ವೀಕೆಂಡ್ ಕರ್ಫ್ಯೂ : ಮಂಗಳೂರಲ್ಲಿ ವಿರಳವಾಗಿ ಬಸ್ ಸಂಚಾರ, ಜೊತೆಗೆ ಜನ ಸಂಚಾರವು ಇದೆ

Saturday, January 8th, 2022
Mangalore Weekend

ಮಂಗಳೂರು : ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮಧ್ಯೆಯೂ ಬಸ್ಸುಗಳ ಸಂಚಾರವಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಜನ ಸಂಚಾರವು ಇದೆ. ಆದರೆ ಅನಗತ್ಯ ಸಂಚಾರ ನಡೆಸಿರುವ ವಾಹನಗಳನ್ನು ಮಂಗಳೂರು ಪೊಲೀಸರು ತಡೆ ಹಿಡಿದಿದ್ದಾರೆ. ಕ್ಲಾಕ್ ಟವರ್ ಬಳಿ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಕಾರಣವಿಲ್ಲದೆ ವಾಹನಗಳಲ್ಲಿ ಸಂಚಾರ ಮಾಡುವವರನ್ನು ತಡೆದು ದಂಡ ಹಾಕುವ ಪ್ರಕ್ರಿಯೆ ಪೊಲೀಸರಿಂದ ನಡೆಯುತ್ತಿದೆ. ನಗರದಲ್ಲಿ ಬೆಳಗ್ಗೆಯಿಂದ ಸುಮಾರು 25ಕ್ಕೂ‌ಅಧಿಕ ದ್ವಿಚಕ್ರ ವಾಹನ  ಗಳನ್ನು ಜಪ್ತಿ ಮಾಡಿ. ಮಾಸ್ಕ್ […]

ವೀಕೆಂಡ್ ಕರ್ಫ್ಯೂ ಹಾಗೂ ಕೊರೋನಾ ನಿರ್ಬಂಧಗಳನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

Friday, January 7th, 2022
cpim Protest

ಮಂಗಳೂರು : ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು (07-01-2021) ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿಯವರು,‍ *ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ […]

ವೀಕೆಂಡ್ ಕರ್ಫ್ಯೂನಲ್ಲಿ ಏನೆಲ್ಲಾ ಇದೆ ಎಂಬ ಮಾಹಿತಿ ಇಲ್ಲಿದೆ

Wednesday, January 5th, 2022
weekend-curfew

ಮಂಗಳೂರು : ಐಟಿ ಕೈಗಾರಿಕೆಗಳು, ಇತರ ಕೈಗಾರಿಕೆಗಳು, ಬೀದಿಬದಿ ವ್ಯಾಪಾರ, ಆಹಾರ ದಿನಸಿ, ಹಣ್ಣುಹಂಪಲುಗಳು, ಡೈರಿ, ಹಾಲಿನ ಬೂತ್ ಗಳು, ಪಡಿತರ, ಆಹಾರ ಪೂರೈಕೆ ಮಾಡುವ ಸಂಸ್ಥೆಗಳು ವೀಕೆಂಡ್ ಕರ್ಫ್ಯೂನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು  ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದರು. ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ […]

ವೀಕೆಂಡ್ ಕರ್ಫ್ಯೂ ತೆರವುಗೊಳಿಸದಿದ್ದಲ್ಲಿ ಅಂಗಡಿ ತೆರದಿಟ್ಟು ಪ್ರತಿಭಟನೆ : ಜೋನ್ ಕುಟಿನ್ಹಾ

Thursday, September 2nd, 2021
Puttur Weekend curfew

ಪುತ್ತೂರು : ಜಿಲ್ಲಾಡಳಿತವು ವೀಕೆಂಡ್ ಕರ್ಫ್ಯೂ ತೆರವುಗೊಳಿಸದಿದ್ದಲ್ಲಿ ಶನಿವಾರ ಎಲ್ಲಾ ವರ್ತಕರು ಅಂಗಡಿ ಮುಂಗಟ್ಟು ತೆರದಿಟ್ಟು ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ ಎಚ್ಚರಿಸಿದ್ದಾರೆ. ಪುತ್ತೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಸಂಜೆ 7ರ ಬಳಿಕ ನಡೆಯುವ ಅನೇಕ ಉದ್ಯಮಗಳಿವೆ. ಅಲ್ಲದೆ ಶನಿವಾರ ಮತ್ತು ರವಿವಾರ ಮಾತ್ರ ನಡೆಯುವ ಸಾಕಷ್ಟು ವ್ಯವಹಾರಗಳಿವೆ, ಆದರೆ ಕೊರೋನ ನಿರ್ನಾಮವಾಗಲು ಇನ್ನೂ ಹಲವು ವರ್ಷಗಳು ತಗಲಬಹುದು. ಇದಕ್ಕೆ ಲಾಕ್ಡೌನ್, […]

