ವಿಧಾನ ಸಭೆ ಚುನಾವಣೆಯ ಪೂರ್ವತಯಾರಿಯಾಗಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಚಿವ ರೈ ಚಾಲನೆ

Saturday, September 23rd, 2017
Mane manege congress

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಬೆಳಗೆ ಮಂಗಳೂರಿನಲ್ಲಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು. ಇನ್ನು ಕೆಲವೇ ತಿಂಗಳೊಳಗೆ ರಾಜ್ಯ ವಿಧಾನ ಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ  ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಕರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ […]

ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

Thursday, May 19th, 2016
ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

ಮಂಜೇಶ್ವರ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕುತೂಹಲಕಾರಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪ್ರತಿಸ್ಪರ್ಧಿ ಯುಡಿಎಫ್ ಅಭ್ಯರ್ಥಿ ಪಿ.ಬಿ ಅಬ್ದುಲ್ ರಸಾಕ್ ಎದುರು ಕೇವಲ 89 ಅಂತರದ ಸೋಲನುಭವಿಸಲು ಕಾರಣಗಳ ಲೆಕ್ಕಾಚಾರ ನಡೆಯುತ್ತಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದವರು ಬಿಜೆಪಿ ಮತ ವಿಭಜನೆಗೆ ಕಾರಣವೆಂದು ಪ್ರಾಥಮಿಕ ವರದಿಗಳು ತಿಳಿಸುತ್ತವೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ರವರ ಹೆಸರಿನೊಡನೆ ಹೆಚ್ಚು ತಾಳೆಯಾಗುವ ಪೆರ್ಲ ಪ್ರದೇಶದ ಕೆ.ಸುಂದರ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ467 ಮತಗಳನನು […]

ವಿಧಾನಸಭೆ ಚುನಾವಣೆಯಿಂದ ಸೊರಕೆ ಔಟ್

Tuesday, February 12th, 2013
Vinaykumar Sorake

ಮಂಗಳೂರು : ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಮತ್ತೊಮ್ಮೆ ಸಂಸದರಾಗುವ ಆಸೆ ಹೊತ್ತಿದ್ದಾರೆ. ವಿನಯ ಕುಮಾರ್ ಸೊರಕೆಯವರನ್ನು ವಿಧಾನ ಸಭೆಯ ಚುನಾವಣೆಯ ಅಭ್ಯರ್ಥಿಯಾಗಿಸುವ ಪ್ರಯತ್ನಗಳು ವಿಫಲವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವ ಉದ್ದೇಶದಿಂದ ಕಾಂಗ್ರೆಸ್ ನ ಹಿರಿಯ ನಾಯಕರು ವಿಧಾನಸಭೆಗೆ ವಿನಯ ಕುಮಾರ್ ಸೊರಕೆ ಹೆಸರನ್ನು ತೇಲಿ ಬಿಟ್ಟಿದ್ದರು. ಪುತ್ತೂರು ಮೂಲದವರಾದ ಸೊರಕೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯಲಿದ್ದಾರೆ ಎಂಬುದು ಒಂದು ಕಡೆ ಚರ್ಚೆಯಲ್ಲಿರುವಾಗಲೇ, ಸೊರಕೆಯ ಹೆಸರು ಬೆಳ್ತಂಗಡಿ […]