Blog Archive

ಪಂಚೆಯುಟ್ಟು ಗದ್ದೆಗೆ ಇಳಿದು, ಉಳುಮೆ ಮಾಡಿದ ಪುತ್ತೂರು ಶಾಸಕ

Sunday, July 4th, 2021
Sanjeeva-Matandooru

ಪುತ್ತೂರು: ಕೆಲ ದಿನಗಳ ಹಿಂದೆ ಟ್ರಾಕ್ಟರ್ ಚಲಾಯಿಸಿ ಗದ್ದೆ ಉಳುಮೆಗೆ ಚಾಲನೆ ನೀಡಿ ಗಮನ ಸೆಳೆದಿದ್ದ ಶಾಸಕ ಸಂಜೀವ ಮಠಂದೂರು,   ರವಿವಾರ ಸ್ವತಃ ಗದ್ದೆಗೆ ಇಳಿದು ನೇಗಿಲು ಹಿಡಿದು ಉಳುಮೆ ಮಾಡಿದರು. ಪುತ್ತೂರು ತಾಲೂಕಿನ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲಿರುವ ಗದ್ದೆಯಲ್ಲಿ ಪಂಚೆಯುಟ್ಟು ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದು `ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ಕ್ಕೆ ಚಾಲನೆ ನೀಡಿದರು. ಆರ್ಯಾಪು ಗ್ರಾಮದ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಹಾಗೂ ಸಂಪ್ಯ ನವಚೇತನಾ ಯುವಕ ಮಂಡಲದ […]

ಗುರುಪುರ ಮಠದಗುಡ್ಡೆಯ 48 ಕುಟುಂಬಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

Tuesday, June 29th, 2021
hakkupatra

ಮಂಗಳೂರು : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದಗುಡ್ಡೆಯಲ್ಲಿ ಕಳೆದ ವರ್ಷ(ಜು. 5) ಸಂಭವಿಸಿದ ಭೂಕುಸಿತ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರದೇಶದ 48 ಕುಟುಂಬಗಳಿಗೆ ಹಾಗೂ ಅಡ್ಡೂರು ಗ್ರಾಮದ ಒಂದು ಕುಟುಂಬಕ್ಕೆ ಮಂಗಳವಾರ ಗುರುಪುರ ಕೈಕಂಬದ ಖಾಸಗಿ ಸಭಾಗೃಹವೊಂದರಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹಕ್ಕುಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಶಾಸಕನಾದ ಬಳಿಕ ಕ್ಷೇತ್ರ ವ್ಯಾಪ್ತಿಯ ಸುಮಾರು 4,000 ಕುಟುಂಬಗಳಿಗೆ ಹಕ್ಕುಪತ್ರ […]

ಲಂಡನ್ ನಿಂದ ಔಷಧ ತರಿಸಿ ಬ್ಲ್ಯಾಕ್ ಫಂಗಸ್ ರೋಗಿಗಳ ಪ್ರಾಣ ಉಳಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ

Tuesday, June 8th, 2021
bharath shetty

ಸುರತ್ಕಲ್ : ಉಳ್ಳವರು ಲಸಿಕೆಯನ್ನು ಮಿತವ್ಯಯ ದರ ನೀಡಿ ಹಾಕಿಕೊಂಡರೆ ಬಡವರಿಗೆ ಲಸಿಕೆ ಸಿಗಲು ಸಾಧ್ಯವಿದ್ದು,ಈ ನಿಟ್ಟಿನಲ್ಲಿ ಲಾರ್ಡ್ ಕೃಷ್ಣ ಎಸ್ಟೇಟ್ ನಿವಾಸಿಗಳು ಮಾಡಿರುವ ಲಸಿಕೆ ಅಭಿಯಾನ ಮಾದರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಲ್ಲಿನ ವೆಲ್ಫೇರ್ ಎಸೋಸಿಯೇಷನ್ ಆಯೋಜಿಸಿದ ಲಸಿಕೆ ಅಭಿಯಾನದಲ್ಲಿ ಮಾತನಾಡಿದ ಅವರು ಲಸಿಕೆ ಪಡೆದುಕೊಂಡರೂ ಕೋವಿಡ್ ಬರುವ ಸಾಧ್ಯತೆಯಿದ್ದರೂ ಜೀವಕ್ಕೆ ಹಾನಿಯಾದ ಪ್ರಕರಣಗಳು ವರದಿ ಆಗಿಲ್ಲ. ಹೀಗಾಗಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ ಎಂದು ನುಡಿದರು. . ಆರ್ ಎಸ್ ಎಸ್ ಮುಖಂಡರಾದ ಪ್ರಕಾಶ್ […]

ವೈದ್ಯರ ನಡೆ ಹಳ್ಳಿ ಕಡೆ ಅಭಿಯಾನಕ್ಕೆ ಗಂಜಿಮಠದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

Wednesday, June 2nd, 2021
Bharath Shetty

ಮಂಗಳೂರು  : ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಟಾಸ್ಕ್ ಪೋರ್ಸ್ ಸದಸ್ಯರು ತಮ್ಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಸಂಪರ್ಕ ಮಾಡಬೇಕು. ಅಲ್ಲಿ ಕೋವಿಡ್ 19 ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು ಎಂದು ಮಂಗಳೂರು […]

