ಅಪಘಾತಕ್ಕೊಳಗಾಗಿದ್ದ ಎಎಸ್‌ಐ ನಾರಾಯಣ ನಾಯ್ಕ್ ವಿಧಿವಶ

Sunday, March 14th, 2021
Narayan nayak

ಮಂಗಳೂರು : ಪಾಂಡೇಶ್ವರ ಸಂಚಾರ ಪಶ್ಚಿಮ ಠಾಣಾ ಎಎಸ್‌ಐ ನಾರಾಯಣ ನಾಯ್ಕ್ ಎರಡು ವರ್ಷದ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 14 ರವಿವಾರ ಮೃತಪಟ್ಟಿದ್ದಾರೆ. 2018 ಅಕ್ಟೋಬರ್ 10ರಂದು ಹೈವೇ ಪ್ಯಾಟ್ರೋಲಿಂಗ್ ವೇಳೆ ಮೇರಿಹಿಲ್ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿ  ತೀವ್ರ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರ  ನೇತೃತ್ವದಲ್ಲಿ ಮಂಗಳೂರು ಸಿಎಆರ್ ಮೈದಾನದಲ್ಲಿ ಪಾರ್ಥಿವ ಶರೀರಕ್ಕೆ […]

ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ವಿಧಿವಶ

Thursday, September 24th, 2020
suresh-angadi

ಬೆಂಗಳೂರು  : ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ. 65 ವರ್ಷದ ಸುರೇಶ್ ಅಂಗಡಿ ಅವರು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2 ವಾರಗಳ ಹಿಂದೆ ಟ್ವೀಟ್ ಮಾಡಿದ್ದ ಅಂಗಡಿ ಅವರು ನಾನು ಕೊರೋನಾಗೆ ತುತ್ತಾಗಿದ್ದು ನನಗೆ ಯಾವುದೇ ರೋಗಲಕ್ಷಣಗಳು ಎಂದು ಟ್ವೀಟಿಸಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. 4 ಬಾರಿ ಲೋಕಸಭೆ […]

ಚಿತ್ರ ನಟ ಚಿರಂಜೀವಿ ಸರ್ಜಾ ವಿಧಿವಶ

Sunday, June 7th, 2020
chiranjevi-shaarja

ಬೆಂಗಳೂರು: ಸರ್ಜಾ ಕುಟುಂಬದ ಕುಡಿ ಕನ್ನಡದ ನಾಯಕ ನಟ ಚಿರಂಜೀವಿ ಸರ್ಜಾ ಅವರು ಉಸಿರಾಟದ ತೊಂದರೆಯಿಂದ ನಗರದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಭಾನುವಾರ  ಹೃದಯಾಘಾತ ದಿಂದ ಕೊನೆಯುಸಿರೆಳಿದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು . ಇಂದು ಮಧ್ಯಾಹ್ನ 3:00 ಗಂಟೆಗೆ ಅಪಾಯಿಂಟ್ಮೆಂಟ್ ಇತ್ತು. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಮನೆಯಲ್ಲಿ ಚಿರಂಜೀವಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಟ ಚಿರಂಜೀವಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆ  ಕಾಣಿಸಿಕೊಂಡಿದ್ದರಿಂದ ನಿಯಮಗಳಂತೆ […]

ಟೀಂ ಇಂಡಿಯಾ ಹಿರಿಯ ಅಭಿಮಾನಿ ಚಾರುಲತಾ ಪಟೇಲ್ ವಿಧಿವಶ

Thursday, January 16th, 2020
charulatha

ನವದೆಹಲಿ : 2019ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದಿದ್ದ ಪುರುಷರ ಕ್ರಿಕೆಟ್ ವಿಶ್ವಕಪ್ ವೇಳೆ ಸಾಕಷ್ಟು ಸುದ್ದಿ ಮಾಡಿದ್ದ ಟೀಂ ಇಂಡಿಯಾ ಹಿರಿಯ ಅಭಿಮಾನಿ ಚಾರುಲತಾ ಪಟೇಲ್ ವಿಧಿವಶರಾಗಿದ್ದಾರೆ. 87 ವರ್ಷದ ಚಾರುಲತಾ ಪಟೇಲ್ ಅವರು ವಿಶ್ವಕಪ್ ಪಂದ್ಯದ ವೇಳೆ ಭಾರಿ ಜನಪ್ರೀಯತೆ ಪಡೆದಿದ್ದ ಸೂಪರ್ ಫ್ಯಾನ್ ಅಜ್ಜಿ ಜನವರಿ 13ರಂದು ಮೃತರಾಗಿದ್ದಾರೆ. ಈ ಬಗ್ಗೆ ಬಿಸಿಸಿಐ ತನ್ನ ಟ್ವಿಟ್ಟರ್ ನಲ್ಲಿ ಪ್ರಕಟಿಸಿದೆ. ವಿಶ್ವಕಪ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ ಅಜ್ಜಿ […]

ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀ ವಿಧಿವಶ

Sunday, December 29th, 2019
pejawar-seer

ಉಡುಪಿ: ಪೇಜಾವರ ಮಠದ 32 ನೇ ಯತಿಗಳಾದ ವಿಶ್ವೇಶತೀರ್ಥ ಶ್ರೀಗಳು ಪೇಜಾವರ ಮಠದಲ್ಲಿ ಆದಿತ್ಯವಾರ ಬೆಳಿಗ್ಗೆ 9.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ಅವರ ಕೊನೆಯ ಆಸೆಯಂತೆ ಉಡುಪಿ ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿತ್ತು. ವೈದ್ಯರೂ ಮಠದಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ 88 ವರ್ಷ ವಯಸ್ಸಿನ ಪೇಜಾವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಪೇಜಾವರ ಶ್ರೀಗಳ ಪಾರ್ಥಿವ ಶರೀರ ರವಾನೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರಿಗೆ ದರ್ಶನ. ವಿದ್ಯಾಪೀಠದಲ್ಲಿ ಮಠದ ಶಿಷ್ಯರಿಗೆ ಮಾತ್ರ ದರ್ಶನಕ್ಕೆ ಅವಕಾಶ. […]

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ವಿಧಿವಶ

Tuesday, August 7th, 2018
Karunanidhi

ಚೆನ್ನೈ:  ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಕಳೆದ 10 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಇಂದು ಮತ್ತಷ್ಟು ಕ್ಷೀಣಿಸಿತ್ತು. ಅಂಗಾಂಗಳ ಕಾರ್ಯನಿರ್ವಹಣೆಯೂ ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಡಿಎಂಕೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದು,  ಆಸ್ಪತ್ರೆ ಒಳಗೆ ಮತ್ತು ಹೊರಗೆ […]

ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಿಧಿವಶ

Tuesday, December 10th, 2013
Srikantadatta Narasimharaja Wodeyar

ಬೆಂಗಳೂರು : ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರು ಮಂಗಳವಾರ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಒಂದು ವಾರದ ಹಿಂದೆ ಎದೆನೋವಿನ ಕಾರಣ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಮಹಾರಾಜರನ್ನು ಕರೆ ತರಲಾಗಿತ್ತು. ಆಸ್ಪತ್ರೆಗೆ ಬರುವಷ್ಟರಲ್ಲೇ ಒಡೆಯರ್ ಅವರು ವಿಧಿವಶರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿರುವ ತುರ್ತು ನಿಗಾ ಘಟಕದಲ್ಲಿ ಒಡೆಯರ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಒಡೆಯರ್ […]

ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

Monday, December 26th, 2011
ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದರು. 1991ರಿಂದ 92ರವರೆಗೆ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ “ನಾನು ಮತ್ತು ದೇವೇಗೌಡರು ರಾಜಕೀಯದಿಂದ ಯಾವತ್ತೂ ರಾಜಕೀಯದಿಂದ ನಿವೃತ್ತರಾಗುವುದಿಲ್ಲ” ಎಂದು ಬಂಗಾರಪ್ಪ ಸರಿಯಾಗಿ ಒಂದು ವರ್ಷದ […]

ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶ

Thursday, October 6th, 2011
Matturu

ಬೆಂಗಳೂರು : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದಲ್ಲಿ 1929 ಆಗಸ್ಟ್ 8ರಂದು ಜನಿಸಿದ್ದ ಕೃಷ್ಣಮೂರ್ತಿ ಅವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕುಮಾರ ಪರ್ವ, ದ್ರೌಪದಿ ಸ್ವಯಂವರ, ಮಹಾಭಾರ ಉದ್ಯೋಗ ಪರ್ವ ಸೇರಿದಂತೆ ಭಾರತೀಯ ಹಬ್ಬಗಳ ಕುರಿತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಮತ್ತೂರಿನಲ್ಲಿ ರಾಮಕೃಷ್ಣಯ್ಯ ಮತ್ತು […]