ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನ ನುಂಗಿದ ಕಳ್ಳ

Monday, May 31st, 2021
shibu

ಮಂಗಳೂರು : ಪೊಲೀಸರು ಬಂಧಿಸಿದ್ದ ಕಳ್ಳನೊಬ್ಬ ಕಳ್ಳತನ  ಮಾಡಿದ ಚಿನ್ನದ ಉಂಗುರಗಳನ್ನೇ ನುಂಗಿ ದ ಘಟನೆ ಸುಳ್ಯದಲ್ಲಿ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಶಿಬು ಎಂಬಾತ ಸುಳ್ಯ, ಪುತ್ತೂರಿನಲ್ಲಿ ಕಳ್ಳತನ ಮಾಡಿದ ಚಿನ್ನ ನುಂಗಿ ತೀವ್ರ ಹೊಟ್ಟೆ ನೋವಿನಿಂದ ನೋವಿಗೆ ಒಳಗಾಗಿದ್ದು, ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಹೊಟ್ಟೆಯಿಂದ 35 ಗ್ರಾಂ ತೂಕದ ಉಂಗುರಗಳನ್ನು ವೈದ್ಯರು ಹೊರ ತೆಗೆದಿದ್ದು,ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.‌ ಬಳಿಕ ಶಿಬುವನ್ನು […]

107 ವರ್ಷದ ಈ ಅಜ್ಜಿ ಕೊರೊನಾ ಜಯಿಸಿದ್ದು ಹೇಗೆ ಗೊತ್ತಾ?

Tuesday, May 25th, 2021
kalamma

ಬೆಂಗಳೂರು : ಚಿಕ್ಕಬಳ್ಳಾಪುರ ಮೂಲದ 107 ವರ್ಷದ ವೃದ್ಧೆಯೊಬ್ಬರು ಸೋಂಕಿನ ವಿರುದ್ಧ ಹೋರಾಡಿ ಸಂಪೂರ್ಣ ಗುಣಮುಖರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟತಾಲೂಕಿನ ಯನ್ನೂರು ಗ್ರಾಮದ ಕಾಳಮ್ಮ (107) ಸೋಂಕು ಗೆದ್ದವರು. ನಗರದ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಯಲ್ಲಿ ಶತಾಯುಷಿ ಕಾಳಮ್ಮ ಅವರಿಗೆ ಚಿಕಿತ್ಸೆ ನೀಡಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾಜ್‌ ಮಾಡಿ ಮನೆಗೆ ಕಳುಹಿಸಲಾಯಿತು. ವೈದ್ಯರ ಚಿಕಿತ್ಸೆ ಹಾಗೂ ಇಚ್ಛಾಶಕ್ತಿಯಿಂದ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿರುವ ಕಾಳಮ್ಮ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಯನ್ನೂರಿನಲ್ಲಿ ನೆಲೆಸಿರುವ ಕಾಳಮ್ಮ ಅವರಿಗೆ […]

ಕೋವಿಡ್-19 ರ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ : ಬಿ ಎಸ್ ಯಡಿಯೂರಪ್ಪ

Saturday, May 15th, 2021
BS Yediturappa

ಬೆಂಗಳೂರು : ಕೋವಿಡ್-19 ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಲ್ಲಿ ಇಂದು ಅಭಿಪ್ರಾಯಪಟ್ಟರು. ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ವೈದ್ಯರೊಂದಿಗೆ ವೀಡಿಯೋ ಸಂವಾದ ನಡೆಸಿ ವೈದ್ಯರ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದರಲ್ಲದೆ, ವೈದ್ಯರು ಸೇವೆಯಲ್ಲಿ […]

ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ವೈದ್ಯರ ಪ್ರತಿಭಟನೆ

Saturday, December 12th, 2020
IMA

ಮಂಗಳೂರು: ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಆದೇಶಿಸಿರುವುದನ್ನು ಖಂಡಿಸಿ ನಗರದ ಐಎಂಎ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದರು. ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಇದಕ್ಕೆ ಬೆಂಬಲ ಸೂಚಿಸಿದ ದ.ಕ ಜಿಲ್ಲೆಯ ವೈದ್ಯರು ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ‌. ವೈದ್ಯರು ಕಪ್ಪು ಪಟ್ಟಿ […]

