ವಿನಾಯಕ ಬಾಳಿಗಾ ಕೊಲೆ : ತೇಜೋ ವಧೆ ಯತ್ನ ಸಲ್ಲದು
Tuesday, March 27th, 2018ಮಂಗಳೂರು: ಹತ್ಯೆಗೀಡಾದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಅದು ಸಹ್ಯವಲ್ಲ ಎಂದು ಜಿ.ಹನುಮಂತ ಕಾಮತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿನಾಯಕ ಬಾಳಿಗ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ ಎಂದರು. ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ನರೇಶ ಶೆಣೈ ಅವರಿಗೂ ನನಗೂ 25 ವರ್ಷಗಳ ಸ್ನೇಹ. ಒಬ್ಬ ವ್ಯಕ್ತಿಯ ಮೇಲೆ ಆರೋಪ ಬಂತು ಎಂದ ಮೇಲೆ ಆತನ […]