Blog Archive

ಶಿಕ್ಷಣದ ಜೊತೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ : ಶಾಸಕ ಅಬ್ಬಯ್ಯ ಪ್ರಸಾದ್

Saturday, September 5th, 2020
Teachers day

ಹುಬ್ಬಳ್ಳಿ : ಶಿಕ್ಷಕರು ದೇಶದ ನಿರ್ಮಾತೃಗಳು. ಪ್ರತಿಯೊಬ್ಬರ ಜೀವನವನ್ನು ರೂಪಿಸುವ ಶಿಕ್ಷಕ ವೃತ್ತಿಗೆ ಪ್ರಥಮ ಆದ್ಯತೆಯಿದೆ. ಇಂದಿನ ಮಕ್ಕಳಲ್ಲಿ ಪುಸ್ತಕ ಜ್ಞಾನ ಹೆಚ್ಚುತ್ತಿದೆ. ಆದರೆ ಉತ್ತಮ ಸಂಸ್ಕಾರ ಬೆಳವಣಿಗೆಯಾಗುತ್ತಿಲ್ಲ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಶಿಕ್ಷಕರು ಬೆಳಸಬೇಕು ಎಂದು ಶಾಸಕ ಅಬ್ಬಯ್ಯ ಪ್ರಸಾದ್ ಹೇಳಿದರು. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ, ನಗರದ ಘಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ […]

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ

Saturday, August 29th, 2020
Kamaruddin

ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]

ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು

Tuesday, August 18th, 2020
Zameer Ahmed

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್ ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಹಿಂದೂ ದೇವತೆಗಳ ಅವಹೇಳನ : ಶಾಸಕ ಮುರುಗೇಶ ನಿರಾಣಿ ಹೇಳಿದ್ದೇನು

Wednesday, July 22nd, 2020
murugesh Nirani

ಬೆಂಗಳೂರು: ತಮ್ಮ ವಾಟ್ಸ್‌ ಅಪ್‌ ಮೂಲಕ ಹಿಂದೂ ದೇವ ದೇವತೆಗಳ ಅವಹೇಳನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುರುಗೇಶ ನಿರಾಣಿ ಕ್ಷಮೆಯಾಚಿಸಿದ್ದಾರೆ. ಅವಹೇಳನ ಮಾಡಲಾದ ಸಂದೇಶದ ಸ್ಕ್ರೀನ್‌ ಶಾಟ್‌ ನ್ನು ಕೆಲ ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶಕುಮಾರ್‌ ಅವರು ವಾಟ್ಸ್‌ ಅಪ್‌ ಗ್ರುಪ್‌ ನಲ್ಲಿ ಪೋಸ್ಟ್‌ ನೋಡಿ ಗ್ರುಪ್‌ ನಿಂದ ಎಕ್ಸಿಟ್‌ ಆಗಿದ್ದಾರೆ. ಮಾಜಿ ಸಚಿವರೂ ಆಗಿರುವ ಶಾಸಕ ನಿರಾಣಿ ಈ ಸಂಬಂಧ ಸಾರ್ವಜನಿಕರ ಕ್ಷಮೆಯಾಚಿಸುವ […]

ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ‌ಪೋಸ್ಟ್ ​​​ಉದ್ಘಾಟಿಸಿದ ಶಾಸಕ ಎಸ್.ಅಂಗಾರ

Wednesday, July 15th, 2020
s Angara

ಸುಳ್ಯ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ‌ಪೋಸ್ಟ್ ಅನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಇಲ್ಲಿ ಒಂದು ಸುಸಜ್ಜಿತವಾದ ಚೆಕ್ ಪೋಸ್ಟ್ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳು, ಪುತ್ತೂರು ಉಪ ಆಯುಕ್ತರು, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆಗೆ ಉಪ್ಪಿನಂಗಡಿ ಠಾಣಾಧಿಕಾರಿ ಈರಯ್ಯ ಅವರು ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಉಪ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗ್ಸ್, ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಉಮೇಶ್ […]

ಚಂದ್ರಶೇಖರ ಸ್ವಾಮಿಯನ್ನು ನಂಬಿ ಶಾಸಕನಾಗುವ ಕನಸು ಕಾಣುತ್ತಿರುವ ದೇವಿಪ್ರಸಾದ!

Monday, September 14th, 2015
DeviPrasad

ಉಡುಪಿ : ಬೆಂಗಳೂರಿನ ವಾಸ್ತು ತಜ್ಙ, ಅಂತರಾಷ್ಟ್ರೀಯ ಜ್ಯೋತಿಷಿ ಮೂಲ್ಕಿಯ ಚಂದ್ರಶೇಖರ್ ಸ್ವಾಮೀಜಿಯ ಕೈ ಹಿಡಿದು ಶಾಸಕನಾಗುವ ಕನಸು ಕಾಣುತ್ತಿರುವ ಬೆಳಪು ದೇವಿಪ್ರಸಾದ್ ಶೆಟ್ಟಿಯ ನಡೆ ನಿಜಕ್ಕೂ ಫಲಪ್ರದವಾಗಿಯೇ ಬಿಡುತ್ತದೆ ಎನ್ನುವುದು ಮೇಲ್ನೋಟಕ್ಕೆ ಖಾತ್ರಿಯಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಸಚಿವ ಅಭಯಚಂದ್ರ ಜೈನ್ ಚುನಾವಣೆಗೆ ಸ್ಪರ್ಧಿಸುವುದು ಸಂಶಯವಾಗಿರುವ ನಿಟ್ಟಿನಲ್ಲಿ ದೇವಿಪ್ರಸಾದ್ ಶೆಟ್ಟಿಯ ನಡೆ ಕುತೂಹಲಕಾರಿಯಾಗಿದೆ. ಚಂದ್ರಶೇಖರ್ ಸ್ವಾಮಿಜಿ, ಗುರೂಜಿ ಎಂದು ಹೀಗೆ ಕರೆಸಿಕೊಳ್ಳುತ್ತಾ ಬೆಂಗಳೂರಿನ ಅಷ್ಟೂ ರಾಜಕಾರಣಿಗಳ ಡಾರ್ಲಿಂಗ್ ಆಗಿರುವ ಚಂದ್ರಶೇಖರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ […]

ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

Tuesday, September 21st, 2010
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

ಬೆಂಗಳೂರು : ಚಿಕ್ಕಮಗಳೂರು ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಗೊಂಡಿದೆ. ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದು ಬೆಳಿಗ್ಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ಜೊತೆ ಮಾತುಕತೆ […]