ವಕೀಲರಿಗೆ ಆರೋಗ್ಯ ವಿಮೆ, ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಭರವಸೆ
Tuesday, July 20th, 2021ಬೆಂಗಳೂರು: ಕಾನೂನು ಸೇವೆಯಲ್ಲಿ ತೊಡಗಿರುವ ವಕೀಲರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಸರ್ಕಾರದ ವತಿಯಿಂದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರು ವಕೀಲರ ಸಂಘ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ನ್ಯಾಯವಾದಿಗಳಿಗೆ ಏರ್ಪಡಿಸಿದ್ದ ನುಡಿನಮನ ಮತ್ತು ಸಾಂತ್ವನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವಾರು ವರ್ಷಗಳ ಹಿಂದೆ ಪ್ಲೇಗ್ ಬಂದು ಜನ ಸತ್ತಿರುವುದನ್ನು ನಾವು ಕೇಳಿದ್ದೇವೆ. ಆದರೆ ನಮ್ಮ ಜೀವಮಾನದ ಅವಧಿಯಲ್ಲಿ […]