ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರುಗೆ ಜಯ

Thursday, October 24th, 2024
Kishor-Putturu

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 24 ರಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ […]

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Saturday, October 19th, 2024
Lakshmi-Hebbalkar

ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ […]

ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ – 392 ಮತಗಟ್ಟೆ, 6, 032 ಮತದಾರರು

Friday, October 18th, 2024
Raju-Poojary-Kishor-BR

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ […]

ವಿಧಾನ ಪರಿಷತ್ ನ ಸದಸ್ಯರಾಗಿ ಐವನ್ ಡಿಸೋಜ ಆಯ್ಕೆ

Thursday, June 6th, 2024
Ivan-D-Souza

ಮಂಗಳೂರು : ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ 7 ಮಂದಿ, ಬಿಜೆಪಿಯಿಂದ 3 ಮಂದಿ ಹಾಗೂ ಜೆಡಿಎಸ್ ನಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿಯು ಮೇಲಿನ ಎಲ್ಲಾ 11 ಮಂದಿ ಉಮೇದ್ವಾರರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದ್ದಾರೆ. ನಂತರ ಚುನಾವಣಾ ಅಧಿಕಾರಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ರವರು ಐವನ್ ಡಿಸೋಜ ಇವರಿಗೆ ಚುನಾಯಿತರಾಗಿದ್ದಾರೆಂದು ಪ್ರಮಾಣ ಪತ್ರವನ್ನು ವಿತರಿಸಿದರು. ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಜೇತ ವಿಧಾನ ಪರಿಷತ್ತಿನ ಸದಸ್ಯರು ಹಾಗೂ […]

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Wednesday, February 14th, 2024
ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು. ಹೈ ಸೆಕ್ಯುರಿಟಿ‌ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ […]

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಚುನಾವಣಾ ಪೂರ್ವ ಸಿದ್ಧತಾ ಸಭೆ

Monday, December 6th, 2021
Manjunath Bhandary

ಮಂಗಳೂರು  : ವಿಧಾನ ಪರಿಷತ್ತಿಗೆ ದ.ಕ. ಸ್ಥಳೀಯ ಪ್ರಾಧಿಕಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರ ಗೆಲುವಿಗೆ ಸಂಬಂಧಿಸಿ ಚುನಾವಣಾ ಪೂರ್ವ ಸಿದ್ಧತಾ ಸಭೆ ಸೋಮವಾರ ನಗರದ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಜರಗಿತು. ಡಿ. 4 ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ 13 ವಿಧಾನ ಸಭಾಕ್ಷೇತ್ರಗಳ ಎರಡೆರಡು ಬ್ಲಾಕ್‌ಗಳ ಅಧ್ಯಕ್ಷರು ಮತ್ತು ಪಕ್ಷದ ವೀಕ್ಷಕರ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸೋಮವಾರದ ಈ ಸಭೆ ಜರಗಿದ್ದು, ಎಲ್ಲಾ 13 […]

ಗುರುವಾಯನಕೆರೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಚುನಾವಣಾ ಪ್ರಚಾರ

Wednesday, December 1st, 2021
election campaign

ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನೆರವೇರಿತು. ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು, “ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ ಕಲ್ಯಾಣ ಇಲಾಖೆ ಮೂಲಕ ಸಮಾಜದ […]

7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ, ಹಿಂಪಡೆಯಲು ನ.26 ರ ವರೆಗೆ ಅವಕಾಶ

Wednesday, November 24th, 2021
nomination Fie

ಮಂಗಳೂರು  :  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಒಟ್ಟು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನೆ ನ.24ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಅವುಗಳಲ್ಲಿ 13 ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬರು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕತಗೊಂಡಿದೆ. 13 ನಾಮಪತ್ರಗಳು ಕ್ರಮಬದ್ಧ: ಸಲ್ಲಿಕೆಯಾಗಿದ್ದ ಒಟ್ಟು 14 ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಅದರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ […]

ದ.ಕ. ಜಿಲ್ಲೆಯಿಂದ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್

Friday, November 19th, 2021
srinivas Poojary

ಮಂಗಳೂರು :ವಿಧಾನ ಪರಿಷತ್  ಚುನಾವಣೆಗೆ ದ.ಕ. ಜಿಲ್ಲೆಯಿಂದ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು  ಪಡೆದಿದ್ದು , ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ […]

ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10ರಂದು

Tuesday, November 16th, 2021
legislative-council

ಮಂಗಳೂರು  : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿಗೆ ಚುನಾಯಿತರಾದ ಅವಧಿಯು 2022ರ ಜನವರಿ 5ರಂದು ಮುಕ್ತಾಯಗೊಳ್ಳುವ ಕಾರಣ ಈ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ವಿವರ ಇಂತಿದೆ: 2021ರ ನ.16ರ ಮಂಗಳವಾರ ಅಧಿಸೂಚನೆ ಹೊರಡಿಸುವ ದಿನವಾಗಿದೆ. ನ.23ರ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ. 26ರ ಶುಕ್ರವಾರ ನಾಮಪತ್ರ ಹಿಂತೆಗೆದುಕೊಳ್ಳಬಹುದಾಗಿದೆ.  ಡಿಸೆಂಬರ್ 10ರ ಬೆಳಿಗ್ಗೆ 8 […]