ಕೋವಿಡ್ ನಮಗೆ ಅತ್ಯುತ್ತಮ ಪಾಠ ಕಲಿಸಿದೆ:ಸಚಿವ ಆರ್ ಅಶೋಕ

Sunday, August 29th, 2021
R Ashoka

ಬೆಂಗಳೂರು  : ಕಂದಾಯ ಸಚಿವ ಆರ್ ಅಶೋಕ್ ಅವರು ನಗರದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 1೦೦ ಕ್ಕೂ ಅಧಿಕ ವೈದ್ಯರುಗಳಿಗೆ ಸನ್ಮಾನ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು,”ನಾವು ಈ ರೀತಿಯ ಸಂಕಷ್ಟವೊಂದನ್ನ ಎದುರಿಸಬೇಕಾದಂತಹ ಸಂದರ್ಭ ಬರುತ್ತದೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಕೋವಿಡ್ ಎಲ್ಲವನ್ನು ಬದಲಿಸಿ ಹಾಕಿದೆ. ಕೋವಿಡ್ ನ ಘೋರತೆ ನೆನೆಸಿಕೊಂಡರೆ ಆಂಬ್ಯೂಲೆನ್ಸ್ ಸೈರನ್ ಸದ್ದು ಮತ್ತು ಶವಗಳನ್ನ ಸುಡುವ ಚಿತ್ರಗಳೇ ಕಣ್ ಮುಂದೆ ಸುಳಿಯುತ್ತವೆ. ಕೋವಿಡ್ ನಿಂದಾಗಿ ಬದುಕು ಅಂತಂತ್ರವಾಗಿದೆ ಎಂದೆನಿಸಬಹುದು. ಆದರೆ ಕೆಲ […]

ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳ ಆಸ್ಪತ್ರೆ: ಆರ್ ಅಶೋಕ್

Tuesday, August 10th, 2021
RAshoka

ಬೆಂಗಳೂರು  : ಎಲ್ಲಾ ವಿಧಾನಸಭಾ ಕ್ಷೇತ್ರ ಗಳಲ್ಲಿ ಮಕ್ಕಳ ಆಸ್ಪತ್ರೆಗಳನ್ನು ಪ್ರಾರಂಭಿಲಾಗುವುದು ಎಂದು ಕಂದಾಯ ಸಚಿವ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರವು ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆಯಡಿ, ಕಂದಾಯ ಇಲಾಖೆಯು ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರ ಗಳಲ್ಲಿ ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ ನೀಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಎಲ್ಲಾ […]

ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಂತಸ

Thursday, July 8th, 2021
Nalin Kumar

ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ […]

ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ

Monday, May 24th, 2021
Manjeshwara MLA Asraf

ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬಹುಪಾಲು ಮಂದಿ ಕನ್ನಡಿಗರಿದ್ದಾರೆ. ಈ ಜಿಲ್ಲೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿ ಕೊಂಡಿರುವುದರಿಂದ ಕನ್ನಡ ಭಾಷೆಯ ಪ್ರಭಾವ ಇಲ್ಲಿ ಹೆಚ್ಚು. ಭೌಗೋಳಿಕವಾಗಿ ಕೇರಳಕ್ಕೆ ಸೇರಿದ್ದರೂ ಕೂಡ […]

ನ.28ರಂದು‌ ಬಿಜೆಪಿಯ ಎರಡು ‘ಗ್ರಾಮ ಸ್ವರಾಜ್ಯ ಸಮಾವೇಶ’

Wednesday, November 25th, 2020
Sudarshan MoodaBidre

ಮಂಗಳೂರು:  ದಕ್ಷಿಣಕನ್ನಡ ಜಿಲ್ಲೆಯ 200ಕ್ಕೂ ಹೆಚ್ಚು ಗ್ರಾಪಂನಲ್ಲಿ ಬಿಜೆಪಿ ಅಧಿಕಾರ ಪಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ  ಮಾತನಾಡಿದ ಅವರು, ಬಿಜೆಪಿ ಗ್ರಾಪಂ ಚುನಾವಣೆ ಎದುರಿಸಲು  ರಾಜ್ಯಾದ್ಯಂತ ಆರು ತಂಡಗಳು ರಚನೆಯಾಗಿದೆ. ಈ ತಂಡಗಳು ಗ್ರಾಪಂ ಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡುವ ಮೂಲಕ ‘ಗ್ರಾಮ ಸ್ವರಾಜ್ಯ ಸಮಾವೇಶ’ ಮಾಡುವ ನಿರ್ಧಾರವನ್ನು ರಾಜ್ಯ ಸಮಿತಿ ಪ್ರಕಟಿಸಿದೆ ಎಂದು ಹೇಳಿದರು. ಬಿಜೆಪಿ ಪ್ರತಿಯೊಂದು ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಲು ಸಂಘಟನಾತ್ಮಕವಾದ ಕೆಲಸ ಕಾರ್ಯಗಳನ್ನು […]