ಕೋರೊನಾ ಸೋಂಕಿತರ ಜತೆ ವೈದ್ಯರ ಬ್ಯಾಡ್ಮಿಂಟನ್

Tuesday, July 21st, 2020
badminton

ಹುಬ್ಬಳ್ಳಿ: ಕೊರೊನಾ ವೈರಸ್ ರೋಗಿಗಳನ್ನು ಕೊವಿಡ್ ಕೇಂದ್ರಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಅನೇಕ ಘಟನೆಗಳು ನಡೆದಿವೆ. ಇಂತಹದ ನಡುವೆ ಕೊವಿಡ್ ರೋಗಿಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿರುವ ವೈದ್ಯರು ಹಾಗೂ ಆಸ್ಪತ್ರೆಗಳ ಸಹ ಗಮನ ಸೆಳೆಯುತ್ತಿದೆ. ಹುಬ್ಬಳ್ಳಿಯ ಕೊರೊನಾ ಆಸ್ಪತ್ರೆಯಲ್ಲಿ ಕೊವಿಡ್ ರೋಗಿಗಳ ಜೊತೆ ಸ್ವತಃ ವೈದ್ಯರು ಬ್ಯಾಡ್ಮಿಂಟನ್ ಆಟ ಆಡುತ್ತಿದ್ದಾರೆ. ಕೊವಿಡ್ ರೋಗಿಗಳು ಮತ್ತು ವೈದ್ಯರು ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ಕೊವಿಡ್ […]

ರಮಾನಾಥ ರೈ ಸಹೋದರ ಬೆಳ್ಳಿಪ್ಪಾಡಿ ಸತೀಶ್ ರೈ ನಿಧನ

Wednesday, May 2nd, 2018
Satish Rai

ಮಂಗಳೂರು : ರಾಜ್ಯ ಪರಿಸರ ಹಾಗೂ ಅರಣ್ಯ ಇಲಾಖೆ ಸಚಿವ ಬಿ. ರಮಾನಾಥ ರೈ ಯವರ ಹಿರಿಯ ಸಹೋದರ  ಬೆಳ್ಳಿಪ್ಪಾಡಿ  ಡಾ. ಸತೀಶ್ ರೈ (74 ವರ್ಷ) ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಇಂದು ಸಂಜೆ  ಬೆಂಗಳೂರಿನಲ್ಲಿ ನಿಧನಹೊಂದಿದರು ಎಂದು ಅವರ ಆಪ್ತ ಮೂಲಗಳು ಮೇಗಾ ಮೀಡಿಯಾ ನ್ಯೂಸ್‌ಗೆ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆ ಉಸಿರೆಳೆದಿದ್ದಾರೆ. ಮೈಸೂರು ನಿವಾಸಿಯಾಗಿರುವ ಡಾ. ಸತೀಶ್ ರೈ […]

ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನ ಡಕ್ಕಿ ಹೊಡೆದು ವೈದ್ಯ ಮೃತ್ಯು

Saturday, July 20th, 2013
Doctor

ಮಂಗಳೂರು : ಮಂಗಳೂರು-ಮೂಡಬಿದಿರೆಯ ಹೆದ್ದಾರಿಯಲ್ಲಿರುವ  ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ಹೋಗುತ್ತಿದ್ದ  ಪಾಂಡೇಶ್ವರದ ವೈದ್ಯರೊಬ್ಬರಿಗೆ  ಡಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ  ಮೃತ  ಘಟನೆ ಶುಕ್ರವಾರ ನಡೆದಿದೆ. ಮಂಗಳೂರಿನ ಪಾಂಡೇಶ್ವರದ ನಿವಾಸಿ  ಡಾ.ಹರ್ಷವರ್ಧನ ಗಣೇಶ್ ಉಳ್ಳಾಲ್ ಮೃತಪಟ್ಟ ದುರ್ದೈವಿ.  ಗುರುವಾರ ಹರ್ಷವರ್ಧನ್ ತನ್ನ ಮೂವರು ಗೆಳೆರೊಂದಿಗೆ ಗಂಜಿಮಠದಲ್ಲಿರುವ ಗೆಳೆಯನ ಮನೆಗೆ ಹೊಗಿದ್ದರು. ಶುಕ್ರವಾರ ಮುಂಜಾನೆ ಮೂರು ಮಂದಿ ಗೆಳೆಯರು ಕಾರಿನಲ್ಲಿ ಹೊರಟರು, ಹರ್ಷವರ್ಧನ್ ಮಾತ್ರ ಗಂಜಿಮಠದಿಂದ ಮಂಗಳೂರಿಗೆ ಬೈಕ್ ನಲ್ಲೇ ತೆರಳಿದರು. ಮಂಗಳೂರು-ಮೂಡಬಿದಿರೆ […]