ನಾನು ಕಾಂಗ್ರೆಸ್ಸಿಗ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸುಳ್ಳು ವದಂತಿ: ಶಾಮನೂರು
Friday, June 8th, 2018ದಾವಣಗೆರೆ: ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲ್ಲ. ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸುಳ್ಳು ವದಂತಿ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ಸಿಗ. ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರವಿಲ್ಲ. ಕ್ಷೇತ್ರದ ಕೆಲಸ ಮಾಡುವೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತಮ್ಮ ಜೊತೆ ಮಾತಾಡಿಲ್ಲ. ಉಳಿದ ಆರು ಸ್ಥಾನಗಳಿಗೆ ಸಚಿವರ ನೇಮಕ ಯಾವಾಗ ಆಗುತ್ತದೆ ಎಂದು ಹೇಳುವುದು ಕಷ್ಟ ಎಂದು ಹೇಳಿದರು.