ಕೋವಿಡ್ ನಿಯಂತ್ರಣಕ್ಕೆ ಎಂಟು ಜಿಲ್ಲೆಗಳಲ್ಲಿ `ವೀಕೆಂಡ್ ಕರ್ಫ್ಯೂ’ವನ್ನು ಜಾರಿ

Friday, August 6th, 2021
Basavaraja Bommai

ಬೆಂಗಳೂರು : ಕರ್ನಾಟಕ ರಾಜ್ಯದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ `ವೀಕೆಂಡ್ ಕರ್ಫ್ಯೂ’ವನ್ನು ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9ಗಂಟೆಯಿಂದಲೇ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಮಾರ್ಗಸೂಚಿ ಪಾಲಿಸಿ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಪೂಜೆ, […]

ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ವಾಹನ ಮುಟ್ಟುಗೋಲು

Sunday, May 9th, 2021
police Commissioner

ಮಂಗಳೂರು :  ಕೊರೋನ ಲಾಕ್ ಡೌನ್ ಸಂದರ್ಭ ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ಅಂತಹವರ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ರವಿವಾರ ಸಾಮಾಜಿ ಜಾಲತಾಣಗಳ ಲೈವ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ. ನಾಗರಿಕರ ಹಿತದೃಷ್ಟಿಯಿಂದ ಕೋವಿಡ್, ವೀಕೆಂಡ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಮೆಡಿಕಲ್, ವೈದ್ಯಕೀಯ, ಪತ್ರಿಕೆ ಸಹಿತ ತುರ್ತು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ ಕೆಲವರು ನಿರ್ಗತಿಕರಿಗೆ ಊಟದ ವ್ಯವಸ್ಥೆ ನೀಡುತ್ತಿದ್ದೇವೆ ಎಂದು ಹೇಳಿಕೊಂಡು […]

ವೀಕೆಂಡ್‌ ಕರ್ಫ್ಯೂ ನಡುವೆಯೇ ವಿವಾಹ : ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹಕ್ಕೆ ಪೊಲೀಸರ ಬೆಂಬಲ

Sunday, April 25th, 2021
Tungappa Bangera

ಬೆಳ್ತಂಗಡಿ :  ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ವೀಕೆಂಡ್‌ ಕರ್ಫ್ಯೂ ಮತ್ತು ಇತರ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 25 ರ ಭಾನುವಾರ ಆಯೋಜಿಸಲಾಗಿದೆ. ಪುಂಜಾಲಕಟ್ಟೆಯ ಪೊಲೀಸ್‌ ಠಾಣೆಯ ಸಮೀಪದಲ್ಲೇ ಇನ್ನು ಈ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಜನರು ಸೇರಿ ಕೊರೊನಾ ಉಲ್ಲಂಘನೆ ಯಾಗುತ್ತಿದ್ದರೂ ಕೂಡಾ ಪೊಲೀಸರು ಮಧ್ಯಪ್ರವೇಶ ಮಾಡಿಲ್ಲ. ಸಾಮಾನ್ಯ ಜನರ ವಿರುದ್ದ ಪ್ರಕರಣ […]

ನೈಟ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಭಾನುವಾರ ನಿರ್ಧಾರ, ಏಪ್ರಿಲ್ 20ರ ವರೆಗೆ ಯಥಾಸ್ಥಿತಿ

Friday, April 16th, 2021
yedyurappa

ಬೆಂಗಳೂರು :  ರಾಜ್ಯ ರಾಜಧಾನಿಯಲ್ಲಿ ಆತಂಕಕಾರಿ ಮಟ್ಟದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುವ ಸೂಚನೆ ಇದೆ.  ನಗರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಬಿಗಿಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ. ಆದರೆ, ಏಪ್ರಿಲ್ 20, ಮಂಗಳವಾರದವರೆಗೂ ಈಗಿರುವ ಕ್ರಮಗಳನ್ನ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ. ಜನತಾ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೊದಲಾದ ಕ್ರಮಗಳ ಬಗ್ಗೆ ಭಾನುವಾರ ನೋಡೋಣ. […]