ಅಗ್ನಿವೀರನಾಗಿ ಆಯ್ಕೆಗೊಂಡ ಪುನೀತ್‌ರಾಜ್‌ಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ

Thursday, October 24th, 2024
Puneeth-Raj

ಪುತ್ತೂರು : ಭಾರತೀಯ ಸೇನೆ ನಡೆಸುವ ʼಅಗ್ನಿಪಥ್‌ʼ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಪುನೀತ್‌ರಾಜ್‌ ʼಅಗ್ನಿವೀರ್‌ʼ ಗೆ ಆಯ್ಕೆಗೊಂಡಿರುತ್ತಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಮಲೆನಾಡಿನ ತಪ್ಪಲು ಗ್ರಾಮವಾದ ಕೊಂಬಾರಿನವರಾದ ಇವರು ಬಡತನದ ಬೇಗೆಯಲ್ಲಿ ಬೆಂದು ಬೆಳೆದವರು. ಎಳವೆಯಲ್ಲಿಯೇ ತಂದೆಯನ್ನು ಕಳೆದುಕೊಂಡ ಇವರು ಸ್ವಂತ ಮನೆಯೂ ಇಲ್ಲದೆ ಬಂಧುಗಳ ಆಶ್ರಯದಲ್ಲಿ ತಾಯಿಯ ಜೊತೆ ವಾಸಮಾಡುತ್ತಿದ್ದರು.ದುರ್ದೈವವೆಂದರೆ, ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ತಾಯಿಯೂ ಮೃತಪಟ್ಟರು. ಬಳಿಕ ಮಾವನ ನೆರವಿನೊಂದಿಗೆ ವಿದ್ಯಾಭ್ಯಾಸ ಮುಂದುವರಿಸಿದ ಇವರು, […]

“ವಿದ್ಯಾರ್ಥಿಗಳು ಆಂತರಿಕವಾಗಿ ಅರಳುವಂತಾಗಲಿ”-ಡಾ. ವಿಜಯ ಸರಸ್ವತಿ

Wednesday, June 26th, 2024
vivekananda-college

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆಯ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ. ವಿಜಯ ಸರಸ್ವತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಆಧುನಿಕ ಯುಗದಲ್ಲಿ ಸಾಕಷ್ಟು ಸಾಮಾಜಿಕ ಸ್ಥಿತ್ಯಂತರಗಳು ಆಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದರ ಪರಿಣಾಮ ಬದಲಾದ ಭಾರತ. ವಾಣಿಜ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳು […]