ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್, ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರ ವಹಿಸಲು ಸೂಚನೆ: ಸಚಿವ ಡಾ.ಕೆ.ಸುಧಾಕರ್

Saturday, September 4th, 2021
Nursing-College

  ಬೆಂಗಳೂರು :  ಹೊರಮಾವು ನರ್ಸಿಂಗ್ ಕಾಲೇಜು ಹಾಗೂ ಕೆಜಿಎಫ್ ನ ನರ್ಸಿಂಗ್ ಕಾಲೇಜಿನಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಹೊರರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 300 ಮಂದಿ ಪೈಕಿ 34 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾತ್ಕಾಲಿಕವಾಗಿ ಕಾಲೇಜು ಮುಚ್ಚಿಸಿ ಸುರಕ್ಷತಾ ಕ್ರಮ […]

ಗಡಿಭಾಗಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್

Tuesday, August 31st, 2021
Sudhakar

ಚಿಕ್ಕಬಳ್ಳಾಪುರ :  ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು ಎಂದರು. ಕೇರಳದಿಂದ […]

ಕ್ಷಯರೋಗ ಪರೀಕ್ಷೆಗೆ ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Tuesday, August 17th, 2021
Sudhakar

  ಬೆಂಗಳೂರು :  ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದರು. ಆಗಸ್ಟ್ 31 ರವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಆಂದೋಲನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೋವಿಡ್ ಸೋಂಕಿನಿಂದ ಗುಣಮುಖರಾದವರಿಗೆ ಕ್ಷಯರೋಗ ಪತ್ತೆ ಮಾಡುವ ವಿನೂತನ ಕಾರ್ಯಕ್ರಮ ಮಾಡಲಾಗಿದೆ. ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ಅವರಲ್ಲಿ ಫಾಲೋ ಅಪ್ ಮಾಡಲಾಗುವುದು. ಕೋವಿಡ್ ಶ್ವಾಸಕೋಶಕ್ಕೆ ಹೆಚ್ಚು […]

ಪಾರ್ಕಿನ್‍ಸನ್ ರೋಗಿಗಳ ಪ್ರಮಾಣ 2030 ರ ವೇಳೆಗೆ ಹೆಚ್ಚಳ : ಸಚಿವ ಡಾ.ಕೆ.ಸುಧಾಕರ್

Sunday, July 25th, 2021
Sudhakar

ಬೆಂಗಳೂರು : ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುವವರ ಪ್ರಮಾಣ 2030 ರ ವೇಳೆಗೆ ಶೇ.200-300 ರಷ್ಟು ಹೆಚ್ಚಾಗಲಿದ್ದು, ಈ ದಿಕ್ಕಿನಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕಿಂಗ್ಸ್ ಕಾಲೇಜ್ ಲಂಡನ್ ಮತ್ತು ಪಾರ್ಕಿನ್‍ಸನ್ಸ್ ರಿಸರ್ಚ್ ಅಲಯನ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಒಂದು ಲಕ್ಷ ಜನರಲ್ಲಿ 350-400 ಜನರು ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುತ್ತಿದ್ದಾರೆ. ಈ ಪ್ರಮಾಣ 2030 ರ ವೇಳೆಗೆ ಶೇ.200-300 […]

ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Thursday, July 22nd, 2021
Dr Sudhakar

ಬೆಂಗಳೂರು : ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. […]

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Friday, July 16th, 2021
Sudhakar

  ಬೆಂಗಳೂರು :  ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ […]

ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಘೋಷಣೆ

Friday, July 2nd, 2021
Arogya Soudha

ಬೆಂಗಳೂರು :  ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿ ವರ್ಷ ಸ್ಮರಿಸಲು ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700 ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು […]

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Friday, June 25th, 2021
Sudhakar

ಬೆಂಗಳೂರು : ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ. ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ […]

ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ರಾಜೀನಾಮೆ

Sunday, September 12th, 2010
ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ರಾಜೀನಾಮೆ

ಬೆಂಗಳೂರು,  : ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡರು ಹಾಸನ ಹಾಗೂ ಮೈಸೂರು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ  ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ರಾಮಚಂದ್ರಗೌಡರು ಅವರ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ್ ನಡೆದಿಲ್ಲ ಎಂದು ರಾಜ್ಯ ಹೈಕೋರ್ಟ್  ಗೆ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಆದರೆ ಆಸ್ಪತ್ರೆಗಳ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರೂ ಆಗಿರುವ ಸಚಿವ ರಾಚಂಗೌಡ ಅವರ ಅಫಿಡವಿಟ್ ಅನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಸಿಎಂ ಯಡಿಯೂರಪ್ಪ […]