ಅಕ್ರಮ ಗೋ ಸಾಗಾಟ ಮತ್ತು ಅಕ್ರಮ ಮತಾಂತರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ : ವಿ. ಸುನಿಲ್ ಕುಮಾರ್

Friday, September 24th, 2021
Sunil Kumar

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ ಸುನಿಲ್ ಕುಮಾರ್ ರವರು ಕಟ್ಟು ನಿಟ್ಟಿನ ಸೂಚನೆ […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಪವರ್” ತುಂಬಿದ ಸಚಿವ ಸುನಿಲ್ ಕುಮಾರ್

Friday, September 17th, 2021
Kannada Pradhikara

ಬೆಂಗಳೂರು : ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಆ ನಿಟ್ಟಿನಲ್ಲಿ ಚಾರಿತ್ರಿಕ ಆದೇಶ ಹೊರಡಿಸು ಮೂಲಕ ದೃಢ ಅಡಿ ಇಟ್ಟಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ […]

ಖಡ್ಸಲೆಗೆ ಕಾಂಗ್ರೆಸ್ಸಿನಿಂದ ಅಪಮಾನ : ಸುನಿಲ್ ಕುಮಾರ್ ಖಂಡನೆ

Thursday, July 8th, 2021
SunilKumar

ಕಾರ್ಕಳ : ತುಳುನಾಡಿನ ದೈವಾರಾಧನೆಯು ಬಹು ಹಿಂದಿನ ಕಾಲದಿಂದಲೂ ಕಟ್ಟು ಕಟ್ಟಲೆಗಳನ್ನೊಳಗೊಂಡು ನಡೆದು ಬರುತ್ತಿರುವ ಧಾರ್ಮಿಕ ಆಚರಣೆ. ಇದರಲ್ಲಿ ದೈವಗಳು ನುಡಿ ಕೊಡುವ ಖಡ್ಸಲೆ (ದೈವದ ಖಡ್ಗ) ಇದಕ್ಕೆ ಅದರದೇ ಆದ ವಿಶಿಷ್ಟ ಪ್ರಾದಾನ್ಯತೆ ಇದೆ. ದೈವಾರಾಧನೆಗೆ ಒಂದು ಶಕ್ತಿ ಇದೆ. ಆ ಖಡ್ಸಲೆಯಲ್ಲಿ ಕೊಡುವ ನುಡಿಯನ್ನು ಇಡೀ ತುಳುನಾಡು ಪಾಲನೆ ಮಾಡಿಕೊಂಡು ಬರುತ್ತಿದೆ. ಇಂತಹ ಪ್ರಾಮುಖ್ಯತೆ ಹೊಂದಿರುವ ಖಡ್ಸಲೆಯನ್ನು ಒಂದು ರಾಜಕೀಯ ವೇದಿಕೆಯಲ್ಲಿ ರಾಜಕೀಯ ಮುಖಂಡರಿಗೆ ಸ್ಮರಣಿಕೆಯಾಗಿ ಕೊಟ್ಟಿರುವುದು ಕಾಂಗ್ರೆಸ್ ಪಕ್ಷದ ದಿವಾಳಿತನ, ಕಾಂಗ್ರೆಸ್ ಪಕ್ಷ […]

ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೋನ ದೃಢ

Friday, April 2nd, 2021
Sunil Kumar

ಕಾರ್ಕಳ : ಸದಾ ಬ್ಯುಸಿಯಲ್ಲಿರುವ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಕೊರೋನ ಪಾಸಿಟಿವ್‌ ದೃಢಪಟ್ಟಿದೆ. ಕೇರಳ ಬಿಜೆಪಿ ಸಹ ಪ್ರಭಾರಿಯಾಗಿರುವ ಸುನಿಲ್‌ ಕುಮಾರ್‌ ಅವರು ಕಳೆದ ಮೂರು ತಿಂಗಳಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಇಂದು ಅವರಿಗೆ ಕೊರೋನ ಪಾಸಿಟಿವ್‌ ದೃಢಪಟ್ಟಿದ್ದು, ಶಾಸಕರು ಕ್ವಾರಂಟೈನ್‌ನಲ್ಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಅವರು ವಿನಂತಿಸಿದ್ದಾರೆ.

ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನಸಭೆ ಮುಖ್ಯ ಸಚೇತಕರಾಗಿ ನೇಮಕ

Friday, October 11th, 2019
sunil-kumar

ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ನೇಮಕಗೊಂಡಿದ್ದಾರೆ. ಮೂರನೇ ಬಾರಿಗೆ ಶಾಸಕರಾಗಿರುವ ಅವರು ಈ ಹಿಂದೆ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿದ್ದರು. 2002ರಲ್ಲಿ ಬಜರಂಗ ದಳ ರಾಜ್ಯ ಸಂಚಾಲಕರಾಗಿ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.  

ಜನಪ್ರಿಯ ಶಾಸಕ ವಿ. ಸುನಿಲ್‌ ಕುಮಾರ್‌

Friday, May 11th, 2018
sunil-kumar

ಕಾರ್ಕಳ: ಬಿಜೆಪಿ ಮುಖಂಡ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಸತತ ಮಾರನೇ ಬಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಲು ಕಾತರದಿಂದ ಇದ್ದಾರೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರುದ್ಧ ಅಲೆ ಇದ್ದರೂ ಕೂಡ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಜಯಗಳಿಸಿದ್ದರು.  ಈ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ಅವರು ಈ ಬಾರಿಯ ಚುನಾವಣೆಯಲ್ಲಿ ಇನಷ್ಟು ಮತಗಳ ಅಂತರದಿಂದ ಜಯಗಳಿಸಬಹುದು ಎಂದು ಜನರು ಲೆಕ್ಕ ಹಾಕುತ್ತಿದ್ದಾರೆ. ಬಿಜೆಪಿ ಮುಖಂಡ ಕಾರ್ಕಳದ ಹಾಲಿ ಶಾಸಕ ಸುನಿಲ್‌ […]

ಕಾರ್ಕಳದಲ್ಲಿ ಮಾದರಿ ಆಡಳಿತ: ಮಟ್ಟಾರು

Saturday, February 10th, 2018
karkala

ಕಾರ್ಕಳ: ಅನೇಕ ವಿಚಾರಗಳಲ್ಲಿ ಕಾರ್ಕಳ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಕಾಲದಲ್ಲಿ ವಿ. ಸುನಿಲ್‌ ಕುಮಾರ್‌ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಆಡಳಿತಾವಧಿಯಲ್ಲಿ ಅಚ್ಚರಿಯ ರೀತಿಯಲ್ಲಿ ಕ್ಷೇತ್ರ ಅಭಿಚೃದ್ಧಿಯಾಗಿದೆ. ಮಾದರಿ ಆಡಳಿತದಿಂದಾಗಿ ಪ್ರಸ್ತುತ ಕಾರ್ಕಳ ರಾಜ್ಯದಲ್ಲಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ತಾ.ಪಂ. ಕಚೇರಿ ಸಮೀಪ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್‌ ಕಾರ್ಡ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಸಕ ವಿ. […]