅಂಶಗಳೊಂದಿಗೆ ವಿದ್ಯುತ್ ದರ ಏರಿಕೆಯನ್ನು ಆಕ್ಷೇಪಿಸಿದರಲ್ಲದೆ, ಮೆಸ್ಕಾಂ 1.35ರಷ್ಟು ದರ ಕಡಿತವನ್ನು ಮಾಡಲು ಅವಕಾಶವಿದೆ ಎಂದು […]

ಕೈಕೊಟ್ಟ ಕರೆಂಟ್, ಜನರೇಟರ್​: ಬೈಕ್ ಹೆಡ್‌ಲೈಟ್ ಬೆಳಕಲ್ಲಿ ಕಾರ್ಯಕ್ರಮ ನೀಡಿದ ಕಲಾವಿದರು!

Wednesday, December 26th, 2018
karavali

ಮಂಗಳೂರು: ಜನರೇಟರ್ ಕೈಕೊಟ್ಟ ಪರಿಣಾಮ ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಲಾವಿದರು ಬೈಕ್ ಹೆಡ್‌ಲೈಟ್ ಹಾಗೂ ಮೊಬೈಲ್ ಬೆಳಕಿನ ನೆರವಿನಲ್ಲೇ ಪ್ರದರ್ಶನ ನೀಡಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರಿನ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮೈಮ್ ರಾಮ್‌ದಾಸ್ ಮತ್ತು ತಂಡದವರಿಂದ ಜಾನಪದ ಹಾಡುಗಳ ಗಾಯನವು ಸಂಜೆ 6 ಗಂಟೆಗೆ ನಿಗದಿಯಾಗಿತ್ತು. ಆದರೆ ಸಮಯ 6:25 ಆಗಿದ್ದರೂ ವಿದ್ಯುತ್ ವ್ಯವಸ್ಥೆ ಆಗಿರಲಿಲ್ಲ. ಜನರೇಟರ್‌ನ ಡೀಸೆಲ್ ಖಾಲಿಯಾಗಿದ್ದು, ಡೀಸೆಲ್ ಹಾಕುವ ಹೊಣೆ […]