ವೆನ್ ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ, ಪತ್ತೆಗಾಗಿ ಪೊಲೀಸ್ ತಂಡ ರಚನೆ

Sunday, July 5th, 2020
Devaraj

ಮಂಗಳೂರು  : ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಇಂದು ಈತನಿಗೆ ಕೋವಿಡ್ 19 ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ‌. ಈತನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದರೆ […]

ವೆನ್ ಲಾಕ್ ಆಸ್ಪತ್ರೆಯ 5 ಕೋವಿಡ್ ರೋಗಿಗಳು ಗುಣಮುಖರಾಗಿ ಬಿಡುಗಡೆ

Saturday, May 23rd, 2020
Covid-discharge

ಮಂಗಳೂರು: ವೆನ್ ಲಾಕ್ ಕೋವಿಡ್ ಆಸ್ಪತ್ರೆಯಿಂದ ಐವರು ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ. ಬಂಟ್ವಾಳದ ಮೂವರು ಮತ್ತು ಮಂಗಳೂರೂ ಬೊಳೂರಿನ ಇಬ್ಬರು ಸೋಂಕಿತ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಮೂವರು ಬಂಟ್ವಾಳದ ಸೋಂಕಿತರು ಬಿಡುಗಡೆಯಾಗಿದ್ದಾರೆ.  ಇವರಲ್ಲಿ ದೃಷ್ಟಿ ಕಳೆದುಕೊಂಡ ಹಿರಿಯರೊಬ್ಬರೂ ಇದ್ದಾರೆ. ಈ ಮೂಲಕ ಜಿಲ್ಲೆಯ ಅತೀ ದೊಡ್ಡ ಕೋವಿಡ್-19 ಹಾಟ್ ಸ್ಪಾಟ್ ಆಗಿದ್ದ ಬಂಟ್ವಾಳ ಈಗ ಸೋಂಕು ಮುಕ್ತವಾಗಿದೆ. ದ.ಕ‌ ಜಿಲ್ಲಾಡಳಿತವು ಇಂದು ಡಿಸ್ಚಾರ್ಜ್ ಆದ ರೋಗಿಗಳನ್ನು ಬೀಳ್ಕೊಟ್ಟಿದೆ ಸದ್ಯ ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ […]

ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಬಗ್ಗೆ ಮಾಹಿತಿ ನೀಡಲು ಅಲ್ಲಲ್ಲಿ ಹೆಲ್ಪ್ ಡೆಸ್ಕ್

Tuesday, March 24th, 2020
helpdesk

ಮಂಗಳೂರು : ವೆನ್‍ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸಂಶಾಯಾಸ್ಪದ ಪ್ರಕರಣಗಳಿಗೆ 8 ವಿಶೇಷ ಪ್ರತ್ಯೇಕ ಕೊಠಡಿಗಳನ್ನು ಕಾದಿರಿಸಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಬಂದರೆ, ಅಂತಹ ರೋಗಿಗಳನ್ನು ಈ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬೊಬ್ಬರನ್ನು ಒಂದೊಂದು ಕೊಠಡಿಗೆ ಕಾದಿರಿಸಿ ದಾಖಲಿಸಲಾಗುತ್ತಿದೆ. ಅವರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪರೀಕ್ಷೆ ನೆಗೆಟಿವ್ ಬಂದರೆ ಅವರಿಗೆ 14 ದಿನಗಳ ನಿಗಾವಣೆಯಲ್ಲಿರಲು ಸೂಚನೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ. ಪೊಸಿಟಿವ್ ಬಂದರೆ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿಯಂತೆ ಚಿಕಿತ್ಸೆ ಕೊಡಲಾಗುತ್ತದೆ. ಇದಕ್ಕಾಗಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ, […]

ವಾಹನ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಮಹಿಳೆ ಮೃತ್ಯು

Tuesday, March 22nd, 2016
Mahile

ಬಂಟ್ವಾಳ; ಪಾಣೆಮಂಗಳೂರು ಗ್ರಾಮದ ಬೋಳಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾ.14 ರಂದು ಅಪಘಾತ ನಡೆದಿದ್ದು, ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಮೃತದೇಹದ ಶವಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮಂಗಳೂರಿನ ಶವಾಗಾರದಲ್ಲಿರಿಸಲಾಗಿದೆ. ಮೃತ ಮಹಿಳೆಯ ವಾರೀಸುದಾರರಿದ್ದಲ್ಲಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ(08255-281111)ಯನ್ನು ಸಂಪರ್ಕಿಸುವಂತೆ ಸಂಚಾರಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಇಳಿಕೆ-ಸುಭೋದ್ ಯಾದವ್

Saturday, December 4th, 2010
ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಒಂದು ಸಾವಿರ ಶಿಶುಗಳ ಜನನದಲ್ಲಿ ಶಿಶು ಮರಣ ಪ್ರಮಾಣ 10-11 ಕ್ಕೆ ಇಳಿದಿದೆಯೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ತಿಳಿಸಿದ್ದಾರೆ. ಅವರು ಇಂದು ನಗರದ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ವತಿಯಿಂದ ಆಯೋಜಿಸಿದ್ದ ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆ […]