ದಕ್ಷಿಣ ಕನ್ನಡದ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಂಟ ಸಮುದಾಯಕ್ಕೆ ಟಿಕೇಟು

Saturday, April 21st, 2018
Bjp 4 bunts

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜಿಲ್ಲೆಯ ಎಲ್ಲಾ 8 ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದ್ದು 8 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಜಿಲ್ಲೆಯ ಪ್ರಭಾವಿ ಬಂಟ ಸಮುದಾಯಕ್ಕೆ ಬಿಜೆಪಿ ವರಿಷ್ಠರು ಟಿಕೆಟ್ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದ್ದು ಜಿಲ್ಲೆಯ ಕಮಲ ಪಾಳಯದಲ್ಲಿ ಬಂಡಾಯ ಸ್ಪೋಟಗೊಳ್ಳುವ ಪರಿಸ್ಥಿತಿ ಸೃಷ್ಠಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಹರೀಶ್ ಪೂಂಜಾ, ಬಂಟ್ವಾಳ ಕ್ಷೇತ್ರಕ್ಕೆ ರಾಜೇಶ್ ನಾಯ್ಕ್‌ ಉಳಿಪಾಡಿಗುತ್ತು, ಮಂಗಳೂರು ವಿಧಾನ ಸಬಾ […]

ಕುಂಬಳೆ : ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಯುಡಿಎಫ್ ಪ್ರಚಾರ ಆಂದೋಲನ

Tuesday, April 12th, 2016
omman Chandi

ಕುಂಬಳೆ: ಕೇರಳದಲ್ಲಿ ಅಭಿವೃದ್ದಿಯ ನೂತನ ಶಖೆಯನ್ನಾರಂಭಿಸಿದ ಯುಡಿಎಫ್ ಸರಕಾರವನ್ನು ಜನತೆ ಇನ್ನೊಂದು ಅವಧಿಗೆ ಆರಿಸುವ ಅಗತ್ಯವಿದೆ. ಇಲ್ಲದಿದ್ದರೆ ಯುಡಿಎಫ್ ಸರಕಾರ ಆರಂಭಿಸಿರುವ ಜನಪ್ರೀಯ ಯೋಜನೆಗಳು ಮೂಲೆಗುಂಪುಗೊಂಡು ಅಭಿವೃದ್ದಿಗೆ ಹಿನ್ನಡೆಯಾಗುವುದೆಂದು ರಾಜ್ಯದ ಮುಖ್ಯಮಂತ್ರಿ ಉಮ್ಮನ್‌ಚಾಂಡಿ ಅಭಿಪ್ರಾಯ ವ್ಯಕ್ತಪಡಿಸಿದರು. ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಯುಡಿಎಫ್ ಪ್ರಚಾರ ಆಂದೋಲನದ ಅಂಗವಾಗಿ ಸೋಮವಾರ ಸಂಜೆ ಕುಂಬಳೆಯಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪರ್ಯಟನೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮದ್ಯ ನಿಷೇಧದಂತಹ ಸವಾಲಿನ ಯೋಜನೆಯನ್ನು ಜ್ಯಾರಿಗೊಳಿಸಿರುವ ಯುಡಿಎಫ್ ಸರಕಾರ ಲಕ್ಷಾಂತರ […]

ವಿದ್ಯಾರ್ಥಿ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದ ಶಾಸಕ ಜೆ.ಆರ್.ಲೋಬೊ

Friday, September 20th, 2013
j.r. lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿರು ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಇತ್ತೀಚೆಗೆ ಎಬಿವಿಪಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ನಿವಾಸಕ್ಕೆ ಮುತ್ತಿಗೆ ಹಾಕಿರುವ ಘಟನೆಯ ಕುರಿತಂತೆ ಶಾಸಕರು ಗುರುವಾರ ನಗರದ ಕದ್ರಿ ಹಾಗೂ ಅಶೋಕನಗರದಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಹಾಸ್ಟೆಲ್ ಗೆ ಭೇಟಿ ನೀಡಿದ ಶಾಸಕರು ಹಾಸ್ಟೆಲ್ ಗಳ ಬಹುತೇಕ ಎಲ್ಲಾ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ […]

ಮಂಗಳೂರು ಕಾಂಗ್ರೆಸ್ ನಲ್ಲಿ ಟಿಕೇಟ್ ರಾಜಕೀಯ

Wednesday, October 24th, 2012
Rohan Lobo

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ರಾಜಕೀಯ ಈಗ ಗರಿಕೆದರಿಕೊಂಡಿದೆ. ಕ್ರಿಶ್ಚಿಯನ್ ಕೊಂಕಣಿಗರು ದೊಡ್ಡ ಸಂಖ್ಯೆಯಲ್ಲಿ ಮತದಾರರಾಗಿರುವ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಂಗಣದಲ್ಲಿ ಟಿಕೇಟ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎನ್ನುವ ವಿಚಾರ ಮತದಾರ ಪ್ರಭುಗಳಿಗೆ ಗೊಂದಲಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಟಿಕೇಟ್ ಮಂಗಳೂರು ವಿಧಾನಸಭಾದ ಲೆಕ್ಕಚಾರದ ಪ್ರಕಾರ ಕ್ರಿಶ್ಚಿಯನ್ ಸಮುದಾಯವರಿಗೆ ಸಿಗಬೇಕು ಎನ್ನುವ ನಿಯಮ ಚಾಲ್ತಿಯಲ್ಲಿತ್ತು. ಆದರೆ ಪ್ರತಿ ಬಾರಿನೂ ಇಂತಹ ಟಿಕೇಟ್ ಕ್ರಿಶ್ಚಿಯನ್ ಅಭ್ಯರ್ಥಿಗೆ ಸಿಕ್ಕಿದಾಗ ಸೋಲನ್ನೇ ನೆಚ್ಚಿಕೊಂಡರು. ಕಾಂಗ್ರೆಸ್ […]