ಕೂಳೂರು ನಾಗನಕಲ್ಲುಗಳಿಗೆ ಹಾನಿ, ಪುನರ್ ಪ್ರತಿಷ್ಠಾಪನೆ ಮಾಡಿದ ಕುಟುಂಬಸ್ಥರು

Sunday, December 26th, 2021
Kulooru Naganakatte

ಮಂಗಳೂರು : ಇತ್ತೀಚಿಗೆ ಕೂಳೂರುವಿನಲ್ಲಿ ನಾಗನಕಲ್ಲುಗಳಿಗೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿತ್ತು. ಇದರ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಕೂಡ ನಡೆದಿತ್ತು. ಭಾನುವಾರ ಅದೇ ಸ್ಥಳದಲ್ಲಿ ನಾಗನ ಕಲ್ಲಿನ ಪುನರ್ ಪ್ರತಿಷ್ಠಾಪನೆ, ಆಶ್ಲೇಷ ಬಲಿ, ವಟು ಆರಾಧನೆ, ನವಕ ಪ್ರಧಾನ ಹೋಮ ಮತ್ತು ತಂಬಿಲ ಸೇವೆಯ ಕಾರ್ಯಕ್ರಮಗಳು ವೈದಿಕ ಮುಖೇನ ಧಾರ್ಮಿಕ ವಿಧಿವಿಧಾನಗಳ ಮೂಲಕ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಆಗಮಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡಿದ ಕ್ರೆಡಾಯ್‌ ಮಂಗಳೂರು

Friday, May 14th, 2021
credai

ಮಂಗಳೂರು  : ಕ್ರೆಡಾಯ್ ಮಂಗಳೂರು ಘಟಕವು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಜನತೆಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಅನ್ನು ನೀಡಿದೆ. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಆಯುಕ್ತ ಅಕ್ಷಯ್ ಶ್ರೀಧರ್ ಅವರ ಉಪಸ್ಥಿತಿಯಲ್ಲಿ ಕ್ರೆಡಾಯ್ ಅಧ್ಯಕ್ಷ ಪುಪ್ಪರಾಜ್ ಜೈನ್ ಅವರು ಆಂಬುಲೆನ್ಸ್ ವಾಹನವನ್ನು ಹಸ್ತಾಂತರಿಸಿದರು. ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ಸಾರ್ವಜನಿಕರಿಗೆ ಈ ಆಂಬುಲೆನ್ಸ್ ಉಚಿತವಾಗಿ ಸೇವೆ ನೀಡಲಿದೆ. ಈ ವಾಹನದ […]

ಗಂಟಲದ್ರವ ಸಂಗ್ರಹಕ್ಕೆ ನೂತನ ಮೊಬೈಲ್ ವಾಹನ ಜಿಲ್ಲಾಡಳಿತಕ್ಕೆ ಕೊಡುಗೆ ನೀಡಿದ ವೈ ಭರತ್ ಶೆಟ್ಟಿ

Sunday, May 3rd, 2020
covid-19-bharath-shetty

ಮಂಗಳೂರು :  ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಕೊಡುಗೆಯಾಗಿ ನೀಡಿದ ಗಂಟಲದ್ರವ ಸಂಗ್ರಹ ಮೊಬೈಲ್ ನೂತನ ವಾಹನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ಭಾನುವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಮುಂದಿನ ದಿನಗಳಲ್ಲಿ ಈ ಸ್ಯಾಂಪಲ್ ಕಲೆಕ್ಷನ್ ಯೂನಿಟ್ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಗಂಟಲದ್ರವ ಸಂಗ್ರಹ ಮಾಡಲಿದೆ. ಈಗ […]

ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಒಂದು ರೂಪಾಯಿ ಕಾಣಿಕೆಯನ್ನು ಹಾಕದಿರಿ: ವೈ.ಭರತ್ ಶೆಟ್ಟಿ

Wednesday, November 21st, 2018
shabarimala

ಮಂಗಳೂರು: ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಒಂದು ರೂಪಾಯಿ ಕಾಣಿಕೆಯನ್ನು ಹಾಕದಿರಿ. ಯಾಕೆಂದರೆ ನಾವು ಹಾಕಿದ ಆ ಕಾಣಿಕೆ ಹಣವನ್ನು ಯಾವುದೇ ಕಾರಣಕ್ಕೂ ಅಲ್ಲಿನ ಸರ್ಕಾರ ಶಬರಿಮಲೆ ದೇವಸ್ಥಾನಕ್ಕೆ ಬಳಸುವುದಿಲ್ಲ ಎಂದು ಶಾಸಕ ವೈ.ಭರತ್ ಶೆಟ್ಟಿ ಹೇಳಿದರು. ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿಯಿಂದ ನಡೆದ ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ನಡೆಯುತ್ತಿದೆ ಎನ್ನಲಾದ ದೌರ್ಜನ್ಯದ ವಿರುದ್ಧ ಇಂದು ಬೆಳಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೆ ಶಬರಿಮಲೆಯಲ್ಲಿ ಪೊಲೀಸರನ್ನು ಸೆಕ್ಯುರಿಟಿಗಾಗಿ ಇಡಲಾಗುತ್ತಿತ್ತು. […]