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರತನ್ ಕುಮಾರ್ ಕಟ್ಟೇಮಾರ್ ನಿಧನ

Monday, November 9th, 2020
Rathan Kumar

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರತನ್ ಕುಮಾರ್ ಕಟ್ಟೇಮಾರ್ (82) ಅವರು ಭಾನುವಾರ  ನಿಧನ ಹೊಂದಿದರು. 1967ರಿಂದ 1972ರವರೆಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರತನ್ ಕುಮಾರ್ ಕಟ್ಟೇಮಾರ್ ಅವರು ಸ್ವತಂತ್ರ ಪಕ್ಷದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ನ ಬಿ.ಗಂಗಾಧರ ದಾಸ್ ವಿರುದ್ಧ ಜಯ ಗಳಿಸಿದ್ದರು. ನಂತರ 1972 ರ ಚುನಾವಣೆಯಲ್ಲಿ ಅವರು ಸುರತ್ಕಲ್ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಜನಪ್ರತಿನಿಧಿಯಾಗಿ ಭೂ ಮಸೂದೆಯ ವಿರುದ್ಧ ಸದಾ ದನಿಯೆತ್ತಿದ್ದ ಅವರು ಪ್ರತ್ಯೇಕ ತುಳು ರಾಜ್ಯಕ್ಕೆ ಬೇಡಿಕೆ ಇಟ್ಟಿದ್ದ […]

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ

Saturday, August 29th, 2020
Kamaruddin

ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]

ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನ

Saturday, November 2nd, 2019
Vaijanath

ಕಲಬುರಗಿ : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವೈಜನಾಥ್ ಪಾಟೀಲ್(81) ಅವರು ಶನಿವಾರ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಕನ್ನಿಂಗ್ಯಾಮ್ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. 1938ರಂದು ಬೀದರ್ ಜಿಲ್ಲೆಯ ಔರಸ್ನಲ್ಲಿ ಜನಸಿದ್ದರು. ಚಿಂಚೋಳಿಯ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪಾಟೀಲ್, ರಾಮಕೃಷ್ಣ ಹೆಗಡೆ ಮತ್ತು ಎಚ್ಡಿಡಿ ಅವಧಿಯಲ್ಲಿ‌ ಎರಡು ಬಾರಿ ಸಚಿವರಾಗಿ ಕೆಲಸ ಮಾಡಿದ್ದರು. 371 ಕಲಂ‌ ಹೈದ್ರಾಬಾದ್ ಕರ್ನಾಟಕ ವಿಶೇಷ […]

ಮಂಜೇಶ್ವರ : ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭ

Thursday, October 24th, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಆದರೆ ಪ್ರಥಮ ಸುತ್ತು ಮುಗಿಯುತ್ತಿದ್ದಂತೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಸುತ್ತಿನ ಮತ ಎಣಿಕೆಯನ್ನು ಮರು ಎಣಿಕೆ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಎಣಿಕೆ ಮಾಡಲಾಗಿದ್ದ ಮತಗಳ ಮರು ಎಣಿಕೆ ಮಾಡಲಾಗುತ್ತಿದೆ. ಈ ವೇಳೆ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.  

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಮಧ್ಯಾಹ್ನದ ಸುಮಾರಿಗೆ 34.72 ಶೇ. ಮತದಾನ

Monday, October 21st, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದ್ದು, ಮಧ್ಯಾಹ್ನ 12:30ರ ಸುಮಾರಿಗೆ 34.72 ಶೇ. ಮತದಾನವಾಗಿದೆ. ಹಿಂದೆಂದೂ ಕಾಣದ ಬಿಗಿ ಭದ್ರತೆಯಲ್ಲಿ ಮತದಾನ ನಡೆಯುತ್ತಿದೆ. ಮುಂಜಾನೆಯಿಂದ ಮಳೆ ಸುರಿಯುತ್ತಿದ್ದರೂ ಮತದಾರರು ಅದನ್ನು ಲೆಕ್ಕಿಸದೆ ಮತಗಟ್ಟೆಗೆ ತಲುಪಿ ತಮ್ಮ ಹಕ್ಕು ಚಲಾಯಿಸಿದರು. ಕೆಲವೆಡೆ ಮತಯಂತ್ರಗಳಲ್ಲಿ ದೋಷ ಹಾಗೂ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಶಾಂತಿಯುತವಾಗಿದೆ . ಎಲ್.ಡಿ.ಎಫ್. ಅಭ್ಯರ್ಥಿ ಎಂ. ಶಂಕರ ರೈ ಇಂದು ಬೆಳಗ್ಗೆ ಅಂಗಡಿಮೊಗರು ಶಾಲೆಯ 165ನೇ ಮತಗಟ್ಟೆಯಲ್ಲಿ ಮತ […]