ಕೊರೊನಾ ಸೋಂಕಿತನ ಮೃತ ದೇಹವನ್ನು ತಾನೇ ಆಂಬುಲೆನ್ಸ್ ಚಲಾಯಿಸಿ ಸ್ಮಶಾನ ತಲುಪಿಸಿದ ಶಾಸಕ ರೇಣುಕಾಚಾರ್ಯ

Tuesday, June 1st, 2021
renukacharya

ದಾವಣಗೆರೆ:   ಕೊರೊನಾ ಸೋಂಕಿತನ ಮೃತ ದೇಹ ವನ್ನು ಸ್ವತಃ ಆಂಬುಲೆನ್ಸ್ ಚಲಾಯಿಸಿಕೊಂಡು ಸ್ಮಶಾನಕ್ಕೆ ಕೊಂಡೊಯ್ದು ಶಾಸಕ ರೇಣುಕಾಚಾರ್ಯ ಸಂಸ್ಕಾರ ನಡೆಸಿದ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಕರೊನಾದಿಂದ ಮೃತಪಟ್ಟ ಯುವಕನ ದೇಹವನ್ನು ತರದಂತೆ ಗ್ರಾಮಸ್ಥರು ವಿರೋಧಿಸಿದ್ದರು. ಈ ವಿಷಯವನ್ನು ತಿಳಿದ ಶಾಸಕ ರೇಣುಕಾಚಾರ್ಯ ಅವರು ಕೊನೆಗೆ ತಾವೇ ಆಂಬುಲೆನ್ಸ್ ಚಲಾಯಿಸಿಕೊಂಡು ಹೊನ್ನಾಳಿಯ ಸ್ಮಶಾನಕ್ಕೆ ಶವವನ್ನು ಕೊಂಡೊಯ್ದು ಅಲ್ಲಿ ಕುಟುಂಬಸ್ಥರ ಸಮ್ಮುಖ ಶವಸಂಸ್ಕಾರ ಮಾಡಿಸಿದ್ದಾರೆ. ಹೊನ್ನಾಳಿಯಲ್ಲಿ ನೆಲೆಸಿದ ಆಂಧ್ರಪ್ರದೇಶ ಮೂಲದ ಕುಟುಂಬವೊಂದಕ್ಕೆ  ಸೇರಿದ 31 ವರ್ಷದ ವ್ಯಕ್ತಿ ಕರೊನಾ ಸೋಂಕಿತನಾಗಿ ಚಿಕಿತ್ಸೆ ಪಡೆಯುತ್ತಿದ್ದು  ಚಿಕಿತ್ಸೆ […]

ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ

Monday, May 24th, 2021
Manjeshwara MLA Asraf

ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬಹುಪಾಲು ಮಂದಿ ಕನ್ನಡಿಗರಿದ್ದಾರೆ. ಈ ಜಿಲ್ಲೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿ ಕೊಂಡಿರುವುದರಿಂದ ಕನ್ನಡ ಭಾಷೆಯ ಪ್ರಭಾವ ಇಲ್ಲಿ ಹೆಚ್ಚು. ಭೌಗೋಳಿಕವಾಗಿ ಕೇರಳಕ್ಕೆ ಸೇರಿದ್ದರೂ ಕೂಡ […]

ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರು ಅಪಘಾತ, ಖಾದರ್ ಹಾಗೂ ಕಾರು ಚಾಲಕನಿಗೆ ಗಾಯ

Wednesday, April 14th, 2021
UT Khader

ಮಂಗಳೂರು : ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ ಕಾರು  ಬುಧವಾರ ಬೆಳಗ್ಗೆ 8:45ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಕೂಡಾ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ-ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4ರ ಒಲಾಲ್ ಕ್ರಾಸ್ ಬಳಿ ಖಾದರ್ […]

ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು – ಶಾಸಕ ಕಾಮತ್

Friday, November 27th, 2020
Vedavyas

ಮಂಗಳೂರು  : ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಪರ ಬರಹಗಳು ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಅಧಿಕಾರಿಗಳ‌ಜೊತೆ ಚರ್ಚಿಸಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿಯಾಗಿದೆ. ಇಂತಹ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ […]

ಬಿಜೆಪಿ ಶಾಸಕರೊಬ್ಬರ ಸಂಬಂಧಿ ಮುಡಿಪು ಬಳಿ ಗಣಿಗಾರಿಕೆ ನಡೆಸುತ್ತಿರುವುದು ವಿಪರ್ಯಾಸ : ರಮಾನಾಥ ರೈ

Sunday, October 18th, 2020
Ramanatha Rai

ಮಂಗಳೂರು: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ  ಹೇಳಿದ್ದಾರೆ . ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು  ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ […]

ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಕೊರೊನಾ ದೃಢ

Friday, September 18th, 2020
umanath kotian

ಮಂಗಳೂರು: ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆ. ಇದಕ್ಕೆ ಮೊದಲು ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜಾ, ಅಂಗಾರ ಅವರಿಗೂ […]